Raj B Shetty: 'ಕರಾವಳಿ’ ಚಿತ್ರದಲ್ಲಿ 'ಮಾವೀರ'ನಾಗಿ ವಿಭಿನ್ನ ಲುಕ್‌ನಲ್ಲಿ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ!
ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಸು ಫ್ರಮ್ ಸೋ (Su From So) ಚಿತ್ರ ಬಹಳಷ್ಟು ಸದ್ದು ಮಾಡುತ್ತಿದೆ. ಅವರು ನಿರ್ಮಿಸಿರುವ ಕಾಮಿಡಿ ಎಂಟರ್‌ಟೈನರ್ ಸಿನಿಮಾ 50 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿ ಪ್ರಿಯರನ್ನು ಮನರಂಜಿಸುತ್ತಿದೆ. ಈ ನಡುವೆ ರಾಜ್ ಬಿ ಶೆಟ್ಟಿ ಮತ್ತೊಂದು ಗುಡ್ ನ್ಯೂಸ್ ಅನ್ನು ಅವರ ಅಭಿಮಾನಿಗಳಿಗೆ ನೀಡಿದ್ದಾರೆ. ಡೈರೆಕ್ಟರ್ ಗುರುದತ್ ಗಾಣಿಗ ನಿರ್ದೇಶನದ 'ಕರಾವಳಿ' ಚಿತ್ರದ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.


ಬೆಂಗಳೂರು: ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಸು ಫ್ರಮ್ ಸೋ (Su From So) ಚಿತ್ರ ಬಹಳಷ್ಟು ಸದ್ದು ಮಾಡುತ್ತಿದೆ. ಅವರು ನಿರ್ಮಿಸಿರುವ ಕಾಮಿಡಿ ಎಂಟರ್‌ಟೈನರ್ ಸಿನಿಮಾ 50 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿ ಪ್ರಿಯರನ್ನು ಮನರಂಜಿಸುತ್ತಿದೆ. ಈ ನಡುವೆ ರಾಜ್ ಬಿ ಶೆಟ್ಟಿ ಮತ್ತೊಂದು ಗುಡ್ ನ್ಯೂಸ್ ಅನ್ನು ಅವರ ಅಭಿಮಾನಿಗಳಿಗೆ ನೀಡಿದ್ದಾರೆ. ಡೈರೆಕ್ಟರ್ ಗುರು ದತ್ ಗಾಣಿಗ ನಿರ್ದೇಶನದ 'ಕರಾವಳಿ' ಚಿತ್ರದ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಜ್ವಲ್ ದೇವರಾಜ್ ಈ ಚಿತ್ರದ ನಾಯಕ ಆಗಿದ್ದಾರೆ. 'ಎಕ್ಕ' ಚಿತ್ರದಲ್ಲಿ ಮಿಂಚಿದ್ದ ಸಂಪದಾ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ
ಕಂಬಳ ಸ್ಪರ್ಧೆಯ ಸುತ್ತಾ ಈ ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಎರಡು ಕೋಣಗಳ ನಡುವೆ ನಿಂತಿರುವ ರಾಜ್ ಬಿ ಶೆಟ್ಟಿ, ಒಂದು ಕೈಯಲ್ಲಿ ಪಂಜು ಹಿಡಿದು ಗಮನ ಸೆಳೆದಿದ್ದಾರೆ. ಇನ್ನು ಟೀಸ ರ್‌ನಲ್ಲಿ ರಾಜ್ ಲುಕ್ ವಿಭಿನ್ನವಾಗಿದ್ದು ಮಾವೀರ ಅನ್ನುವ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸ ಲಿದ್ದಾರೆ. ಟೀಸರ್‌ನಲ್ಲಿ ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಹಾವೀರನ ಎನ್ನುವ ಕುತೂಹಲ ಹುಟ್ಟು ಹಾಕಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಸಿಕ್ಕಿಲ್ಲ. ಪ್ರಜ್ವಲ್ ದೇವರಾಜ್ ವಿಶಿಷ್ಟ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಬಂದಿರುವ ಪಸ್ಟ್ ಲುಕ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸುತ್ತಿದೆ.
ಇದನ್ನು ಓದಿ:Coolie Movie: ಅಂದುಕೊಂಡ ದಿನಕ್ಕೆ ರಿಲೀಸ್ ಆಗಲ್ವಾ ರಜನಿಕಾಂತ್ ನಟನೆಯ ‘ಕೂಲಿ’ ಚಿತ್ರ? ಏನಿದು ಕೃತಿಚೌರ್ಯ ಆರೋಪ?
ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣದಲ್ಲಿ ಸಿನಿಮಾ ಮೂಡಿ ಬರ್ತಿದೆ. ಇದೀಗ ರಾಜ್ ಬಿ. ಶೆಟ್ಟಿ ಹೊಸ ಲುಕ್ ನೋಡಿ ಚಿತ್ರದ ನಿರೀಕ್ಷೆ ಮತ್ತಷ್ಟು ಹೆಚ್ಚು ಮಾಡಿದೆ.ರಾಜ್ ಬಿ ಶೆಟ್ಟಿ ನಟನೆ, ನಿರ್ಮಾಣದ ‘ಸು ಫ್ರಂ ಸೋ’ ಭಾರಿ ಹಿಟ್ ಆ ಬೆನ್ನಲ್ಲಿಯೇ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ವರ್ಷಾಂತ್ಯದ ವೇಳೆಗೆ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ.