Chaithra Kundapura: ‘ಕುಡುಕ ತಂದೆ’: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು, ವೈರಲ್ ಆಗ್ತಿದೆ ಪೋಸ್ಟ್
ತಂದೆಯ ಆರೋಪದ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ತಮ್ಮ ವಾಟ್ಸ್ಆ್ಯಪ್ ಮತ್ತು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ. ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು... ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು ಎಂದು ಚೈತ್ರಾ ಬರೆದುಕೊಂಡಿದ್ದಾರೆ.

Chaithra kundapura and Father

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ (Chaitra Kundapura) ಇತ್ತೀಚೆಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸುತ್ತಿದ್ದ ಶ್ರೀಕಾಂತ್ ಕಶ್ಯಪ್ ಎಂಬವರ ಜೊತೆ ಚೈತ್ರಾ ವಿವಾಹವಾಗಿದೆ. ತುಂಬಾ ಸಿಂಪಲ್ ಆಗಿ ನಡೆದಿದ್ದ ಈ ವಿವಾಹಕ್ಕೆ ಬೆರಳಣಿಕೆಯಷ್ಟು ಮಂದಿ ಮಾತ್ರ ಬಂದಿದ್ದರು. ಕೆಲ ಬಿಗ್ ಬಾಸ್ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು. ಆದರೆ ಚೈತ್ರಾ ಕುಂದಾಪುರ ಅವರ ಮದುವೆಗೆ ಅವರ ತಂದೆ ಬಂದಿರಲಿಲ್ಲ.
ಆದರೀಗ ದಿಢೀರ್ ಎಂದು ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿದ್ದು, ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ನೂತನ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ಅವರ ತಂದೆ ಗಂಭೀರವಾದ ಆರೋಪಗಳನ್ನು ಮಾಡಿರುವುದು ಸದ್ದು ಮಾಡಿದೆ. ‘ಮಗಳ ಮದುವೆಯನ್ನು ನಾನು ಒಪ್ಪುವುದಿಲ್ಲ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ (ಚೈತ್ರಾ ಅವರ ಅಮ್ಮ) ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
ತಂದೆಯ ಆರೋಪದ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ತಮ್ಮ ವಾಟ್ಸ್ಆ್ಯಪ್ ಮತ್ತು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ. ‘‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು... ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು.. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ.. ಎಂದು ಚೈತ್ರಾ ಬರೆದುಕೊಂಡಿದ್ದಾರೆ.
ಚೈತ್ರಾ ತಂದೆ ಮಾಡಿದ ಆರೋಪ ಏನು?:
‘‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ. ಮಗಳ ಮದುವೆಯನ್ನು ನಾನು ಒಪ್ಪುವುದಿಲ್ಲ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನನ್ನು ಮನೆಯಲ್ಲಿ ಬಿಟ್ಟು ಅಮ್ಮ-ಮಗಳು ಬೀಗ ಹಾಕಿ ಹೋಗಿದ್ದರು. ಚೈತ್ರಾನ ಇಂದು ತುಂಬಾ ಹೊಗಳುತ್ತಿದ್ದಾರೆ. ಅವಳಿಗೆ ಅಷ್ಟು ದೊಡ್ಡ ಸ್ಥಾನಮಾನ ಕೊಡುವ ಅಗತ್ಯವಿಲ್ಲ. ತಂದೆಯನ್ನೇ ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ?. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಅದು ಹೆಮ್ಮೆಯ ವಿಷಯ. ಆದರೆ, ಅವಳು ಕೊಟ್ಟಿರುವುದು ಮೋಸದ ಹಣ. ಮದುವೆ ಸಂದರ್ಭ ಆಕೆ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರ ಪತಿ ನಮ್ಮ ಮನೆಯಲ್ಲಿ ಇದ್ದವನು. ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಆಕೆ ಹಣ ಹೊಡೆದಿದ್ದಾಳೆ. ಆ ಹಣವನ್ನು ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಾಳೆ’’ ಎಂದು ಹೇಳಿದ್ದಾರೆ.