ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Salman Khan: ಇಷ್ಟು ದಿನ ಸುಮ್ಮನಿದ್ದು, ಕದನ ವಿರಾಮದ ಬಗ್ಗೆ ಟ್ವೀಟ್‌ ಮಾಡಿದ ಸಲ್ಮಾನ್‌ ಖಾನ್‌; ನೆಟ್ಟಿಗರಿಂದ ತೀವ್ರ ಆಕ್ರೋಶ

ಕಳೆದ ಮೇ 7ರಿಂದ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಬಾಲಿವುಡ್ ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಿರಾಳತೆ ವ್ಯಕ್ತಪಡಿಸಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದು ಬಳಿಕ ತೀವ್ರ ಟೀಕೆಗೆ ಗುರಿಯಾಗಿದ್ದರಿಂದ ಅವರು ತಮ್ಮ ಪೋಸ್ಟ್ ಅನ್ನು ಅಳಿಸಿ ಹಾಕಿದ್ದಾರೆ.

ಕದನ ವಿರಾಮದ ಪೋಸ್ಟ್‌ ಮಾಡಿ ಟೀಕೆಗೆ ಗುರಿಯಾದ ಸಲ್ಲು

ಮುಂಬೈ: ಕಾಶ್ಮೀರದ (Jammu-Kashmir) ಪಹಲ್ಗಾಮ್ (Pahalgam Terror Attack) ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಏ. 22ರಂದು ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ (terror attack) ಹಾಗು ಅನಂತರ ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆ ಬಗ್ಗೆ ಮೌನವಾಗಿದ್ದ ಬಾಲಿವುಡ್ ನ (Bollywood) ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಕದನ ವಿರಾಮದ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಬಳಿಕ ಅವರು ತಮ್ಮ ಟ್ವೀಟ್ ಅನ್ನು ಅಳಿಸಿಹಾಕಿದ್ದಾರೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಕಳೆದ ಮೇ 7ರಿಂದ ಉಂಟಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಬಾಲಿವುಡ್ ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಿರಾಳತೆ ವ್ಯಕ್ತಪಡಿಸಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದರು. ಇದು ಬಳಿಕ ತೀವ್ರ ಟೀಕೆಗೆ ಗುರಿಯಾಯಿತು.

ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮಿಲಿಟರಿ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿದ ಅನಂತರ ಎರಡೂ ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸಲು ಒಪ್ಪಿಕೊಂಡ ಸ್ವಲ್ಪ ಸಮಯದ ಬಳಿಕ "ಕದನ ವಿರಾಮಕ್ಕಾಗಿ ದೇವರಿಗೆ ಧನ್ಯವಾದಗಳು..." ಎಂದು ಬರೆದು ಎಕ್ಸ್ ನಲ್ಲಿ ಶನಿವಾರ ಸಲ್ಮಾನ್ ಖಾನ್, ಟ್ವೀಟ್‌ ಮಾಡಿದ್ದರು. ಬಳಿಕ ಅದನ್ನು ಅಳಿಸಿದ್ದಾರೆ.

salman

ಅವರ ಈ ನಡೆ ಸಾಮಾಜಿಕ ಜಾಲತಾಣದಲ್ಲಿ ಅನೇಕರ ಗಮನ ಸೆಳೆದಿದೆ. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಕೂಡ ಮಾಡಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅನಂತರದ ದಿನಗಳಲ್ಲಿ ಭಯೋತ್ಪಾದಕ ದಾಳಿ, ಭಾರತೀಯ ಸೇನೆಯ ಪ್ರತಿಕ್ರಿಯೆ ಬಗ್ಗೆ ಮೌನವಾಗಿದ್ದ ಸಲ್ಮಾನ್ ಇದೀಗ ಕದನ ವಿರಾಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಅನೇಕರು ಅವರನ್ನು ಟೀಕಿಸಿದರು.

ಇದನ್ನೂ ಓದಿ: Rashmika Mandanna: ಹುಟ್ಟುಹಬ್ಬದ ಶುಭಾಶಯಗಳು ವಿಜ್ಜು; ವಿಜಯ್ ದೇವರಕೊಂಡಗೆ ಪ್ರೀತಿಯಿಂದ ಬರ್ತ್ಡೇ ವಿಶ್ ತಿಳಿಸಿದ ರಶ್ಮಿಕಾ ಮಂದಣ್ಣ

ಭಾರತೀಯ ಸೈನಿಕರು ಮತ್ತು ಭಯೋತ್ಪಾದನೆಗೆ ಬಲಿಯಾಗಿರುವವರ ತ್ಯಾಗ ಮತ್ತು ಧೈರ್ಯವನ್ನು ನಿರ್ಲಕ್ಷಿಸುವ ನಟ ಸಲ್ಮಾನ್ ಶಾಂತಿಯನ್ನು ಪ್ರತಿಪಾದಿಸಲು ತ್ವರಿತವಾಗಿ ಮುಂದೆ ಬಂದಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ.



ಕೆಲವರು ಕಾಮೆಂಟ್ ನಲ್ಲಿ ಇವರಿಗೆ ಭಾರತೀಯರ ನೋವಿಗಿಂತ ಪಾಕಿಸ್ತಾನದ ಸುರಕ್ಷತೆ ಬಗ್ಗೆ ಹೆಚ್ಚು ಕಾಳಜಿ ಇದೆ ಎಂದು ಆರೋಪಿಸಿದ್ದಾರೆ. ತಮ್ಮ ಟ್ವಿಟ್ ನಿಂದ ತೀವ್ರ ಟೀಕೆಗೆ ಗುರಿಯಾದ ಸಲ್ಮಾನ್ ಬಳಿಕ ಅದನ್ನು ಅಳಿಸಿ ಹಾಕಿದ್ದಾರೆ. ಆದರೂ ಅವರ ಟ್ವಿಟ್ ನ ಸ್ಕ್ರೀನ್‌ಶಾಟ್‌ಗಳು ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ಸಲ್ಮಾನ್ ಖಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಒಬ್ಬ ಕಾಮೆಂಟ್ ನಲ್ಲಿ ಸಲ್ಮಾನ್ ಖಾನ್ ತಮ್ಮ ಟ್ವೀಟ್ ಅನ್ನು ಅಳಿಸಿದ್ದಾರೆ, ಪಹಲ್ಗಾಮ್ ಬಗ್ಗೆ ಯಾವುದೇ ಪೋಸ್ಟ್‌ಗಳನ್ನು ಮಾಡಿಲ್ಲ, ಆದರೆ ಭಾರತದ ಮೇಲೆ ಭಯೋತ್ಪಾದಕ ದಾಳಿಯ ಸಮಯದಲ್ಲಿ ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಕೂಡ ಮೌನವಾಗಿದ್ದರು ಎಂದು ಬರೆದಿದ್ದರೆ. ಇನ್ನೊಬ್ಬರು ಭಾರತ ಸಲ್ಮಾನ್ ಖಾನ್ ಅವರನ್ನು ಬಹಿಷ್ಕರಿಸಬೇಕು ಎಂದು ಹೇಳಿದ್ದಾರೆ.