ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Director Murali Mohan: 'ಓಂ' ಸಿನೆಮಾದಿಂದ ಆರೋಗ್ಯ ಕಳೆದುಕೊಂಡೆ, ದಯವಿಟ್ಟು ಬದುಕಿಸಿ ಎಂದು ಅಂಗಲಾಚಿದ್ದ ಮುರಳಿ ಮೋಹನ್

ಸ್ಯಾಂಡಲ್‌ವುಡ್‌ ಹಿರಿಯ ನಿರ್ದೇಶಕ ಮುರಳಿ ಮೋಹನ್ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. 56 ವರ್ಷದ ಅವರು ಬಹುಅಂಗಾಂಗ ವೈಫಲ್ಯದಿಂದ ಆಗಸ್ಟ್‌ 13ರಂದು ಮೃತಪಟ್ಟಿದ್ದಾರೆ. ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಮುರಳಿ ಮೋಹನ್‌ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ದಯವಿಟ್ಟು ಬದುಕಿಸಿ ಎಂದು ಅಂಗಲಾಚಿದ್ದ ಮುರಳಿ ಮೋಹನ್

Ramesh B Ramesh B Aug 13, 2025 6:50 PM

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ (Upendra) ಅವರ ಜತೆ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ‌ ಮಾಡಿದ್ದ ಸ್ಯಾಂಡಲ್‌ವುಡ್‌ ಹಿರಿಯ ನಿರ್ದೇಶಕ ಮುರಳಿ ಮೋಹನ್ (Director Murali Mohan) ಅನಾರೋಗ್ಯದಿಂದ ನಿಧನ ಹೊಂದಿದರು. 56 ವರ್ಷದ ಅವರು ಬಹುಅಂಗಾಂಗ ವೈಫಲ್ಯದಿಂದ ಆಗಸ್ಟ್‌ 13ರಂದು ಮೃತಪಟ್ಟರು. ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಮುರಳಿ ಮೋಹನ್‌ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅಲ್ಲದೆ ಕೆಲವು ತಿಂಗಳ ಅನಾರೋಗ್ಯ ಕಾಡುತ್ತಿದೆ, ದಯವಿಟ್ಟು ಬದುಕಿಸಿ ಎಂದು ಮನವಿ ಮಾಡಿದ್ದರು. ಆದರೆ ಇದೀಗ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.

ಮೂತ್ರಪಿಂಡ ಕಸಿ‌ ಚಿಕಿತ್ಸೆಗೆ 25 ಲಕ್ಷ ರೂ. ಅಗತ್ಯವಿದ್ದು, ದಾನಿಗಳು ಹಣಕಾಸಿನ ನೆರವು ನೀಡಿ ಎಂದು ಚಿತ್ರರಂಗದ ಆತ್ಮೀಯರ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಮುರಳಿ ಮೋಹನ್ ಮನವಿ ಪತ್ರ ಹಾಕಿದ್ದರು.

ಈ ಸುದ್ದಿಯನ್ನೂ ಓದಿ: Director Murali Mohan: ಉಪೇಂದ್ರ ಆಪ್ತ ಮುರಳಿ ಮೋಹನ್‌ಗೆ ಕಿಡ್ನಿ ಸಮಸ್ಯೆ; ಚಿಕಿತ್ಸೆಗೆ ನೆರವು ನೀಡಲು ಮನವಿ

ಕಿಡ್ನಿ ಸಮಸ್ಯೆ ಜತೆ ಹೃದಯ ಸಂಬಂಧಿ ಕಾಯಿಲೆಯಿಂದಲೂ ಮುರಳಿ ಮೋಹನ್ ಬಳಲುತ್ತಿದ್ದರು. ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಅವರ ಗರಡಿಯಲ್ಲಿ ಪಳಗಿದ ಮುರಳಿ ಮೋಹನ್‌, ರಿಯಲ್‌ ಸ್ಟಾರ್‌ ಉಪೇಂದ್ರ ಅವರಿಗೆ ಆಪ್ತ ಸ್ನೇಹಿತರಾಗಿದ್ದರು. ಕನ್ನಡ ಚಿತ್ರರಂಗದಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ,ನಿರ್ದೇಶಕರಾಗಿ, ನಟರಾಗಿ, ಸಂಭಾಷಣೆಕಾರರಾಗಿಯೂ ಗುರುತಿಸಿಕೊಂಡಿದ್ದರು.

2018ರಿಂದಲೇ ಮುರಳಿ ಮೋಹನ್‌ ಅವರಿಗೆ ಅನಾರೋಗ್ಯ ಬಾಧಿಸುತ್ತಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರಳಿ ಮೋಹನ್‌, ವಾರಕ್ಕೆ 3 ದಿನಗಳ ಕಾಲ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. 2020 ರಲ್ಲೇ ಕಿಡ್ನಿ ಟ್ರ್ಯಾನ್ಸ್‌ಪ್ಲಾಂಟ್‌ಗೆ ಮುರಳಿ ಮೋಹನ್‌ ಒಳಗಾಗಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ.

ಅಶಿಸ್ತಿನ ಜೀವನ

ಅಸಿಸ್ತಿನ ಜೀವನ ರೂಢಿಸಿದ್ದರಿಂದ ದೇಹದ ಕಡೆಗೆ ಗಮನ ಹರಿಸಲು ಸಾಧ್ಯವಾಗದೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು. ʼʼಓಂʼ, ʼಶ್‌ʼ ಮುಂತಾದ ಸಿನಿಮಾ ಮಾಡುವಾಗ ಕೇವಲ 2 ಗಂಟೆ ಮಾತ್ರ ಮಲಗುತ್ತಿದ್ದೆವು. ಬೆಳಗಿನ ಜಾವ 3 ಗಂಟೆಗೆ ಮಲಗಿ 5 ಗಂಟೆಗೆ ಏಳುತ್ತಿದ್ದೆವು. ಬಳಿಕ ಅದು ಅಭ್ಯಾಸವಾಗಿ ಬಿಟ್ಟಿತ್ತು. ಶೂಟಿಂಗ್‌ ಇಲ್ಲದಾಗಲೂ 3 ಗಂಟೆ ತನಕ ನಿದ್ದೆ ಬರುತ್ತಿರಲಿಲ್ಲ. ಈಗಲೂ ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ಸಿನಿಮಾದವರ ಜೀವನವೇ ಅಶ್ತಿನಿಂದ ಕೂಡಿರುತ್ತದೆ. ಎಲ್ಲೋ ತಿಂತೀವೆ, ಎಲ್ಲೋ ಮಲಗ್ತೀವಿ. ಸರಿಯಾದ ನಿದ್ದೆ ಇರಲ್ಲ. ಇದರಿಂದ ಕಾಯಿಲೆಳು ವಕ್ಕರಿಸುತ್ತವೆʼʼ ಎಂದಿದ್ದರು.

ಘಟಾನುಘಟಿ ನಟರಿಗೆ ಆ್ಯಕ್ಷನ್‌ ಕಟ್‌

ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಬಳಿಕ ಉಪೇಂದ್ರ ನಟನೆಯ ʼನಾಗರಹಾವುʼ, ಶಿವ ರಾಜ್​ಕುಮಾರ್ ನಟನೆಯ ʼಸಂತʼ, ರವಿಚಂದ್ರನ್‌ ಅಭಿನಯದ ʼಮಲ್ಲಿಕಾರ್ಜುನʼ ಮುಂತಾದ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ಇದೀಗ ಪ್ರತಿಭಾವಂತ ನಿರ್ದೇಶಕನ್ನು ಸ್ಯಾಂಡಲ್‌ವುಡ್‌ ಕಳೆದುಕೊಂಡಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.