ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Prakash Raj: ಬೆಂಗಳೂರು ಮತದಾರರ ಪಟ್ಟಿಯಲ್ಲಿ ಪ್ರಕಾಶ್ ರಾಜ್ ಹೆಸರೇ ಇಲ್ಲ! ವಿಡಿಯೋ ಮೂಲಕ ಹೇಳಿದ್ದೇನು?

Prakash Raj: ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ ನೆಪದಲ್ಲಿ ಸುಮಾರು 65 ಲಕ್ಷ ಜನರ ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ದುರದೃಷ್ಟಕರ ಮತದಾರರಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ ಎಂದು ಪ್ರಕಾಶ್ ರಾಜ್ ವಿಡಿಯೋದಲ್ಲಿ ಹೇಳಿದ್ದಾರೆ. SIR ಅಡಿಯಲ್ಲಿ ಹೆಸರುಗಳನ್ನು ಹೊಂದಿರುವ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ಮತದಾರರ ಪಟ್ಟಿಯಲ್ಲಿ ತಮ್ಮ ಸೇರ್ಪಡೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ.

ಬೆಂಗಳೂರು ಮತದಾರರ ಪಟ್ಟಿಯಲ್ಲಿ ಪ್ರಕಾಶ್ ರಾಜ್ ಹೆಸರೇ ಇಲ್ಲ!

ಪ್ರಕಾಶ್‌ ರಾಜ್‌ -

Yashaswi Devadiga
Yashaswi Devadiga Aug 11, 2026 1:24 PM

ಬೆಂಗಳೂರಿನ ಮತದಾರರ ಪಟ್ಟಿಯಿಂದ ತಮ್ಮ ಹೆಸರು ರದ್ದಾಗಿರುವುದಾಗಿ ನಟ ಪ್ರಕಾಶ್ ರಾಜ್ (Prakash Raj) ವಿಡಿಯೋ ಮೂಲಕ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಎಸ್​​ಐಆರ್ (Special Intensive Revision – SIR) ಪ್ರಕ್ರಿಯೆ ಚಾಲ್ತಿಯಲ್ಲಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ (SIR) ನೆಪದಲ್ಲಿ ಸುಮಾರು 65 ಲಕ್ಷ ಜನರ ಮತಗಳನ್ನು ಡಿಲೀಟ್ ಮಾಡಲಾಗಿದೆ. ಈ ರೀತಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ದುರದೃಷ್ಟಕರ ಮತದಾರರಲ್ಲಿ ನಾನು ಕೂಡ ಒಬ್ಬನಾಗಿದ್ದೇನೆ ಎಂದು ಪ್ರಕಾಶ್ ರಾಜ್ ವಿಡಿಯೋದಲ್ಲಿ ಹೇಳಿದ್ದಾರೆ.

SIR ಅಡಿಯಲ್ಲಿ ಹೆಸರುಗಳನ್ನು ಹೊಂದಿರುವ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ಮತದಾರರ ಪಟ್ಟಿಯಲ್ಲಿ ತಮ್ಮ ಸೇರ್ಪಡೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ.

ಬೆಂಗಳೂರಿನ ಅರ್ಧದಷ್ಟು ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಅಪಾಯದಲ್ಲಿದ್ದಾರೆ.

ಅರ್ಧದಷ್ಟು ಜನರು ಹೊರಗೆ

ಬೆಂಗಳೂರಿನಲ್ಲಿ ನೋಂದಾಯಿತ ಮತದಾರರಲ್ಲಿ ಅರ್ಧದಷ್ಟು ಜನರು ಆಗಸ್ಟ್ 17 ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಎಸ್​​ಐಆರ್ (SIR) ಎಂದರೆ ವಿಶೇಷ ತೀವ್ರ ಪರಿಷ್ಕರಣೆ (Special Intensive Revision). ಇದು ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಶೀಲಿಸಲು ಮತ್ತು ನವೀಕರಿಸಲು ಮನೆ-ಮನೆಗೆ ಭೇಟಿ ನೀಡಿ ನಡೆಸುವ ಪ್ರಕ್ರಿಯೆಯಾಗಿದೆ. ಅಕ್ರಮ ಮತದಾರು, ಒಂದಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಮತ ಹೊಂದಿರುವವರು ಇನ್ನೂ ಹಲವು ಸಮಸ್ಯಾತ್ಮಕ ಮತದಾರರನ್ನು ಗುರುತಿಸಿ ಎಸ್​​ಐಆರ್ ಪ್ರಕ್ರಿಯೆ ಆಗುತ್ತಿದೆ.

ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ ಪ್ರಕಾಶ್ ರೈ "ಪ್ರಿಯ ಸ್ನೇಹಿತರೇ, ನಾನು ನಿಮ್ಮೊಂದಿಗೆ ಒಂದು ಜೋಕ್ ಹಂಚಿಕೊಳ್ಳಲು ಬಯಸುತ್ತೇನೆ. ಬೆಂಗಳೂರಿನಿಂದ ಡಿಲೀಟ್ ಆಗಿರುವ 65 ಲಕ್ಷ ಮತದಾರರಲ್ಲಿ ನಾನೂ ಸಹ ಒಬ್ಬ. ನಾನು ಹುಟ್ಟಿ, ಬೆಳೆದ ಕ್ಷೇತ್ರದಿಂದಲೇ ನನ್ನ ಮತವನ್ನು ತೆಗೆದು ಹಾಕಲಾಗಿದೆ. ನಾನು ಅದೇ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸಹ ಸ್ಪರ್ಧಿಸಿದ್ದೆ. ಆದರೂ ಸಹ ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದು ಜೋಕ್ ಅಲ್ಲದೆ ಮತ್ತೇನು?’ ಎಂದು ಪ್ರಕಾಶ್ ರೈ ಪ್ರಶ್ನೆ ಮಾಡಿದ್ದಾರೆ."

ಸಾರ್ವಜನಿಕರ ಹಕ್ಕುಗಳನ್ನು ಕಸಿಯುವ ರೀತಿಯಲ್ಲಿ ಈ ರೀತಿ ಏಕಾಏಕಿ ಲಕ್ಷಾಂತರ ಮತಗಳನ್ನು ಡಿಲೀಟ್ ಮಾಡಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಇಂತಹ ಗಂಭೀರ ತಪ್ಪುಗಳು ಹೇಗೆ ಸಾಧ್ಯ ಎಂದು ನಟ ಪ್ರಕಾಶ್ ರಾಜ್ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Amruthadhaare serial: ಇಷ್ಟು ದಿನ ಭೂಮಿ ಟೈಟ್ ಆಗೋದು ನೋಡಿದ್ರಿ, ಈಗ ಡುಮ್ಮ ಸರ್ ಸರದಿ!

ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋನಲ್ಲಿ ಮಾತನಾಡಿರುವ ಪ್ರಕಾಶ್ ರೈ, ‘ನನ್ನ ಮತ ಡಿಲೀಟ್ ಆಗಿದೆ. ಅದನ್ನು ಮರಳಿ ಪಡೆಯಲು ಏನೇನು ಮಾಡಬೇಕೊ ಅದೆಲ್ಲವನ್ನೂ ಮಾಡುತ್ತೇನೆ. ಎಷ್ಟು ದಾಖಲೆಗಳನ್ನು ತೋರಿಸಬೇಕಾಗುತ್ತದೆಯೋ ನೋಡೋಣ. ಎಂದು ಪ್ರಕಾಶ್ ರೈ ಹೇಳಿದ್ದಾರೆ.