Yash: 'ಟಾಕ್ಸಿಕ್' ಸಿನಿಮಾದ ಟ್ರೇಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್; ಬೆಂಗಳೂರಿನಲ್ಲಿ ನಡೆಯಲಿದೆ ಅದ್ದೂರಿ ಸಮಾರಂಭ
ಯಶ್ ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರದ ಟ್ರೇಲರ್ ಆಗಸ್ಟ್ 8 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಇದೆ. ಈ ಚಿತ್ರ ಆಗಸ್ಟ್ 26ಕ್ಕೆ ತೆರೆಗೆ ಬರಲಿದೆ. ಸದ್ಯ ಯಶ್ ಅವರ ಅಭಿಮಾನಿಗಳ ಗಮನ ಟಾಕ್ಸಿಕ್ ಟ್ರೇಲರ್ ಮೇಲಿದೆ.
-
ʻರಾಕಿಂಗ್ ಸ್ಟಾರ್ʼ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' (Toxic: A Fairytale for Grown-Ups) ಸಿನಿಮಾದ ಬಿಡುಗಡೆಗೆ ಕೌಂಟ್‌ಡೌನ್ ಆರಂಭವಾಗಿದೆ. ಈ ಚಿತ್ರವು ಆಗಸ್ಟ್ 26 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಸಜ್ಜಾಗಿದ್ದು, ಇದೀಗ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ ಎಂಬ ವರದಿಗಳು ಕೇಳಿಬರುತ್ತಿವೆ.
ಚಿತ್ರದ ಥಿಯೇಟ್ರಿಕಲ್ ರಿಲೀಸ್‌ಗೂ ಮುನ್ನ, ಆಗಸ್ಟ್ 8 ರಂದು ಸಿನಿಮಾದ ಪವರ್‌ಫುಲ್ ಟ್ರೇಲರ್ ಅನ್ನು ಅನಾವರಣಗೊಳಿಸಲು ಚಿತ್ರತಂಡ ಯೋಜಿಸಿದೆ ಎನ್ನಲಾಗಿದೆ. ಈ ಟ್ರೇಲರ್ ಲಾಂಚ್‌ಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್ ಸಮಾರಂಭವೊಂದನ್ನು ಆಯೋಜಿಸಲು ಸಿದ್ಧತೆಗಳು ನಡೆಯುತ್ತಿದ್ದು, ಇನ್ನಷ್ಟೇ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ. ಈ ಹಿಂದೆ ಮಾರ್ಚ್ 19ರಂದು ಈ ಸಿನಿಮಾ ತೆರೆಕಾಣಲಿದೆ ಎಂದು ಮಾಹಿತಿ ಇತ್ತು. ಆಗ ಮಾರ್ಚ್ ಮೊದಲ ವಾರದಲ್ಲೇ ಬೆಂಗಳೂರಿನಲ್ಲೇ ಟ್ರೇಲರ್ ಲಾಂಚ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಕೊನೇ ಕ್ಷಣದಲ್ಲಿ ಅದು ರದ್ದಾಗಿತ್ತು. ಇದೀಗ ಆಗಸ್ಟ್ 8ರಂದು ಬೆಂಗಳೂರಿನಲ್ಲಿ ನಡೆಯುವ ಇವೆಂಟ್‌ಗಾಗಿ ಅಭಿಮಾನಿಗಳು ಕಾದಿದ್ದಾರೆ.
Toxic Movie: 'ಟಾಕ್ಸಿಕ್' ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಹೊಸ ಪೋಸ್ಟ್! ಏನಿದು ಅಪ್‌ಡೇಟ್?
ತಂದೆ-ಮಗನ ಸಂಘರ್ಷದ ಆಕ್ಷನ್ ಥ್ರಿಲ್ಲರ್
ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ಟಾಕ್ಸಿಕ್' ಸಿನಿಮಾದಲ್ಲಿ ತಂದೆ ಮತ್ತು ಮಗನ ನಡುವಿನ ಪೈಪೋಟಿಯ ಕಥಾಹಂದರ ಹೊಂದಿರುವ ಹೈ-ವೋಲ್ಟೇಜ್ ಆಕ್ಷನ್ ಥ್ರಿಲ್ಲರ್ ಸಿನಿಮಾ. ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ. ಚಿತ್ರದಲ್ಲಿ ಯಶ್ ಜೊತೆಗೆ ಅಕ್ಷಯ್ ಒಬೆರಾಯ್, ಸುದೇವ್ ನಾಯರ್ ಹಾಗೂ ಅಮಿತ್ ತಿವಾರಿ ಸೇರಿದಂತೆ ದೊಡ್ಡ ತಾರಾಗಣವೇ ಇದೆ.
ಅದ್ದೂರಿ ಬಜೆಟ್‌ನಲ್ಲಿ ನಿರ್ಮಾಣ
ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ನೀಡುತ್ತಿದ್ದರೆ, ವಿಶಾಲ್ ಮಿಶ್ರಾ ಮತ್ತು ತನಿಷ್ಕ್ ಬಾಗ್ಚಿ ಹಾಡುಗಳಿಗೆ ರಾಗಸಂಯೋಜನೆ ಮಾಡಿದ್ದಾರೆ. ಹಾಲಿವುಡ್‌ನ ಪ್ರಸಿದ್ಧ ಆಕ್ಷನ್ ಕೋರಿಯೋಗ್ರಾಫರ್ ಜೆಜೆ ಪೆರ್ರಿ ಹಾಗೂ ಭಾರತದ ಖ್ಯಾತ ಅನ್ಬರಿವ್ ಜೋಡಿ ಸಿನಿಮಾದ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿದ್ದು, ರಾಜೀವ್ ರವಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. 'ಟಾಕ್ಸಿಕ್' ಮೂಲ ಕನ್ನಡ ಮತ್ತು ಇಂಗ್ಲಿಷ್ ಆವೃತ್ತಿಗಳ ಜೊತೆಗೆ ಮಲಯಾಳಂ, ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ.
Toxic movie: ‘ಟಾಕ್ಸಿಕ್’ ಬಾಕ್ಸ್ ಆಫೀಸ್ನಲ್ಲಿ ಎದುರಾಗುತ್ತಿರುವ ಸಿನಿಮಾಗಳು ಇವು
ಈಗಾಗಲೇ ಗಮನ ಸೆಳೆದಿರುವ ಟೀಸರ್, ಹಾಡು
ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ 1 ನಿಮಿಷ 44 ಸೆಕೆಂಡುಗಳ ಟೀಸರ್‌ನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ ಅವರ ಝಲಕ್ ತೋರಿಸಲಾಗಿತ್ತು. ಮಹಿಳೆಯರ ಗುಂಪನ್ನು ಯಶ್ ಎದುರಿಸುವ ದೃಶ್ಯ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಯಶ್ ಹಾಗೂ ಕಿಯಾರಾ ನಟನೆಯ 'ತಬಾಹಿ' ಎಂಬ ರೋಮ್ಯಾಂಟಿಕ್ ಹಾಡಿನ ವಿಶುವಲ್ಸ್ ಕೂಡ ವೈರಲ್ ಆಗಿತ್ತು.
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದೆ. ಇನ್ನು ಈ ಚಿತ್ರದ ಬೆನ್ನಲ್ಲೇ, 2026ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿರುವ ರಣಬೀರ್ ಕಪೂರ್ ನಟನೆಯ 'ರಾಮಾಯಣ' ಚಿತ್ರದಲ್ಲಿ ಯಶ್ 'ರಾವಣ'ನಾಗಿ ಅಬ್ಬರಿಸಲಿದ್ದಾರೆ. ಅಲ್ಲಿಗೆ ಆಗಸ್ಟ್‌ನಲ್ಲಿ ಟಾಕ್ಸಿಕ್, ನವೆಂಬರ್‌ನಲ್ಲಿ ರಾಮಾಯಣ ಮೂಲಕ ಯಶ್ ಈ ವರ್ಷ ಎರಡು ಬಾರಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ.