ಅಂಜನಾದ್ರಿ ಬೆಟ್ಟದಲ್ಲಿ ಶುರುವಾಯ್ತು ರಿಷಬ್ ಶೆಟ್ಟಿ ಹೊಸ ಸಿನಿಮಾ; ʻಜೈ ಹನುಮಾನ್ʼ ಚಿತ್ರಕ್ಕೆ ಅದ್ದೂರಿ ಮುಹೂರ್ತ
Jai Hanuman Movie: ರಿಷಬ್ ಶೆಟ್ಟಿ ಅವರ ಜೈ ಹನುಮಾನ್ ಸಿನಿಮಾದ ಮುಹೂರ್ತವು ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಇಂದು (ಫೆ.22) ಅದ್ದೂರಿಯಾಗಿ ನೆರವೇರಿತು. 'ಕಾಂತಾರ'ದ ಬ್ಲಾಕ್‌ಬಸ್ಟರ್ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ನಟಿಸುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸುತ್ತಿದ್ದಾರೆ.
-
ʻಕಾಂತಾರ: ಚಾಪ್ಟರ್ 1ʼ ಸಿನಿಮಾದ ಬ್ಲಾಕ್ ಬಸ್ಟರ್ ಗೆಲುವಿನ ನಂತರ ರಿಷಬ್ ಶೆಟ್ಟಿ ಮುಂದೆ ಯಾವ ಸಿನಿಮಾಗಳನ್ನು ಮಾಡಲಿದ್ದಾರೆ ಎಂಬ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿದೆ. ಅದರಲ್ಲೀಗ ಮೊದಲು ತೆಲುಗಿನ ʻಜೈ ಹನುಮಾನ್ʼ ಸಿನಿಮಾವನ್ನು ರಿಷಬ್ ಶೆಟ್ಟಿ ಕೈಗೆತ್ತಿಕೊಂಡಿದ್ದಾರೆ. ಇಂದು (ಫೆ.22) ಆ ಚಿತ್ರದ ಮುಹೂರ್ತ ನೆರವೇರಿದೆ. ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಸಿನಿಮಾದ ಮುಹೂರ್ತ ನಡೆದಿದ್ದು, ಇಡೀ ಚಿತ್ರತಂಡ ಭಾಗಿಯಾಗಿದೆ.
ಇದು ಮೈತ್ರಿ ಮೂವೀ ಮೇಕರ್ಸ್ ಸಿನಿಮಾ
ತೆಲುಗಿನ ಅನೇಕ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ಮೈತ್ರಿ ಮೂವೀ ಮೇಕರ್ಸ್ ತಂಡ ಜೈ ಹನುಮಾನ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಹನುಮಾನ್ ಸಿನಿಮಾ ಮಾಡಿ, ಭಾರಿ ಗೆಲುವು ಸಂಪಾದಿಸಿದ್ದ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಈ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ʻಹನುಮಾನ್ʼ ಬಳಿಕ ಪುನಃ ಅವರು ನಿರ್ದೇಶನಕ್ಕೆ ಮರಳಿದ್ದು, ಈ ಚಿತ್ರದ ಮೂಲಕ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ರಿಷಬ್ ಶೆಟ್ಟಿ-ಅಕ್ಷಯ್ ಸಿನಿಮಾಗಳು ಒಂದೇ ದಿನ ತೆರೆಗೆ; ಬಾಕ್ಸ್ ಆಫೀಸ್ ಫೈಟ್ ಪಕ್ಕಾ!
ಅಂಜನಾದ್ರಿ ಬೆಟ್ಟದಲ್ಲಿ ನಡೆದ ಮುಹೂರ್ತದಲ್ಲಿ ರಿಷಬ್ ಶೆಟ್ಟಿ, ಅವರ ಪತ್ನಿ ಪ್ರಗತಿ ಶೆಟ್ಟಿ ಅವರು ಭಾಗಿಯಾಗಿದ್ದರು. ನಿರ್ದೇಶಕ ಪ್ರಶಾಂತ್ ವರ್ಮಾಗೆ ಶುಭ ಹಾರೈಸಲು ಹನುಮಾನ್ ಸಿನಿಮಾ ನಟ ತೇಜ ಸಜ್ಜಾ ಕೂಡ ಆಗಮಿಸಿದ್ದು ವಿಶೇಷ. ಬಹಳ ಶಾಸ್ತ್ರೋಕ್ತವಾಗಿ ಸಿನಿಮಾದ ಮುಹೂರ್ತ ನಡೆದಿದ್ದು, ಈ ಚಿತ್ರದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ರಿಷಬ್ ಶೆಟ್ಟಿ ಫ್ಯಾನ್ಸ್‌ಗಂತೂ ಈ ಸಿನಿಮಾ ಘೋಷಣೆ ಆಗಿದ್ದು, ಭಾರಿ ಸಂತೋಷವನ್ನ ಉಂಟು ಮಾಡಿದೆ. 2027ರ ಆರಂಭದಲ್ಲೇ ಈ ಸಿನಿಮಾವನ್ನು ತೆರೆಕಾಣಿಸುವ ಸಾಧ್ಯತೆಗಳಿವೆ.
ಜೈ ಹನುಮಾನ್ ಸಿನಿಮಾದ ಮುಹೂರ್ತ ವಿಡಿಯೋ
ʻಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯʼ; ರಿಷಬ್ ಶೆಟ್ಟಿ ದಂಪತಿಗೆ ಮದುವೆ ವಾರ್ಷಿಕೋತ್ಸವದ ಸಂಭ್ರಮ
ಹನುಮಂತನ ಸುತ್ತ ಸಾಗುವ 'ಜೈ ಹನುಮಾನ್' ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಅವರ ಪಾತ್ರವು ಹೇಗೆ ಇರಬಹುದು ಎಂಬ ಕುತೂಹಲ ಇದೆ. ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಸಂಪೂರ್ಣವಾಗಿ ಪ್ರಿ-ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದ್ದು, ಏಪ್ರಿಲ್‌ನಿಂದ ಶೂಟಿಂಗ್ ಆರಂಭವಾಗುವ ನಿರೀಕ್ಷೆ ಇದೆ. ʻಜೈ ಹನುಮಾನ್ʼ ಸಿನಿಮಾವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಲಿದೆ.