Soorappa Babu: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕನ ವಿರುದ್ಧ FIR
Sandalwood producer Soorappa Babu: ನಿರ್ಮಾಪಕ ಸೂರಪ್ಪ ಬಾಬು ಅವರು ಬಿಗ್ ಬಜೆಟ್ ಸಿನಿಮಾ ತೆಗೆಯುವುದಾಗಿ ಹೇಳಿಕೊಂಡಿದ್ದರು. ಹಿರಿಯ ನಟರಾದ ಶಿವರಾಜಕುಮಾರ್ ಹಾಗೂ ಗಣೇಶ್ ಅವರನ್ನು ಹಾಕಿಕೊಂಡು ‘ಪ್ರೊಡಕ್ಷನ್ ನಂಬರ್ 06’ ಚಿತ್ರ ನಿರ್ಮಿಸುತ್ತಿರುವುದಾಗಿ ನಂಬಿಸಿ 92.50 ಲಕ್ಷ ರೂ. ಪಡೆದುಕೊಂಡಿದ್ದರು.


ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಾಧಾರದಲ್ಲಿ ಸೂರಪ್ಪ ಬಾಬು(Soorappa Babu) ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ತಲಕಾವೇರಿ ಲೇಔಟ್ ನಿವಾಸಿ ಎಚ್.ಜಿ. ಲಕ್ಷ್ಮೀ ಅವರು ದೂರು ನೀಡಿದ್ದು, ಸಿನಿಮಾ ನಿರ್ಮಾಣಕ್ಕೆಂದು ಪಡೆದ ಸಾಲ ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಏನಿದು ಪ್ರಕರಣ?
ನಿರ್ಮಾಪಕ ಸೂರಪ್ಪ ಬಾಬು ಅವರು ಬಿಗ್ ಬಜೆಟ್ ಸಿನಿಮಾ ತೆಗೆಯುವುದಾಗಿ ಹೇಳಿಕೊಂಡಿದ್ದರು. ಹಿರಿಯ ನಟರಾದ ಶಿವರಾಜಕುಮಾರ್ ಹಾಗೂ ಗಣೇಶ್ ಅವರನ್ನು ಹಾಕಿಕೊಂಡು ‘ಪ್ರೊಡಕ್ಷನ್ ನಂಬರ್ 06’ ಚಿತ್ರ ನಿರ್ಮಿಸುತ್ತಿರುವುದಾಗಿ ನಂಬಿಸಿ 92.50 ಲಕ್ಷ ರೂ. ಪಡೆದುಕೊಂಡಿದ್ದರು. ಈ ಪೈಕಿ 25 ಲಕ್ಷ ರೂ. ಮಾತ್ರ ಹಿಂದಿರುಗಿಸಿ, ಉಳಿದ ಮೊತ್ತವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಎಚ್.ಜಿ. ಲಕ್ಷ್ಮೀ ದೂರಿನಲ್ಲಿ ತಿಳಿಸಿದ್ದಾರೆ.