Dharmendra Discharged: ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮನೆಯಲ್ಲಿಯೇ ಚಿಕಿತ್ಸೆ
ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿರುವ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ವದಂತಿ ಸುದ್ದಿ ವೈರಲ್ ಆಗಿತ್ತು. ಬಳಿಕ ಧಮೇಂದ್ರ ಅವರ ಆರೋಗ್ಯದ ಬಗ್ಗೆ ಪತ್ನಿ ಹೇಮಮಾಲಿನಿ (Hema Malini) ಅಪ್‌ಡೇಟ್ ಕೊಟ್ಟಿದ್ದರು. ಇದೀಗ ಧರ್ಮೇಂದ್ರ (Dharmendra) ಅವರನ್ನು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎನ್ನಲಾಗಿದೆ. ಕುಟುಂಬವು ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಿದೆ. ಪುತ್ರರಾದ ಸನ್ನಿ ಡಿಯೋಲ್ (Sunny Deol) ಮತ್ತು ಬಾಬಿ ಡಿಯೋಲ್ ಸೇರಿದಂತೆ ಅವರ ಕುಟುಂಬವು ನಟನನ್ನು ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದೆ ಎನ್ನಲಾಗಿದೆ.
ನಟ ಧರ್ಮೇಂದ್ರ -
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ (Dharmendra discharged) ಮಾಡಲಾಗಿದೆ ಎಂದು ವೈದ್ಯರು ಬುಧವಾರ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಪುತ್ರರಾದ ಸನ್ನಿ ಡಿಯೋಲ್ (Sunny Deol) ಮತ್ತು ಬಾಬಿ ಡಿಯೋಲ್ ಸೇರಿದಂತೆ ಅವರ ಕುಟುಂಬವು ನಟನನ್ನು ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದೆ ಎನ್ನಲಾಗಿದೆ.
ಧರ್ಮೇಂದ್ರ ಡಿಸ್ಚಾರ್ಜ್
ವರದಿಯ ಪ್ರಕಾರ ಧರ್ಮೇಂದ್ರ ಅವರನ್ನು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎನ್ನಲಾಗಿದೆ. ಕುಟುಂಬವು ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಿದೆ ಎಂದು ಡಾ. ಪ್ರತೀತ್ ಸಮ್ದಾನಿ ಪಿಟಿಐಗೆ ತಿಳಿಸಿದ್ದಾರೆ.
ಧರ್ಮೇಂದ್ರ ಅವರ ನಿವಾಸಕ್ಕೆ ಆಂಬ್ಯುಲೆನ್ಸ್ ಬಂದು ಹೋಗುವುದನ್ನು ತೋರಿಸುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಈ ಅಪ್‌ಡೇಟ್ ಬಂದಿದೆ.
ಸುಳ್ಳು ವದಂತಿ
ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿರುವ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ವದಂತಿ ಸುದ್ದಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ ಹಾಗೂ ಅವರ ಧರ್ಮಪತ್ನಿ ಹೇಮಾ ಮಾಲಿನಿ ಸಾಮಾಜಿಕ ಮಾಧ್ಯಮಗಳ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.
ಇದನ್ನೂ ಓದಿ: Dharmendra: ನಟ ಧರ್ಮೇಂದ್ರ ಬಳಿ ಎಷ್ಟು ಮೊತ್ತದ ಆಸ್ತಿ ಇದೆ ಗೊತ್ತಾ? ಇಲ್ಲಿದೆ ಡಿಟೇಲ್ಸ್
#WATCH | Maharashtra: Actor Bobby Deol leaves from Breach Candy Hospital in Mumbai, where his father and veteran actor Dharmendra is admitted. pic.twitter.com/aunfeKsOhM
— ANI (@ANI) November 11, 2025
ಹೇಮಾ ಮಾಲಿನಿ ಗರಂ ಪೋಸ್ಟ್
ಮೊದಲಿಗೆ, ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಧರ್ಮೇಂದ್ರ ಪತ್ನಿ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ, "ಇದನ್ನು ಕ್ಷಮಿಸಲಾಗುವುದಿಲ್ಲ! ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿತನ. ದಯವಿಟ್ಟು ಕುಟುಂಬಕ್ಕೆ ಅವರ ಗೌಪ್ಯತೆಗೆ ಸರಿಯಾದ ಗೌರವ ನೀಡಿ" ಎಂದು ಬರೆದಿದ್ದರು.
ಪುತ್ರಿ ಇಶಾ ಡಿಯೋಲ್ ಪೋಸ್ಟ್
ಇದರ ಬೆನ್ನಲ್ಲೇ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ರೀತಿ ಬರೆದಿದ್ದಾರೆ. "ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಹರಡುತ್ತಿವೆ ಎಂದು ತೋರುತ್ತಿದೆ. ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದ ಗೌಪ್ಯತೆಗೆ ಎಲ್ಲರೂ ಗೌರವವನ್ನು ನೀಡಿ. ನನ್ನ ತಂದೆ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿರುವವರಿಗೆ ಧನ್ಯವಾದಗಳು" ಎಂದು ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ: Bigg Boss Kannada 12: ಗಿಲ್ಲಿ- ಕಾವ್ಯ ದೋಸ್ತಿ ಕಟ್? ಕಾವು ಜೊತೆ ಇನ್ಮುಂದೆ ಮಾತನಾಡುವುದಿಲ್ವಂತೆ ಗಿಲ್ಲಿ!
ಅರ್ಜುನ್ ಹಿಂಗೋರಾಣಿಯವರ ದಿಲ್ ಭಿ ತೇರಾ ಹಮ್ ಭಿ ತೇರೆ ಚಿತ್ರದ ಮೂಲಕ ಕಲಾ ಬದುಕನ್ನು ಪ್ರಾರಂಭಿಸಿದ ಧರ್ಮೇಂದ್ರ ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದು, ತಮ್ಮ ವೃತ್ತಿಜೀವನದಲ್ಲಿ 238 ಚಿತ್ರಗಳಲ್ಲಿ ನಟಿಸಿದ್ದಾರೆ. ಇದರಲ್ಲಿ 93 ಚಿತ್ರಗಳು ಹಿಟ್ ಆಗಿವೆ.