ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
Asha Bhosle: ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆಶಾ ಭೋಸ್ಲೆ -
ಮುಂಬೈ: ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 92 ವರ್ಷದ ಆಶಾ ಭೋಸ್ಲೆ ಅವರ ಅವರ ಕುಟುಂಬ ವರ್ಗದವರು ಆಸ್ಪತ್ರೆಯಲ್ಲಿದ್ದು, ಹೆಚ್ಚಿನ ಮಾಹಿತಿ ಹೊರಬೀಳಬೇಕಾಗಿದೆ.
ಸೆಪ್ಟೆಂಬರ್ 8, 1933 ರಂದು ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು ಮತ್ತು ವಿಶ್ವದ ಅತ್ಯಂತ ಹೆಚ್ಚು ರೆಕಾರ್ಡ್ ಮಾಡಲಾದ ಕಲಾವಿದರಲ್ಲಿ ಆಶಾ ಒಬ್ಬರೆನಿಸಿದ್ದಾರೆ. ಹಿಂದಿ, ಮರಾಠಿ, ಬಂಗಾಳಿ ಮತ್ತು ಗುಜರಾತಿ ಸೇರಿದಂತೆ ಬಹು ಭಾಷೆಗಳಲ್ಲಿ ಸಾವಿರಾರು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಶಾಸ್ತ್ರೀಯ ಮತ್ತು ಗಜಲ್‌ಗಳಿಂದ ಪಾಪ್, ಕ್ಯಾಬರೆ ಮತ್ತು ಜಾನಪದದವರೆಗೆ ವಿವಿಧ ಪ್ರಕಾರ ಹಾಡನ್ನು ಹಾಡಿದ್ದಾರೆ.
ಕೇವಲ ಹಾಡು ಮಾತ್ರವಲ್ಲ ಆಶಾ ನಟನೆಗೂ ಕಾಲಿಟ್ಟಿದ್ದರು. 2013 ರಲ್ಲಿ, ಮಾಯಿ ಎಂಬ ಮರಾಠಿ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದು, ಇವುಗಳಲ್ಲಿ 7 ಫಿಲ್ಮ್‌ಫೇರ್ ಪ್ರಶಸ್ತಿಗಳು, ವಿಶೇಷವಾಗಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ, ಮತ್ತು ಜೀವಮಾನ ಸಾಧನೆ ಪ್ರಶಸ್ತಿ ಸೇರಿವೆ. ಹೆಚ್ಚುವರಿಯಾಗಿ, ಅವರು 2000 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು 2008 ರಲ್ಲಿ ಪದ್ಮವಿಭೂಷಣದಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.