ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Umesh: ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ ಹಿರಿಯ ನಟ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು

-

Ramesh B Ramesh B Oct 10, 2025 4:28 PM

ಬೆಂಗಳೂರು, ಅ. 10: ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ (Actor Umesh) ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ.

ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌ ಉಮೇಶ್‌ ಅವರ ಪೂರ್ಣ ಹೆಸರು ಮೈಸೂರು ಶ್ರೀಕಂಠಯ್ಯ ಉಮೇಶ್. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣದಿಂದ ಕೆಲವು ಸಮಯಗಳಿಂದ ಅವರು ಬಣ್ಣ ಹಚ್ಚಿಲ್ಲ.

ಈ ಸುದ್ದಿಯನ್ನೂ ಓದಿ: Mahalaya Movie: ಮೋಹನ್ ಮಾಯಣ್ಣ ನಿರ್ದೇಶನದ ʼಮಹಾಲಯʼ ಚಿತ್ರಕ್ಕೆ ನಟ ಶ್ರೀಮುರಳಿ ಚಾಲನೆ

1945ರಲ್ಲಿ ಮೈಸೂರಿನಲ್ಲಿ ಜನಿಸಿದ ಉಮೇಶ್‌ ರಂಗಭೂಮಿ ಮೂಲಕ ನಟನಾ ಕೇತ್ರಕ್ಕೆ ಕಾಲಿಟ್ಟರು. 4ನೇ ವರ್ಷದಲ್ಲಿ ಅವರು ನಾಟಕಗಳಲ್ಲಿ ಅಭಿನಯಿಸತೊಡಗಿದರು. 1960ರಲ್ಲಿ ತೆರೆಕಂಡ ಕನ್ನಡದ ʼಮಕ್ಕಳ ರಾಜ್ಯʼ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟರು. ಹಾಸ್ಯ ಪಾತ್ರದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ.

350 ಚಿತ್ರಗಳಲ್ಲಿ ನಟನೆ

ಉಮೇಶ್‌ 60 ವರ್ಷಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ. 1975ರಲ್ಲಿ ತೆರೆಕಂಡ ʼಕಥಾ ಸಂಗಮʼ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ಉಮೇಶ್‌ ನಟಿಸಿದ ಕೊನೆಯ ಚಿತ್ರ 2023ರಲ್ಲಿ ರಿಲೀಸ್‌ ಆದ ʼಡೇರ್‌ಡೆವಿಲ್‌ ಮುಸ್ತಫʼ. ಉಮೇಶ್‌ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಉಮೇಶ್‌ ಅಭಿನಯದ ಪ್ರಮುಖ ಕನ್ನಡ ಚಿತ್ರಗಳು

ʼನಾಗರ ಹೊಳೆʼ (1978), ʼಗುರು ಶಿಷ್ಯರುʼ (1981), ʼಅನುಪಮಾʼ (1981), ʼಕಾಮನ ಬಿಲ್ಲುʼ (1983), ʼಅಪೂರ್ವ ಸಂಗಮʼ (1984), ʼಶ್ರುತಿ ಸೇರಿದಾಗʼ (1987), ʼಶ್ರಾವಣ ಬಂತುʼ (1984), ʼಮಲಯ ಮಾರುತʼ (1986), ʼಗೋಲ್‌ಮಾಲ್‌ ರಾಧಾಕೃಷ್ಣʼ (1990), ʼನೀನು ನಕ್ಕರೆ ಹಾಲು ಸಕ್ಕರೆʼ (1993), ʼವೆಂಕಟ್‌ ಇನ್‌ ಸಂಕಟʼ (2007).