ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Prakash Raj: ಧರ್ಮಸ್ಥಳ ಬುರುಡೆ ಪ್ರಕರಣ; ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್

Prakash Raj: ಮೊದಲು ಬುರುಡೆ ಗ್ಯಾಂಗ್ ಜೊತೆಗಿದ್ದ ಚಿನ್ನಯ್ಯ ಇದೀಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿದೆ ಈ ಕುರಿತು ಮಾಧ್ಯಮಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ, ಪ್ರಕಾಶ್ ರಾಜ್ ಈ ಆರೋಪಗಳನ್ನು ಸುಳ್ಳು ಎಂದು ಖಂಡಿಸಿ, ಶೀಘ್ರದಲ್ಲೇ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣ;  ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್

ಪ್ರಕಾಶ್‌ ರಾಜ್‌ -

Yashaswi Devadiga
Yashaswi Devadiga Jun 12, 2026 11:44 AM

ಧರ್ಮಸ್ಥಳಕ್ಕೆ ಪ್ರಕರಣದಲ್ಲಿ (Dharmasthala) ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಮೊದಲು ಬುರುಡೆ ಗ್ಯಾಂಗ್ ಜೊತೆಗಿದ್ದ ಚಿನ್ನಯ್ಯ (Chinnayya) ಇದೀಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿದೆ ಈ ಕುರಿತು ಮಾಧ್ಯಮಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ, ಪ್ರಕಾಶ್ ರಾಜ್ (Prakash Raj) ಈ ಆರೋಪಗಳನ್ನು ಸುಳ್ಳು ಎಂದು ಖಂಡಿಸಿ, ಶೀಘ್ರದಲ್ಲೇ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.

ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್

‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾ ಜ್ ಪೋಸ್ಟ್ ಆರಂಭಿಸಿದ್ದಾರೆ.

ಇದನ್ನೂ ಓದಿ: Akshay Kumar: ಸಿನಿ ಇಂಡಸ್ಟ್ರಿಗೆ ಗುಡ್‌ಬೈ? ಅಕ್ಷಯ್ ಕುಮಾರ್ ಏಕಾಏಕಿ ಹೀಗೇಕೆ ಅಂದ್ರು?

‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.



ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು .. ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ"ಎಂದು ಬರೆದುಕೊಂಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ.

ಇದನ್ನೂ ಓದಿ: Pranit More: ಬಿರಿಯಾನಿ ವಿವಾದ: ಪ್ರಣಿತ್ ಮೋರೆ, ಹಿಮಾಂಶು ಜಂಗ್ರಾ, ಸೇಜಲ್ ಪವಾರ್‌ಗೆ ಮಹಿಳಾ ಆಯೋಗ ನೋಟಿಸ್

ಮಾಸ್ಕ್ ಮ್ಯಾನ್' ಚಿನ್ನಯ್ಯ ಅವರ ಹೈಕೋರ್ಟ್ ಅರ್ಜಿ ಕೇವಲ ಒಂದು ಆರೋಪವೋ ಅಥವಾ ಇದರ ಹಿಂದೆ ನಿಜಕ್ಕೂ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆದಿದೆಯೇ ಎಂಬುದು ನ್ಯಾಯಾಲಯದ ತನಿಖೆಯಿಂದಷ್ಟೇ ಹೊರಬರಬೇಕಿದೆ.