Kantara: Chapter 1: ಕಾಂತಾರ-1 ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ; ರಿಷಬ್ ಕೊಂಡಾಡಿದ ಎಚ್‌ಡಿಕೆ
HD Kumaraswamy: ನವ ದೆಹಲಿಯಲ್ಲಿ ನಾನು, ನನ್ನ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು. ಕಾಂತಾರ, ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

-

ನವ ದೆಹಲಿ: ಕಾಂತಾರ: ಚಾಪ್ಟರ್ 1 ಸಿನಿಮಾ ಬಗ್ಗೆ ವಿವಿಧ ಚಿತ್ರರಂಗಗಳ ಪ್ರಮುಖರು ಸೇರಿ ಹಲವು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ಭವನದಲ್ಲೂ ಕಾಂತಾರ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಇದೀಗ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ನವದೆಹಲಿಯಲ್ಲಿ ಚಿತ್ರ ವೀಕ್ಷಿಸಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿ, ಕಾಂತಾರ, ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ. ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ ಎಂದು ತಿಳಿಸಿದ್ದಾರೆ.
ನವ ದೆಹಲಿಯಲ್ಲಿ ನಾನು, ನನ್ನ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು. ನಿರ್ದೇಶಕ ಶ್ರೀ ರಿಷಭ್ ಶೆಟ್ಟಿ, ನಿರ್ಮಾಪಕ ಶ್ರೀ ವಿಜಯ್ ಕಿರಗಂದೂರು, ಹೊಂಬಾಳೆ ಫಿಲಂಸ್ ಮತ್ತವರ ತಂಡದ ಪ್ರಯತ್ನಕ್ಕೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮಿಂದ ಇನ್ನಷ್ಟು ಅತ್ಯುತ್ತಮ ಚಿತ್ರಗಳು ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
ಕಾಂತಾರ 🙏🙏🙏
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 7, 2025
ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ.
ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ.
ನವದೆಹಲಿಯಲ್ಲಿ ನಾನು, ನನ್ನ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಕಾಂತಾರ ಚಾಪ್ಟರ್ 1 ಚಿತ್ರ ವೀಕ್ಷಿಸಿದೆವು.… pic.twitter.com/pko0nxr9RI
ಈ ಸುದ್ದಿಯನ್ನೂ ಓದಿ | Kantara Chpter 1 collection: ಸೋಮವಾರವೂ ಕಾಂತಾರ ಅಬ್ಬರ, ದಾಖಲೆ ಮಾಡಿದ ಕಲೆಕ್ಷನ್
ಕೊನೆಗೂ 'ಕಾಂತಾರ ಚಾಪ್ಟರ್ 1' ಸಿನೆಮಾ ಬಗ್ಗೆ ಮೌನ ಮುರಿದ ನಟ ರಕ್ಷಿತ್ ಶೆಟ್ಟಿ: ಹೇಳಿದ್ದೇನು ಗೊತ್ತಾ?
ಬೆಂಗಳೂರು: ಕಾಂತಾರ ಸಿನಿಮಾದ ಬಿಗ್ ಸಕ್ಸಸ್ ಬಳಿಕ ಇದೀಗ ಕಾಂತಾರ ಚಾಪ್ಟರ್ 1ಸಿನಿಮಾ (Kantara: Chapter 1) ಕೂಡ ನಿರೀಕ್ಷೆಗೂ ಮೀರಿ ಹೊಸ ದಾಖಲೆ ಮಾಡುತ್ತಿದೆ. ಕಾಂತಾರ ಸಿನಿಮಾ 2022ರಲ್ಲಿ ರಿಲೀಸ್ ಆದಾಗ ಅದಕ್ಕೆ ಈ ಮಟ್ಟಿಗೆ ಯಶಸ್ಸು ಸಿಗುತ್ತದೆ ಎಂಬ ಯಾವ ಸಣ್ಣ ಗೆಸ್ ಕೂಡ ಸಿನಿಮಾ ತಂಡಕ್ಕೆ ಇರಲಿಲ್ಲ. ಈಗ ಕಾಂತಾರ ಚಾಪ್ಟರ್ 1 ಸಿನಿಮಾವನ್ನು ಕನ್ನಡ ಸೇರಿದಂತೆ ಪರ ಭಾಷೆಯಲ್ಲಿ ಮೊದಲೇ ವಾಯ್ಸ್ ರೆಕಾರ್ಡ್ ಎಲ್ಲ ಮುಗಿಸಿ ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ರಿಲೀಸ್ ಮಾಡಲಾಗಿದೆ. ಕಾಂತಾರ ಚಾಪ್ಟರ್ 1 ಸಿನಿಮಾವನ್ನು ರಿಷಭ್ ಶೆಟ್ಟಿ ಆಪ್ತರು ಹಾಗೂ ಅಭಿಮಾನಿಗಳು ನೆಚ್ಚಿಕೊಂಡಿದ್ದಾರೆ. ಅಂತೆಯೆ ರಿಷಬ್ ಶೆಟ್ಟಿ ಅವರ ಆಪ್ತ ಗೆಳೆಯರಾದ ರಕ್ಷಿತ್ ಶೆಟ್ಟಿ ಅವರು ಕಾಂತಾರಾ ಚಾಪ್ಟರ್ 1 ಸಿನಿಮಾ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅತ್ಯುತ್ತಮ ನಟನಿಗೆ ರಾಜ್ಯ ಸರ್ಕಾರದಿಂದ ಗೌರವ@rakshitshetty Congratulations ಮಗ ..
— Rishab Shetty (@shetty_rishab) October 4, 2025
ರಾಜ್ಯ ಪ್ರಶಸ್ತಿ ಪಡೆದ ಎಲ್ಲಾ ವಿಜೇತರಿಗೂ ನನ್ನ ಶುಭಾಶಯಗಳು.. #StateAward2021 pic.twitter.com/v9DVrNMiH1
2022ರಲ್ಲಿ ಕಾಂತಾರ ಸಿನಿಮಾ ರಿಲೀಸ್ ಆಗಿದ್ದಾಗ ಆ ಸಿನಿಮಾವನ್ನು ನೋಡಿ ಭಾವುಕರಾಗಿ ಓಡಿ ಬಂದು ನಟ ರಿಷಬ್ ಶೆಟ್ಟಿಯನ್ನು ಅಪ್ಪಿಕೊಂಡಿದ್ದರು. ಈ ವಿಡಿಯೋ ಕೂಡ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಕಾಂತಾರ ಚಾಪ್ಟರ್ 1 ಸಿನಿಮಾ ರಿಲೀಸ್ ಆಗಿದ್ದಾಗ ರಿಷಬ್ ಅವರ ಆಪ್ತರಾದ ನಟ ರಕ್ಷಿತ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ಸಿನಿಮಾ ನೋಡಿ ಯಾವುದೆ ತರ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಕೂಡ ಅನೇಕ ಪ್ರತಿಕ್ರಿಯೆ ವ್ಯಕ್ತ ವಾಗಿತ್ತು. ಇದರ ಬೆನ್ನಲ್ಲೇ ನಟ ರಕ್ಷಿತ್ ಶೆಟ್ಟಿ ಅವರು ಕಾಂತಾರ ಚಾಪ್ಟರ್ 1 ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪೋಸ್ಟ್ ಒಂದು ವೈರಲ್ ಆಗಿದೆ.
ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ '777 ಚಾರ್ಲಿ' ಚಿತ್ರಕ್ಕೆ ಈ ಬಾರಿ 4 ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದೆ. ಅದರಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಕೂಡ ನಟ ರಕ್ಷಿತ್ ಶೆಟ್ಟಿ ಅವರಿಗೆ ಸಿಕ್ಕಿದೆ. ಹೀಗಾಗಿ ನಟ ರಕ್ಷಿತ್ ಶೆಟ್ಟಿ ಅವರಿಗೆ ಸಿನಿಮಾ ಇಂಡಸ್ಟ್ರಿಯ ಖ್ಯಾತ ಕಲಾವಿದರು ಮತ್ತು ಆಪ್ತರು ಶುಭ ಕೋರಿ ದ್ದಾರೆ. ಅಂತೆಯೇ ನಟ ರಿಷಭ್ ಶೆಟ್ಟಿ ಅವರು ಕೂಡ ಟ್ವೀಟ್ ಮಾಡಿ ಸ್ನೇಹಿತನಿಗೆ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ನಟ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡಿ ರಕ್ಷಿತ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಅತ್ಯುತ್ತಮ ನಟನಿಗೆ ರಾಜ್ಯ ಸರ್ಕಾರದಿಂದ ಗೌರವ. ಅಭಿನಂದನೆಗಳು ಮಗಾ" ಎಂದು ರಿಷಬ್ ಶೆಟ್ಟಿ ಟ್ವೀಟ್ ನಲ್ಲಿ ಬರೆದು ವಿಶ್ ಮಾಡಿದ್ದಾರೆ. ಅದಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. "ಥ್ಯಾಂಕ್ಸ್ ಮಗಾ. ಕಾಂತಾರ ಚಾಪ್ಟರ್ 1 ಚಿತ್ರದ ಅದ್ಭುತ ಯಶಸ್ಸಿಗೆ ಹೃತ್ಪೂರ್ವಕ ಅಭಿನಂದನೆಗಳು, ಸಿನಿಮಾಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದು ವಿಶ್ ಮಾಡಿ ಬರೆದುಕೊಂಡಿದ್ದಾರೆ. ಸದ್ಯ ಇವರಿಬ್ಬರ ಪೋಸ್ಟ್ ವೈರಲ್ ಆಗುತ್ತಿದೆ.