Gilli Nata: ಹಳ್ಳಿಯ ರೈತನ ಮಗನಾಗಿ ಹುಟ್ಟಿ ಮನಗೆದ್ದ ಗಿಲ್ಲಿಗೆ ಹೆಚ್ಚಿನ ಕೀರ್ತಿ ಬರಲಿ ! ಹೆಚ್ ಡಿ ಕುಮಾರಸ್ವಾಮಿ ಶುಭ ಹಾರೈಕೆ
HD Kumaraswamy : ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ಅದ್ಧೂರಿಯಾಗಿ ನೆರವೇರಿದೆ. ಗಿಲ್ಲಿ ನಟ ಈ ಸೀಸನ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ರನ್ನರ್ ಅಪ್ ರಕ್ಷಿತಾ ಆಗಿದ್ದಾರೆ ಕೋಟ್ಯಂತರ ವೋಟುಗಳು ಗಿಲ್ಲಿಗೆ ಬಂದಿವೆ. ಗಿಲ್ಲಿಗೆ ಶುಭಾಷಯ ಮಳೆ ಬರ್ತಾ ಇದೆ. ಇದೀಗ ಹೆಚ್ ಡಿ ಕುಮಾರಸ್ವಾಮಿ ಅವರು ಗಿಲ್ಲಿ ಹಾಗೂ ರಕ್ಷಿತಾ ಅವರಿಗೆ ವಿಶ್ ಮಾಡಿದ್ದಾರೆ.
ಬಿಗ್ ಬಾಸ್ ಕನ್ನಡ -
ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss Kannada 12 Runner Up) ಗ್ರ್ಯಾಂಡ್ ಫಿನಾಲೆ (Grand Finale) ಅದ್ಧೂರಿಯಾಗಿ ನೆರವೇರಿದೆ. ಗಿಲ್ಲಿ ನಟ ಈ ಸೀಸನ್ ವಿನ್ನರ್ (Gilli Nata Winner) ಆಗಿ ಹೊರಹೊಮ್ಮಿದ್ದಾರೆ. ರನ್ನರ್ ಅಪ್ ರಕ್ಷಿತಾ ಆಗಿದ್ದಾರೆ ಕೋಟ್ಯಂತರ ವೋಟುಗಳು ಗಿಲ್ಲಿಗೆ ಬಂದಿವೆ. ಗಿಲ್ಲಿಗೆ ಶುಭಾಷಯ ಮಳೆ ಬರ್ತಾ ಇದೆ. ಇದೀಗ ಹೆಚ್ ಡಿ ಕುಮಾರಸ್ವಾಮಿ (hd kumaraswamy) ಅವರು ಗಿಲ್ಲಿ ಹಾಗೂ ರಕ್ಷಿತಾ (Rakshitha Shetty) ಅವರಿಗೆ ವಿಶ್ ಮಾಡಿದ್ದಾರೆ.
ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ
ಟ್ವೀಟ್‌ನಲ್ಲಿ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು.
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ.
ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ರಕ್ಷಿತಾ ಅವರಿಗೆ ಸಿಕ್ಕ ಬಹುಮಾನ ಏನು?
ರಕ್ಷಿತಾ ಅವರಿಗೆ ಸಾಯಿ ಗೋಲ್ಡ್ ಪ್ಯಾಲೆಸ್ ವತಿಯಿಂದ 20 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯ್ತು. ಖುದ್ದು ಟಿಎ ಶರವಣ ಅವರು ವೇದಿಕೆಗೆ ಆಗಮಿಸಿ ರಕ್ಷಿತಾ ಅವರಿಗೆ 20 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು. ಅದಾದ ಬಳಿಕ ಜಾರ್ ಅಪ್ಲಿಕೇಶನ್ನ ವತಿಯಿಂದ ರಕ್ಷಿತಾ ಅವರಿಗೆ ಐದು ಲಕ್ಷ ರೂಪಾಯಿ ನಗದು ಹಣವನ್ನು ಉಡುಗೊರೆಯಾಗಿ ಸಹ ನೀಡಲಾಯ್ತು.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 18, 2026
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ… pic.twitter.com/qBOoOrxCPd
ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada 12) ಗಿಲ್ಲಿ ನಟ ಚಾಂಪಿಯನ್ ಆಗಿದ್ದರಿಂದ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋದ ಬಿಗ್‌ಬಾಸ್ ಹೌಸ್ ಬಳಿ ಭಾನುವಾರ ರಾತ್ರಿ ಸಾವಿರಾರು ಅಭಿಮಾನಿಗಳು ಜಮಾಯಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಸಂಜೆಯೇ ಜಾಲಿವುಡ್ ಸ್ಟುಡಿಯೋದ ಎರಡೂ ಗೇಟ್ಗಳ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿ, ಗಿಲ್ಲಿ ಪರ ಜೈಕಾರ ಹಾಕಿ ಘೋಷಣೆಗಳನ್ನು ಕೂಗಿದರು. ಈ ವೇಳೆ ನೂಕುನುಗ್ಗಲು ಸಂಭವಿಸಿದ್ದರಿಂದ ಜನಸಂದಣಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.