Jai Movie: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸಿನಿಮಾದಲ್ಲಿ ಸುನಿಲ್ ಶೆಟ್ಟಿ: ಟೀಸರ್ ಬಿಡುಗಡೆ
ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಜೈ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ. ನಟ ಶ್ರೀಮುರಳಿ ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಬಾಲಿವುಡ್ ನಟ ಸುನಿಲ್ ಶೆಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಭಾಷೆಯ ಅಭಿಮಾನದಿಂದ ಒಂದು ರೂಪಾಯಿಯೂ ಪಡೆಯದೇ ನಮ್ಮ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Jai Movie Teaser -

ಕನ್ನಡ ಚಿತ್ರರಂಗದ ಭರವಸೆಯ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಹೆಚ್ಚಾಗಿ ಒಳ್ಳೆಯ ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೆ ಕಷ್ಟದಲ್ಲಿದ್ದ ಕುಟುಂಬವೊಂದಕ್ಕೆ ನೆರವಾಗಿ ತಮ್ಮ ಜನ್ಮದಿನದಂದು ಒಂದು ಬಡಕುಟುಂಬಕ್ಕೆ ಮನೆ ಮನೆ ಕಟ್ಟಿ ಗೃಹ ಪ್ರವೇಶ ಕೂಡ ಮಾಡಿದ್ದರು. ಇದೀಗ ಅವರೇ ನಟಿಸಿ ನಿರ್ದೇಶಿಸಿರುವ ಹೊಸ ಜೈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ವಿಶೇಷ ಎಂದರೆ ಈ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅಭಿನಯಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ತುಳು ಭಾಷೆಯಲ್ಲಿ ರಿಲೀಸ್ ಆಗಲಿದೆ.
ಹೌದು, ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಜೈ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ. ನಟ ಶ್ರೀಮುರಳಿ ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಬಾಲಿವುಡ್ ನಟ ಸುನಿಲ್ ಶೆಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಭಾಷೆಯ ಅಭಿಮಾನದಿಂದ ಒಂದು ರೂಪಾಯಿಯೂ ಪಡೆಯದೇ ನಮ್ಮ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕೇವಲ ಗೆಸ್ಟ್ ರೋಲ್ ಅಲ್ಲದೇ, ಸುಮಾರು 18 ನಿಮಿಷಗಳ ಕಾಲ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.
ಚಿತ್ರದ ನಟ-ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, ‘‘ಇದು ನನ್ನ ನಿರ್ದೇಶನದ ಮೂರನೇ ಚಿತ್ರ. ಈ ಹಿಂದೆ ನಾನು ಗಿರ್ಗಿಟ್, ಸರ್ಕಸ್ ಎಂಬ ಚಿತ್ರ ಮಾಡಿದ್ದೆ. ಅವು ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಂಡಿದ್ದು, ಇದೀಗ ಜೈ ಚಿತ್ರವನ್ನು ನಿರ್ದೇಶಿಸಿದ್ದೇನೆ. ಹಾಗೇ, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದೇನೆ. ಇದೊಂದು ಕರಾವಳಿ ಭಾಗದ ಲೋಕಲ್ ಪೊಲಿಟಿಕಲ್ ಕಂಟೆಂಟ್ ಇರುವ ಚಿತ್ರ. ತುಳು ಭಾಷೆಯಲ್ಲಿ ಸಿದ್ಧವಾಗಿದ್ದು, ಕನ್ನಡಕ್ಕೆ ಡಬ್ ಮಾಡಿದ್ದೇವೆ’’ ಎಂದು ತಿಳಿಸಿದರು.
ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ದೀಕ್ಷಿತ್ ಸಹ ನಿರ್ಮಾಪಕರಾಗಿದ್ದಾರೆ. ಇನ್ನು ಚಿತ್ರಕಥೆಯನ್ನು ರೂಪೇಶ್ ಶೆಟ್ಟಿ, ವೇಣು ಹಸ್ರಳ್ಳಿ ಅವರು ಬರೆದಿದ್ದಾರೆ. ಮೂರು ಹಂತದಲ್ಲಿ ಚಿತ್ರೀಕರಣ ಮುಗಿಸಿದ ಜೈ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ, ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮೊದಲಾದವರು ಅಭಿನಯಿಸಿದ್ದಾರೆ.
Rajath Kishan: ಕ್ಯಾನ್ಸರ್ ವಿಷಯ ತಿಳಿದು ಹರೀಶ್ ರಾಯ್ ಮನೆಗೆ ರಜತ್ ಕಿಶನ್ ದಿಢೀರ್ ಭೇಟಿ