ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chaithra Kundapura: ಸ್ವಂತ ತಂದೆಯನ್ನೇ ಕೊಲೆ ಮಾಡಲು ಸುಪಾರಿ ಕೊಟ್ರಾ ಚೈತ್ರಾ ಕುಂದಾಪುರ: ಹೊಸ ಆರೋಪ

ಚೈತ್ರಾ ಕುಂದಾಪುರ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಮತ್ತೊಂದು ದೊಡ್ಡ ಆರೋಪ ಮಾಡಿದ್ದಾರೆ. ಬಾಲಕೃಷ್ಣ ಅವರು ಮಗಳ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ಇದರಿಂದ ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ

ತಂದೆಯನ್ನೇ ಕೊಲೆ ಮಾಡಲು ಸುಪಾರಿ ಕೊಟ್ರಾ ಚೈತ್ರಾ

Chaithra kundapura Father

Profile Vinay Bhat May 23, 2025 11:24 AM

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್ ​ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ (Chaitra Kundapura) ಇತ್ತೀಚೆಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರೀಕಾಂತ್ ಕಶ್ಯಪ್ ಎಂಬವರ ಜೊತೆ ಚೈತ್ರಾ ವಿವಾಹವಾಗಿದೆ. ತುಂಬಾ ಸಿಂಪಲ್ ಆಗಿ ನಡೆದಿದ್ದ ಈ ವಿವಾಹಕ್ಕೆ ಬೆರಳಣಿಕೆಯಷ್ಟು ಮಂದಿ ಮಾತ್ರ ಬಂದಿದ್ದರು. ​ಕೆಲ ಬಿಗ್ ​ಬಾಸ್​ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು. ಮದುವೆ ಆದ ಕೆಲವೇ ದಿನಗಳಲ್ಲಿ, ಕಳೆದ ವಾರವಷ್ಟೆ ಚೈತ್ರಾ ಕುಂದಾಪುರ ಅವರ ತಂದೆ ಮಾಧ್ಯಮದ ಮುಂದೆ ಬಂದು ಬಾಂಬ್ ಸಿಡಿಸುತ್ತಿದ್ದಾರೆ.

ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿ, ಮಗಳ ಮದುವೆಯನ್ನು ನಾನು ಒಪ್ಪುವುದಿಲ್ಲ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ (ಚೈತ್ರಾ ಅವರ ಅಮ್ಮ) ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ’ ಎಂದು ಹೇಳಿದ್ದರು.

ಇದೀಗ ಚೈತ್ರಾ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಮತ್ತೊಂದು ದೊಡ್ಡ ಆರೋಪ ಮಾಡಿದ್ದಾರೆ. ಬಾಲಕೃಷ್ಣ ಅವರು ಮಗಳ ವಿರುದ್ಧ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ಇದರಿಂದ ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ. ಆಸ್ತಿಗಾಗಿ ಚೈತ್ರಾ ಕುಂದಾಪುರ ಬೆದರಿಕೆ ಹಾಕಿದ್ದಾಳೆ. ಆಕೆಗೆ ಭೂಗತ ದೊರೆಗಳ ಸಂಪರ್ಕವಿದ್ದು, ಯಾವುದೇ ಹೇಯ ಕೃತ್ಯ ಮಾಡಲು ಹೇಸುವವಳಲ್ಲ ಎಂದು ಮಗಳ ವಿರುದ್ಧ ತಂದೆ ಬಾಲಕೃಷ್ಣ ನಾಯಕ್‌ ದೂರು ಕೊಟ್ಟಿದ್ದಾರೆ.

‘ಚೈತ್ರಾ ತನ್ನ ಗೆಳೆಯರ ಜೊತೆ ನಮ್ಮ ಮನೆಗೆ ಬಂದು ದೊಡ್ಡ ಮಟ್ಟದ ದುಡ್ಡಿನ ವ್ಯವಹಾರ ಮಾಡುತ್ತಿದ್ದರು. ಒಂದು ದಿನ ರಾತ್ರಿ ಕೋಟ್ಯಂತರ ರೂಪಾಯಿ ತಂದು ಎಣಿಸಿದ್ದನ್ನು ನಾನು ನನ್ನ ಕಣ್ಣಾರೆ ನೋಡಿದ್ದೇನೆ, ಇದನ್ನು ಕಂಡು ನಾನು ಭಯಗೊಂಡೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಅವರು ದಬಾಯಿಸಿದರು. ಹೀಗಾಗಿ, ನಾನು ಮಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕೆಲಸಕ್ಕೆ ಸೇರಿದೆ. ಇದು ಗೋವಿಂದ ಪೂಜಾರಿ ಹಣ ಎಂಬ ವಿಚಾರ ನನಗೆ ಆ ಬಳಿಕ ತಿಳಿಯಿತು. ಈ ವಿಚಾರವನ್ನು ನಾನು ಎಲ್ಲಾದರೂ ಹೇಳಬಹುದು ಎಂಬ ಕಾರಣಕ್ಕೆ ನನ್ನ ಹೆಂಡತಿ ರೋಹಿಣಿ ಹಾಗೂ ನನ್ನ ಮಗಳಾದ ಚೈತ್ರ ನನಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದರು’ ಎಂದು ಬಾಲಕೃಷ್ಣ ಅವರು ದೂರಿನಲ್ಲಿ ತಿಳಿದಿದ್ದಾರೆ.

Gauthami Jadav: ಇನ್​ಸ್ಟಾಗ್ರಾಮ್​ನಿಂದ ಹಣ ಸಂಪಾದಿಸುತ್ತಿರುವ ಗೌತಮಿ ಜಾಧವ್: ಯಾವುದು ಈ ಬ್ಯುಸಿನೆಸ್?

‘ನನ್ನ ಮಗಳು ಆಕೆಯ ಸ್ನೇಹಿತನಾದ ಶ್ರೀಕಾಂತ್ ನನ್ನು ಮದುವೆಯಾಗಲು ನಿರ್ಧರಿಸಿದ ವಿಷಯ ತಿಳಿಯಿತು. ಆಗ ನಾನು ಅವಳ ಬಳಿ ಆತನನ್ನು ಮದುವೆ ಆಗುವುದು ಸರಿಯಲ್ಲ, ಆತ ಸರಿಯಿಲ್ಲ ಎಂದು ಹೇಳಿದಾಗ ನನ್ನ ಮಗಳು ಚೈತ್ರ ಹಾಗೂ ನನ್ನ ಹೆಂಡತಿ ರೋಹಿಣಿ ಇವರುಗಳು ಸೇರಿ ನನ್ನ ಬಳಿ ಒಂದು ವೇಳೆ ಆತನನ್ನು ಬಿಟ್ಟು ಬೇರೆ ಹುಡುಗನನ್ನು ಮದುವೆಯಾಗುವುದಾದರೆ ನನಗೆ ರೂ.5,00,000/- ನಗದು ನೀಡಬೇಕೆಂದು ಒತ್ತಡ ಹೇರಿದರು ಹಾಗೂ ಆ ಮದುವೆಗೆ ಒಪ್ಪದೇ ಇದಲ್ಲಿ ನನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುತ್ತಾಳೆ. ಅದಕ್ಕೆ ನಾನು ಒಪ್ಪಲಿಲ್ಲ’ ಎಂದು ದೂರಿನಲ್ಲಿ ಬರೆದಿದ್ದಾರೆ.

‘ನಾನು ಮದುವೆಗೆ ಬರದೇ ಹೋದರೆ ಭೂಗತ ದೊರೆಗಳ ಮೂಲಕ ಕೊಲೆಗೈಯ್ಯುವ ಬೆದರಿಕೆ ಹಾಕಿದ್ದಾಳೆ. ಆಸ್ತಿಗಾಗಿ ಯಾವ ಹೇಯ ಕೃತ್ಯವನ್ನು ಎಸಗಲು ಅವಳು ಸಿದ್ಧಳಿದ್ದಾಳೆ. ನಾನು ಸತ್ತು ಹೋಗಿದ್ದೇನೆ ಎಂದು ಹೇಳಿಕೊಂಡು ಬರುತ್ತಿದ್ದಾಳೆ. ಚೈತ್ರಾ ಕುಂದಾಪುರ ಬೆದರಿಕೆ ಹಾಕಿರುವುದರಿಂದ ತಮಗೆ ಹಾಗೂ ತಮ್ಮ ಹಿರಿಯ ಮಗಳು ಗಾಯತ್ರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ತಂದೆ ಬಾಲಕೃಷ್ಣ ನಾಯಕ್‌ ಪೊಲೀಸರಲ್ಲಿ ಕೋರಿದ್ದಾರೆ.