Marutha Movie: ಬಹು ನಿರೀಕ್ಷಿತ ʼಮಾರುತʼ ಚಿತ್ರದ ಬಿಡುಗಡೆ ಮುಂದಕ್ಕೆ; ಹೊಸ ಡೇಟ್ ಅನೌನ್ಸ್
Sandalwood News: ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಮಾರುತʼ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಪ್ರಸ್ತುತ ಚಿತ್ರಮಂದಿರಗಳ ಅಭಾವವಿರುವ ಕಾರಣ ಚಿತ್ರದ ಬಿಡುಗಡೆಯನ್ನು ಮೂರು ವಾರ ಮುಂದೂಡಿದ್ದು, ನವೆಂಬರ್ 21ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

-

ಬೆಂಗಳೂರು: ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ. ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ʼಮಾರುತʼ ಚಿತ್ರ (Marutha Movie) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ನಿಗದಿಯಂತೆ ಅಕ್ಟೋಬರ್ 31ರಂದು ʼಮಾರುತʼ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಪ್ರಸ್ತುತ ಚಿತ್ರಮಂದಿರಗಳ ಅಭಾವವಿರುವ ಕಾರಣ ಚಿತ್ರತಂಡ ರಿಲೀಸ್ ದಿನಾಂಕವನ್ನು 3 ವಾರ ಮುಂದೂಡಿದೆ. ನವೆಂಬರ್ 21ರಂದು ರಾಜ್ಯಾದ್ಯಂತ ʼಮಾರುತʼ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಆರಂಭದಿಂದಲೂ ತಾವೆಲ್ಲ ನೀಡುತ್ತಾ ಬಂದಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಪ್ರೋತ್ಸಾಹ ಹೀಗೆ ನಿರಂತರವಾಗಿರಲಿ ಎಂದು ಚಿತ್ರತಂಡ ಮನವಿ ಮಾಡಿದೆ.
ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್. ನಾರಾಯಣ್ ನಿರ್ದೇಶನ ಹಾಗೂ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಕೆ. ಮಂಜು ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಈ ಚಿತ್ರದ ಬಿಡುಗಡೆಗೆ ಕನ್ನಡ ಕಲಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ʼಮಾರುತʼ ಚಿತ್ರದ ಟ್ರೈಲರ್ ಇಲ್ಲಿದೆ:
ಅದ್ಧೂರಿಯಾಗಿ ಮೂಡಿಬಂದಿರುವ ʼಮಾರುತʼ ಚಿತ್ರಕ್ಕೆ ಎಸ್.ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್. ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Deepavali Decoration 2025: ಬೆಳಕಿನ ಹಬ್ಬದ ಅಲಂಕಾರಕ್ಕೆ ಲಗ್ಗೆ ಇಟ್ಟ ಆಕಾಶ ದೀಪಗಳು
ದುನಿಯಾ ವಿಜಯ್, ಶ್ರೇಯಸ್ ಕೆ. ಮಂಜು, ಬೃಂದಾ (ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ತಾರಾಬಳಗದ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ.