Marutha Movie: ದುನಿಯಾ ವಿಜಯ್ - ಶ್ರೇಯಸ್ ಮಂಜು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ʼಮಾರುತʼ ಚಿತ್ರ ಅ.31ಕ್ಕೆ ರಿಲೀಸ್
Marutha Movie: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಮಾರುತʼ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

-

ಬೆಂಗಳೂರು: ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ʼಮಾರುತʼ ಚಿತ್ರದ (Marutha Movie) ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ 31ರಂದು ಬಿಡುಗಡೆಯಾಗಲಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ ʼಮಾರುತʼ ಚಿತ್ರಕ್ಕೆ ಎಸ್. ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸಂಗೀತ ಸಂಯೋಜನೆಯನ್ನು ಎಸ್. ನಾರಾಯಣ್ ಅವರೇ ಮಾಡಿದ್ದಾರೆ.
ಖ್ಯಾತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ ನಿರ್ದೇಶಕ ಎಸ್. ನಾರಾಯಣ್ ಅವರ ನಿರ್ದೇಶನದಲ್ಲಿ, ತಮ್ಮ ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಅವರ ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ʼಮಾರುತʼ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ ʼಮಾರುತʼ ಚಿತ್ರಕ್ಕೆ ಎಸ್. ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸಂಗೀತ ಸಂಯೋಜನೆಯನ್ನು ಎಸ್. ನಾರಾಯಣ್ ಅವರೇ ಮಾಡಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.
ಈ ಸುದ್ದಿಯನ್ನೂ ಓದಿ | Navaratri/Dasara Trend 2025: ಫೆಸ್ಟೀವ್ ಸೀಸನ್‌ಗೂ ಮುನ್ನವೇ ಎಂಟ್ರಿ ಕೊಟ್ಟ ನವರಾತ್ರಿ ಟ್ರೆಡಿಷನಲ್ ವೇರ್ಸ್
ದುನಿಯಾ ವಿಜಯ್, ಶ್ರೇಯಸ್ ಕೆ. ಮಂಜು, ಬೃಂದಾ (ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.