Kannada New Movie: ಅಮ್ಮಂದಿರ ದಿನದಂದು ಬಿಡುಗಡೆಯಾಯಿತು ʼಖೇಲಾʼ ಚಿತ್ರದ ʼನನ್ ಅಮ್ಮʼ ಹಾಡು
Khela Movie: ವಿ.ಜೆ. ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ ʼಖೇಲಾʼ ಚಿತ್ರದ ʼನನ್ ಅಮ್ಮʼ ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.


ಬೆಂಗಳೂರು: ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ. ಭರತ್ ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ ʼಖೇಲಾʼ ಚಿತ್ರದ (Kannada New Movie) ʼನನ್ ಅಮ್ಮʼ ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ - ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಹಾಡಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯುಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ ಭರತ್ ವಿ.ಜೆ. ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. ಈವರೆಗೂ ಸಾಕಷ್ಟು ಲವ್ ಸ್ಟೋರಿಸ್ ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಭರತ್.
ಇನ್ನೂ ಈ ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ ʼಶ್ರಾವಣಿ ಸುಬ್ರಹ್ಮಣ್ಯʼ ಹಾಗೂ ʼಮೈನಾʼ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ.
ಈ ಸುದ್ದಿಯನ್ನೂ ಓದಿ | Summer Fashion: ಸಮ್ಮರ್ ಗ್ಲಾಮರಸ್ ಲುಕ್‌ಗಾಗಿ ಬಾರ್ಡಟ್ ಸ್ಟೈಲಿಂಗ್‌ಗೆ ಸೈ ಎಂದ ಯುವತಿಯರು!
ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರುವ ʼಖೇಲಾʼ ಚಿತ್ರಕ್ಕೆ ಎಂ.ಎಸ್. ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್.ಪ್ರಮೋದ್ ಜೋಯಿಸ್ ಬರೆದಿದ್ದಾರೆ.