ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pawan Kalyan: ಪವನ್ ಕಲ್ಯಾಣ್ ಮೂರನೇ ವಿಚ್ಛೇದನಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೇಗಿತ್ತು?

Pawan Kalyan: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೆಲಾ ಅವರ ವೈವಾಹಿಕ ಜೀವನಕ್ಕೆ ಅಂತ್ಯ ಹಾಡುವ ನಿರ್ಧಾರ ಅಭಿಮಾನಿಗಳಿಗೆ ಆಘಾತ ತಂದಿದೆ. 13 ವರ್ಷಗಳ ದಾಂಪತ್ಯ ಜೀವನದ ಬಳಿಕ ಈ ಜೋಡಿ ಬೇರೆಯಾಗುತ್ತಿರುವುದಾಗಿ ಘೋಷಿಸಿದೆ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಪವನ್ ಕಲ್ಯಾಣ್ ಮೂರನೇ ವಿಚ್ಛೇದನಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಹೇಗಿತ್ತು?

ಪವನ್‌ ಕಲ್ಯಾಣ್‌ -

Yashaswi Devadiga
Yashaswi Devadiga Nov 10, 2026 8:44 AM

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಮತ್ತು ಅವರ ಪತ್ನಿ ಅನ್ನಾ ಕೊನಿಡೆಲಾ ಅವರ ವೈವಾಹಿಕ ಜೀವನಕ್ಕೆ ಅಂತ್ಯ ಹಾಡುವ ನಿರ್ಧಾರ ಅಭಿಮಾನಿಗಳಿಗೆ ಆಘಾತ ತಂದಿದೆ. 13 ವರ್ಷಗಳ ದಾಂಪತ್ಯ ಜೀವನದ ಬಳಿಕ ಈ ಜೋಡಿ ಬೇರೆಯಾಗುತ್ತಿರುವುದಾಗಿ ಘೋಷಿಸಿದೆ ಎನ್ನಲಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ದೀಪಾವಳಿ ಹಬ್ಬದ ಮರುದಿನವೇ ದಂಪತಿ ತಮ್ಮ ನಿರ್ಧಾರವನ್ನು ಜಂಟಿ ಹೇಳಿಕೆಯ ಮೂಲಕ ಪ್ರಕಟಿಸಿದ್ದಾರೆ , ಈ ಸುದ್ದಿ ಹೊರಬರುತ್ತಿದ್ದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳು ಆಘಾತ ವ್ಯಕ್ತಪಡಿಸಿದ್ದಾರೆ. ದಂಪತಿ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಲವರು ಎಕ್ಸ್‌ (ಹಿಂದಿನ ಟ್ವಿಟರ್) ಮೂಲಕ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ಪವನ್ ಕಲ್ಯಾಣ್ ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ಅವರ ವೈಯಕ್ತಿಕ ಜೀವನದ ಬಗ್ಗೆ ಟ್ರೋಲ್ ಮಾಡದಂತೆ ಮನವಿ ಮಾಡಿದ್ದಾರೆ. ಇನ್ನು ಕೆಲವು ಮೀಮ್ಸ್‌ಗಳು ಕೂಡ ಗಮನ ಸೆಳೆದಿವೆ.

ಇದನ್ನೂ ಓದಿ: Bigg Boss Kannada 13: ಬಿಗ್ ಬಾಸ್ ಮನೆಗೆ ಮಂಜ ಎಂಟ್ರಿ ಕೊಟ್ಟಿದ್ದು ಹೇಗಿತ್ತು? ಸ್ಪರ್ಧಿಗಳು ಶಾಕ್‌



ಒಬ್ಬ ಅಭಿಮಾನಿ, "ಈ ಸುದ್ದಿ ನಿಜಕ್ಕೂ ಹೃದಯವಿದ್ರಾವಕವಾಗಿದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಏನೇ ನಡೆದರೂ, ನಾನು ಜೀವನಪೂರ್ತಿ ನಿಮ್ಮನ್ನು ಅಭಿಮಾನದಿಂದ ನೋಡುತ್ತೇನೆ. ಏನೇ ಪರಿಸ್ಥಿತಿ ಬಂದರೂ ಸದಾ ನಿಮ್ಮೊಂದಿಗಿರುತ್ತೇನೆ" ಎಂದು ಬರೆದುಕೊಂಡಿದ್ದಾರೆ.

ಮತ್ತೊಬ್ಬರು, "ಈ ಸುದ್ದಿ ಕೇಳಿ ತುಂಬಾ ಬೇಸರವಾಯಿತು. ನಿಮ್ಮ ವೈಯಕ್ತಿಕ ಜೀವನದಲ್ಲಿ ಎಷ್ಟೇ ಸವಾಲುಗಳು ಎದುರಾದರೂ ಅವುಗಳನ್ನು ಧೈರ್ಯದಿಂದ ಎದುರಿಸಿ ಮುಂದೆ ಸಾಗಲಿ ಎಂದು ಆಶಿಸುತ್ತೇನೆ" ಎಂದು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಪವನ್ ಕಲ್ಯಾಣ್ ಅವರ ಮೂರನೇ ವಿವಾಹ ವಿಚ್ಛೇದನದ ವಿಚಾರವನ್ನು ಮುಂದಿಟ್ಟುಕೊಂಡು ಟೀಕೆ ಮಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬ್ಬ ಅಭಿಮಾನಿ, "ಯಾರಾದರೂ ವೈಯಕ್ತಿಕ ಜೀವನದಲ್ಲಿ ವಿಚ್ಛೇದನ ಪಡೆದಾಗ ಅದನ್ನು ನೋಡಿ ಸಂಭ್ರಮಿಸುವುದು ಸರಿಯಲ್ಲ. ಸಿನಿಮಾ ಮತ್ತು ರಾಜಕೀಯದ ವಿಚಾರಗಳೆಲ್ಲವೂ ಅವರ ಸುತ್ತಲೇ ಸುತ್ತುತ್ತಿವೆ. ಪ್ರತಿಯೊಬ್ಬರೂ ಮೂರು ಮದುವೆಗಳು ಮತ್ತು ರಾಜಕೀಯದ ಬಗ್ಗೆಯೇ ಮಾತನಾಡುತ್ತಿದ್ದಾರೆ. ಇಂತಹ ಮಾತುಗಳಿಂದ ಹಲವರು ನೋವು ಅನುಭವಿಸುತ್ತಿದ್ದಾರೆ. ಎಲ್ಲವನ್ನೂ ಬಿಟ್ಟು ನಿಮ್ಮ ಜೀವನವನ್ನು ನೆಮ್ಮದಿಯಿಂದ ನಡೆಸಿ" ಎಂದು ಬರೆದುಕೊಂಡಿದ್ದಾರೆ.



ಮತ್ತೊಬ್ಬ ಅಭಿಮಾನಿ ಪವನ್ ಕಲ್ಯಾಣ್ ಅವರ ಮಾನಸಿಕ ಮತ್ತು ದೈಹಿಕ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. "ಇಷ್ಟೊಂದು ಮಾನಸಿಕ ಹಾಗೂ ದೈಹಿಕ ಒತ್ತಡಗಳ ನಡುವೆಯೂ ಇಷ್ಟು ದಿನ ಅವರು ಬದುಕಿನಲ್ಲಿ ಮುನ್ನಡೆಯುತ್ತಿರುವುದು ದೊಡ್ಡ ವಿಚಾರ. ರಾಜಕೀಯ, ಸಿನಿಮಾ ಮತ್ತು ವೈಯಕ್ತಿಕ ಜೀವನ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ" ಎಂದು ಅಭಿಮಾನಿ ಬರೆದುಕೊಂಡಿದ್ದಾರೆ.

ಇನ್ನೊಬ್ಬ ಅಭಿಮಾನಿ, "ಪವನ್ ಕಲ್ಯಾಣ್ ಅವರನ್ನು ಟ್ರೋಲ್ ಮಾಡುವ ಮೊದಲು ಸ್ವಲ್ಪ ಯೋಚಿಸಿ. ಕೇವಲ 50 ಸಾವಿರ ರೂಪಾಯಿ ಸಾಲವನ್ನು ತೀರಿಸಲಾಗದೆ ಸಂಕಷ್ಟ ಅನುಭವಿಸುವ ಜನರಿರುವ ಈ ದಿನಗಳಲ್ಲಿ, ಪವನ್ ಕಲ್ಯಾಣ್ ಅವರು ಆರೋಗ್ಯ ಸಮಸ್ಯೆಗಳು, ವೈಯಕ್ತಿಕ ಜೀವನದ ಸವಾಲುಗಳು, ರಾಜಕೀಯ ಮತ್ತು ಸಿನಿಮಾ ಕ್ಷೇತ್ರದ ಒತ್ತಡಗಳನ್ನು ಎದುರಿಸುತ್ತಿದ್ದಾರೆ. ಅವರ ಅಭಿಮಾನಿಯಾಗಿರುವ ನನಗೇ ಈ ಸುದ್ದಿ ಕೇಳಿ ಬೇಸರವಾಗಿದೆ. ಇಷ್ಟೆಲ್ಲ ಅವಮಾನಗಳ ನಡುವೆ ಅವರ ಮನಸ್ಥಿತಿ ಹೇಗಿರಬಹುದು ಎಂದು ಒಮ್ಮೆ ಯೋಚಿಸಿ" ಎಂದು ಮನವಿ ಮಾಡಿದ್ದಾರೆ.

ಪವನ್ ಕಲ್ಯಾಣ್ ಮತ್ತು ಅನ್ನಾ ಕೊನಿಡೆಲಾ ಪರಿಚಯವಾಗಿದ್ದು ಹೇಗೆ?

ಅನ್ನಾ ಕೊನಿಡೆಲಾ ಅವರು ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ. 2011ರಲ್ಲಿ ಬಿಡುಗಡೆಯಾದ ತೀನ್ ಮಾರ್ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರೂ ಮೊದಲ ಬಾರಿಗೆ ಭೇಟಿಯಾಗಿದ್ದರು. ಪರಿಚಯ ಸ್ನೇಹವಾಗಿ ಬೆಳೆದು, ಬಳಿಕ ಇಬ್ಬರೂ ಪ್ರೀತಿಸಿ 2013ರಲ್ಲಿ ವಿವಾಹವಾಗಿದ್ದರು.

ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ 13 ವರ್ಷಗಳ ದಾಂಪತ್ಯ ಜೀವನದ ಬಳಿಕ ಬೇರೆಯಾಗುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾದ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಇದನ್ನೂ ಓದಿ: Bigg Boss Kannada 13: ಬಿಗ್ ಬಾಸ್ ಮನೆಗೆ ಮಂಜ ಎಂಟ್ರಿ ಕೊಟ್ಟಿದ್ದು ಹೇಗಿತ್ತು? ಸ್ಪರ್ಧಿಗಳು ಶಾಕ್‌

ಒಟ್ಟಿನಲ್ಲಿ, ಪವನ್ ಕಲ್ಯಾಣ್ ಮತ್ತು ಅನ್ನಾ ಕೊನಿಡೆಲಾ ಅವರ ವೈಯಕ್ತಿಕ ಜೀವನದ ಈ ಬೆಳವಣಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ದಂಪತಿಯ ಖಾಸಗಿತನವನ್ನು ಗೌರವಿಸಬೇಕು ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಅನಗತ್ಯ ಟೀಕೆಗಳನ್ನು ಮಾಡಬಾರದು ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗುತ್ತಿವೆ.