Asha Bhosle Death: ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ: ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಂತಾಪ
CM Siddaramaiah: ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿ ವಿವಿಧ ರಾಜಕೀಯ ನಾಯಕರು, ಸಿನಿಮಾ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಖ್ಯಾತ ಗಾಯಕಿ ಆಶಾ ಬೋಸ್ಲೆ ಮತ್ತು ಸಿಎಂ ಸಿದ್ದರಾಮಯ್ಯ. -
ಬೆಂಗಳೂರು: ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle Death) ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮಾನಸದಲ್ಲಿ ಶಾಶ್ವತ. ಆಶಾ ಭೋಸ್ಲೆಯವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.
ಭಾರತೀಯ ಸಂಗೀತ ಲೋಕದ ಶ್ರೇಷ್ಠ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ ಹೃದಯ ಸಂಬಂಧಿ ಸಮಸ್ಯೆ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಸೋಮವಾರ (ಏ.13) ನಡೆಯಲಿದೆ. ಆಶಾ ಭೋಸ್ಲೆ ಅವರ ನಿಧನಕ್ಕೆ ರಾಜಕೀಯ ನಾಯಕರು, ಸಿನಿಮಾ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ.
— Siddaramaiah (@siddaramaiah) April 12, 2026
ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು… pic.twitter.com/jZjPyLCJlz
"ಅವರ ಹಾಡುಗಳು ಜನರ ಮನಸಲ್ಲಿ ಶಾಶ್ವತ"; ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ
ಆಶಾ ಬೋಸ್ಲೆ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಅಸಂಖ್ಯಾತ ಮರೆಯಲಾಗದ ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದು, ಭಾರತೀಯ ಸಂಗೀತ ಕ್ಷೇತ್ರದಲ್ಲಿ ಎಂದಿಗೂ ಮಸುಕಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ತಿಳಿಸಿದ್ದಾರೆ.