ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkanna Marriage: ಕಾಮಿಡಿ ಕಿಂಗ್ ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್! ಇಲ್ಲಿದೆ ಡಿಟೇಲ್ಸ್‌

Chikkanna Marriage: ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ. ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. 'ಕಿರಾತಕ' ಸಿನಿಮಾ ಅವರ ಸಿನಿ ಬದುಕಿಗೆ ದೊಡ್ಡ ತಿರುವು ನೀಡಿತು. ಬಳಿಕ 'ರಾಜಾಹುಲಿ', 'ಅಧ್ಯಕ್ಷ', 'ಕೋಟಿಗೊಬ್ಬ 2' ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಹಾಸ್ಯದಿಂದ ಪ್ರೇಕ್ಷಕರ ಮನ ಗೆದ್ದರು.

ಕಾಮಿಡಿ ಕಿಂಗ್ ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್!

ಚಿಕ್ಕಣ್ಣ -

Yashaswi Devadiga
Yashaswi Devadiga Jul 30, 2026 11:07 AM

ಸ್ಯಾಂಡಲ್‌ವುಡ್‌ನ (Sandalwood) ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ (chikkanna) ವಿವಾಹ ದಿನಾಂಕ ಇದೀಗ ಅಂತಿಮವಾಗಿದೆ . ಆಗಸ್ಟ್‌ 29 ಮತ್ತು 30ರಂದು ಮೈಸೂರಿನಲ್ಲಿ ಅದ್ಧೂರಿ ವಿವಾಹ (Marriage) ಸಂಭ್ರಮ ನಡೆಯಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು ಪಾವನಾ ಸದ್ಯ ಚಿಕ್ಕಣ್ಣ ಅವರ ಕೈಹಿಡಿಯಲಿರುವ ವಧು. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ (Pavana) ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದಾರೆ.

ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ನಡೆಯಲಿದೆ. ಈ ಮದುವೆ ಮಹೋತ್ಸವದಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ ನಟ-ನಟಿಯರು, ತಂತ್ರಜ್ಞರು ಹಾಗೂ ಗಣ್ಯರು ಭಾಗವಹಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Ramayana trailer reactions: ಯಶ್‌ಗೆ ಪ್ರಶಂಸೆ, ಆದ್ರೆ ಇವರನ್ನ ಮಿಸ್ ಮಾಡ್ಕೊಳ್ತಿದ್ದಾರೆ ವೀಕ್ಷಕರು!

ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ. ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.

'ಕಿರಾತಕ' ಸಿನಿಮಾ ಅವರ ಸಿನಿ ಬದುಕಿಗೆ ದೊಡ್ಡ ತಿರುವು ನೀಡಿತು. ಬಳಿಕ 'ರಾಜಾಹುಲಿ', 'ಅಧ್ಯಕ್ಷ', 'ಕೋಟಿಗೊಬ್ಬ 2' ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಹಾಸ್ಯದಿಂದ ಪ್ರೇಕ್ಷಕರ ಮನ ಗೆದ್ದರು. ಯಶ್ ಅಭಿನಯದ ಕಿರಾತಕ ಮೂಲಕ ದೊಡ್ಡ ಮಟ್ಟದ ಗುರುತಿಸಿಕೊಂಡ ಚಿಕ್ಕಣ್ಣ, ನಂತರ ತಮ್ಮದೇ ಆದ ಕಾಮಿಡಿ ಟೈಮಿಂಗ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ವಿಶೇಷ ಸ್ಥಾನ ಪಡೆದುಕೊಂಡರು.

.ಮೈಸೂರಿನ ದೃಶ್ಯ ಕಲಾವಿದೆ ತಂಡದಲ್ಲಿ ಕಾಮಿಡಿ ಶೋಗಳನ್ನು ಮಾಡುತ್ತಾ ತಮ್ಮ ಕಲಾಜೀವನ ಆರಂಭಿಸಿದರು. ಈ ತಂಡದ ಮೂಲಕ ಹಲವು ಹಬ್ಬ-ಹರಿದಿನಗಳು ಮತ್ತು ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಿದ್ದ ಚಿಕ್ಕಣ್ಣ ನಂತರ ಉದಯ ಟಿವಿಯಲ್ಲಿ ಒಂದು ಕಾಮಿಡಿ ಶೋನಲ್ಲಿ ಕಾರ್ಯನಿರ್ವಹಿಸಿದರು.

ಇದನ್ನೂ ಓದಿ: Amruthdhaare Serial: ವಿಧಿಯ ಸವಾಲಿನೆದುರು ಕುಗ್ಗೋಳಲ್ಲ ಗಟ್ಟಿಗಿತ್ತಿ ಭೂಮಿ! ಭಾವುಕರಾದ ಫ್ಯಾನ್ಸ್

ಅಲ್ಲಿಂದ ಸುಮಾರು 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದ ಬಹುತೇಕ ಎಲ್ಲಾ ನಟರೊಂದಿಗೆ ತೆರೆ ಹಂಚಿಕೊಂಡಿರುವ ಚಿಕ್ಕಣ್ಣ ಕಿರುತೆರೆಯಲ್ಲಿ ಖಳನಾಗಿ ಕೂಡ ಅಭಿನಯಿಸಿದ್ದಾರೆ.