ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷ ಪೂರೈಸಿದ ʻಗೋಲ್ಡನ್‌ ಸ್ಟಾರ್‌ʼ ಗಣೇಶ್‌; ತುಮಕೂರಿನಲ್ಲಿ ಸಾಂಗ್‌ ರಿಲೀಸ್‌ ಮಾಡಿ ಸಂಭ್ರಮಿಸಿದ ʻಬೃಂದಾ ವಿಹಾರಿʼ ಟೀಮ್

ಸ್ಯಾಂಡಲ್‌ವುಡ್‌ನ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗದಲ್ಲಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂಭ್ರಮವನ್ನು ಅವರ ಮುಂಬರುವ ಚಿತ್ರ 'ಬೃಂದಾ ವಿಹಾರಿ' ತಂಡವು ತುಮಕೂರಿನಲ್ಲಿ ಅದ್ದೂರಿಯಾಗಿ ಆಚರಿಸಿತು. ಇದೇ ವೇದಿಕೆಯಲ್ಲಿ ಸಿದ್ ಶ್ರೀರಾಮ್ ಹಾಡಿರುವ 'ರಾಧಾ ರಾಧಾ' ಹಾಡನ್ನು ಬಿಡುಗಡೆ ಮಾಡಲಾಯಿತು.

ʻನಾನು ಚಿತ್ರರಂಗಕ್ಕೆ ಬರಲು ಕಾಮಿಡಿ ಟೈಮ್‌ ಶೋ ಕಾರಣʼ ಎಂದ ನಟ ಗಣೇಶ್‌

-

Avinash GR
Avinash GR May 4, 2026 12:06 PM

20‌ ವರ್ಷಗಳ ಹಿಂದೆ ಕಾಮಿಡಿ ಟೈಮ್‌ ಮೂಲಕ ಫೇಮಸ್‌ ಆಗಿದ್ದ ನಟ ಗಣೇಶ್‌ ಆನಂತರ ಗೋಲ್ಡನ್‌ ಸ್ಟಾರ್‌ ಆಗಿ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದರು. ಚೆಲ್ಲಾಟ ಸಿನಿಮಾದ ಮೂಲಕ ಹೀರೋ ಆದರು. ಇದೀಗ ಅವರ ಜರ್ನಿಗೆ 20 ವರ್ಷ ಆಗಿದೆ. ಆ ಹಿನ್ನೆಲೆಯಲ್ಲಿ ಅಭಿಮಾನಿಗಳು ಗಣೇಶ್‌ಗೆ ಶುಭಾಶಯ ತಿಳಿಸುತ್ತಿದ್ದಾರೆ. ಈಚೆಗೆ ತುಮಕೂರಿನಲ್ಲಿ ಅವರ ಮುಂದಿನ ಸಿನಿಮಾ ಬೃಂದಾವಿಹಾರಿ ಟೀಮ್‌ನಿಂದಲೂ ಸಂಭ್ರಮಾಚರಣೆ ಮಾಡಲಾಗಿದೆ.

ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ʻಬೃಂದಾ ವಿಹಾರಿʼ ಚಿತ್ರದ ʻರಾಧಾ ರಾಧಾ..ʼ ಹಾಡನ್ನು ತುಮಕೂರಿನಲ್ಲಿ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆ ಮಾಡಿ, ಗಣೇಶ್‌ ಅವರ 20ನೇ ವರ್ಷದ ಸಂಭ್ರಮಾಚರಣೆ ಮಾಡಲಾಗಿದೆ.

ಮತ್ತೆ ಒಂದಾದ ʻಕೃಷ್ಣಂ ಪ್ರಣಯಂ ಸಖಿʼ ಟೀಮ್;‌ ʻಗೋಲ್ಡನ್‌ ಸ್ಟಾರ್‌ʼ ಗಣೇಶ್‌ ಈಗ ʻಬೃಂದಾ ವಿಹಾರಿʼ, ಈ ಸಿನಿಮಾ ರಿಲೀಸ್‌ ಯಾವಾಗ?

ಖುಷಿ ಹಂಚಿಕೊಂಡ ಗಣೇಶ್‌

"ತುಮಕೂರಿಗೂ ನನಗೂ ಹತ್ತಿರದ ನಂಟು. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ಈಗ ನನ್ನ ಅಭಿನಯದ ʻಬೃಂದಾವಿಹಾರಿʼ ಚಿತ್ರದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ಇನ್ನೂ, ನಾನು ಹೀರೋ ಆಗಿ 20 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿದ್ದು. ಇದೇ ಸಂದರ್ಭದಲ್ಲಿ ನನ್ನ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷ ಧನ್ಯವಾದವನ್ನು ಉದಯ ಟಿವಿಗೆ ಹೇಳುತ್ತೇನೆ. ಅಲ್ಲಿನ ಕಾಮಿಡಿ ಟೈಮ್ ಕಾರ್ಯಕ್ರಮವೇ ನನ್ನನ್ನು ಚಿತ್ರರಂಗಕ್ಕೆ ಕರೆತಂದಿದ್ದು. ʻಬೃಂದಾ ವಿಹಾರಿʼ ಚಿತ್ರದ ಮೊದಲ ಹಾಡು ʻರಾಮ ರಾಮʼ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ ರಾಧಾ ರಾಧಾ ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ" ಎಂದು ಗಣೇಶ್‌ ಹೇಳಿದ್ದಾರೆ.

ಚಿತ್ರದಲ್ಲಿವೆ 7 ಹಾಡುಗಳಿವೆ

"ಬೃಂದಾ ವಿಹಾರಿ ಚಿತ್ರದಲ್ಲಿ ಏಳು ಹಾಡುಗಳಿದೆ. ಈಗ ಎರಡನೇ ಹಾಡು ಅನಾವರಣವಾಗಿದೆ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ಸಮೃದ್ಧಿ ಮಂಜುನಾಥ್, ನಾಯಕ ಗಣೇಶ್ ಹಾಗೂ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ನವಾಬ್ ಅವರಿಗೆ ಧನ್ಯವಾದ ಹೇಳುತ್ತೇನೆ. ಉಳಿದ ಹಾಡುಗಳು ಸಹ ಸುಮಧುರವಾಗಿದೆ‌‌. ಸದ್ಯದಲ್ಲೇ ಬಿಡುಗಡೆಯಾಗಲಿದೆ" ಎನ್ನುತ್ತಾರೆ ನಿರ್ದೇಶಕ ಶ್ರೀನಿವಾಸರಾಜು. "ಬೃಂದಾ ವಿಹಾರಿ ನಮ್ಮ ಸಂಸ್ಥೆಯ ನಿರ್ಮಾಣದ ನಾಲ್ಕನೇ ಚಿತ್ರ. ಇಂದು ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ" ಎನ್ನುತ್ತಾರೆ ನಿರ್ಮಾಪಕ ಸಮೃದ್ಧಿ ಮಂಜುನಾಥ್.

"ಇದು ನನ್ನ ಮೊದಲ ಚಿತ್ರ. ಗಣೇಶ್ ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ" ಎನ್ನುತ್ತಾರೆ ಚಿತ್ರದ ನಾಯಕಿ ದೇವಿಕಾ ಭಟ್. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸಮೃದ್ಧಿ ವಿ ಮಂಜುನಾಥ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಜೊತೆ ಮಾಳವಿಕ ಶರ್ಮ ಕೂಡ ಕಾಣಿಸಿಕೊಂಡಿದ್ದಾರೆ. "ರಾಧಾ ರಾಧಾ" ಹಾಡನ್ನು ಡಾ. ವಿ. ನಾಗೇಂದ್ರ ಪ್ರಸಾದ್ ಬರೆದಿದ್ದು, ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿದ್ದಾರೆ.