ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chandan Shetty: ಮೈಮಾಟ ಸಾಂಗ್‌ ವಿವಾದ; ಸ್ಪಷ್ಟನೆ ನೀಡಿದ ರ‍್ಯಾಪರ್ ಚಂದನ್‌ ಶೆಟ್ಟಿ

Chandan Shetty: ಕನ್ನಡದ ರಾಪರ್ ಚಂದನ್ ಶೆಟ್ಟಿ ಅವರ ಹೊಸ ಆಲ್ಬಂ ಸಾಂಗ್ ಮೈಮಾಟ ಬಿಡುಗಡೆಯಾದ ಬೆನ್ನಲ್ಲೇ, ಅವರ ಮಾಜಿ ಪತ್ನಿ ನಿವೇದಿತಾ ಗೌಡ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಮಾರ್ಮಿಕ ಪೋಸ್ಟ್ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಚಂದನ್ ಶೆಟ್ಟಿ ಅವರೇ ಸುದೀರ್ಘ ಪೋಸ್ಟ್ ಮೂಲಕ ಮುಕ್ತಾಯ ಹಾಡಿದ್ದು, ಅಧಿಕೃತ ಸ್ಪಷ್ಟೀಕರಣ ನೀಡಿದ್ದಾರೆ.

ಮೈಮಾಟ ಸಾಂಗ್‌ ವಿವಾದ; ಸ್ಪಷ್ಟನೆ ನೀಡಿದ ರ‍್ಯಾಪರ್ ಚಂದನ್‌ ಶೆಟ್ಟಿ

ಚಂದನ್‌ ಶೆಟ್ಟಿ -

Yashaswi Devadiga
Yashaswi Devadiga Oct 29, 2026 8:31 AM

ಕನ್ನಡದ ರಾಪರ್ ಚಂದನ್ ಶೆಟ್ಟಿ (Chandan shetty) ಅವರ ಹೊಸ ಆಲ್ಬಂ ಸಾಂಗ್ ಮೈಮಾಟ ಬಿಡುಗಡೆಯಾದ ಬೆನ್ನಲ್ಲೇ, ಅವರ ಮಾಜಿ ಪತ್ನಿ ನಿವೇದಿತಾ ಗೌಡ (Niveditha Gowda) ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಮಾರ್ಮಿಕ ಪೋಸ್ಟ್ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಚಂದನ್ ಶೆಟ್ಟಿ ಅವರೇ ಸುದೀರ್ಘ ಪೋಸ್ಟ್ ಮೂಲಕ ಮುಕ್ತಾಯ ಹಾಡಿದ್ದು, ಅಧಿಕೃತ ಸ್ಪಷ್ಟೀಕರಣ ನೀಡಿದ್ದಾರೆ.

ಚಂದನ್ ಶೆಟ್ಟಿ ಹೇಳಿದ್ದೇನು?

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳು ಹಾಗೂ ಮಾಧ್ಯಮಗಳಿಗಾಗಿ ಸಂದೇಶ ಹಂಚಿಕೊಂಡಿರುವ ಚಂದನ್ ಶೆಟ್ಟಿ, 'ನನ್ನ ಇತ್ತೀಚಿನ MAIMATA ಹಾಡಿನ ಆರಂಭದಲ್ಲೇ ತಿಳಿಸಿರುವಂತೆ, ಈ ಹಾಡನ್ನು ಕೇವಲ ಮನರಂಜನೆಗಾಗಿ ರಚಿಸಲಾಗಿದ್ದು, ಯಾರನ್ನೂ ನೋಯಿಸುವ ಅಥವಾ ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ. ಈ ರೀತಿಯ ಹೊಸ ಸಂಗೀತ ಶೈಲಿಯನ್ನು ಪ್ರಯತ್ನಿಸಬೇಕೆಂಬ ಆಸೆ ನನಗೆ ಬಹಳ ಹಿಂದಿನಿಂದಲೂ ಇತ್ತು. ನನ್ನ ವೈಯಕ್ತಿಕ ಜೀವನದಲ್ಲಿ ನಡೆದ ಕೆಲವು ಘಟನೆಗಳಿಗೂ ಮೊದಲೇ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆದರೆ ಇತ್ತೀಚೆಗೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ, ಯೂಟ್ಯೂಬ್ ಚಾನೆಲ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡನ್ನು ನನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಬಿಂಬಿಸಲಾಗುತ್ತಿದೆ. ಈ ಬಗ್ಗೆ ಅನೇಕ ಪ್ರಶ್ನೆಗಳು ಹಾಗೂ ಊಹಾಪೋಹಗಳು ಕೇಳಿಬರುತ್ತಿರುವುದರಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ' ಎಂದು ಬರೆದಿದ್ದಾರೆ.

ಇದನ್ನೂ ಓದಿ: Bigg Boss Kannada 13: ಶೆಟ್ಟಿ ಡಾನ್ ಕಲ್ಯಾಣವಂತೆ! ವರನ್ಯಾರು ಗೊತ್ತೇನು?

ನಿವೇದಿತಾ ಗೌಡ ಕೊಟ್ಟ ಟಾಂಗ್ ಏನು?

ಹಾಡು ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್‌ಗಳು ಹೆಚ್ಚಾಗುತ್ತಿದ್ದಂತೆ, ನಿವೇದಿತಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಇಂಗ್ಲಿಷ್‌ನಲ್ಲಿ ಒಂದು ಮಾರ್ಮಿಕವಾದ ಪೋಸ್ಟ್ ಹಾಕಿದ್ದಾರೆ. ಅದರಲ್ಲಿ, "ಅದ್ಭುತ ಸ್ನೇಹಿತರನ್ನು ಹೊಂದಿರುವ, ಮಹತ್ವಾಕಾಂಕ್ಷೆಯುಳ್ಳ ಹಾಗೂ ಪ್ರೀತಿಯಲ್ಲಿ ದುರದೃಷ್ಟವಂತೆಯಾಗಿರುವ ಹುಡುಗಿಯ ಜೀವನವು ರೊಮ್ಯಾಂಟಿಕ್ ಕಾಮಿಡಿಯಂತೆ ಇರುತ್ತದೆ ಎಂದು ಎಲ್ಲೋ ಓದಿದ್ದೆ. ಆದರೆ ನನ್ನ ಜೀವನ ಮಾತ್ರ ಸಂಪೂರ್ಣ ಹಾರರ್ ಸ್ಟೋರಿಯಾಗಿದೆ! ಸ್ಪಷ್ಟವಾಗಿ ಹೇಳುವುದಾದರೆ, ನನ್ನ ಗತಕಾಲದ ನೆನಪುಗಳು ನನ್ನನ್ನು ಒಂಟಿಯಾಗಿ ಬಿಡುತ್ತಲೇ ಇಲ್ಲ " ಎಂದು ಬರೆದಿದ್ದಾರೆ.

ಇದನ್ನೂ ಓದಿ: Bigg Boss Kannada 13: ಕುಮಾರಿ ಸ್ನಾನಾನೇ ಮಾಡಲ್ಲ! ಲಕ್ಷ್ಮೀ ಗೌಡ ಶಾಕಿಂಗ್​ ಸ್ಟೇಟ್​ಮೆಂಟ್​

ರು ಚಂದನ್ ಶೆಟ್ಟಿ ಹಾಗೂ ಅವರ ಸುತ್ತಲಿನ ಹಳೆಯ ನೆನಪುಗಳಿಗೇ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಚರ್ಚಿಸಿದ್ದರು.