BBK 12: ಬಿಗ್ ಬಾಸ್ ಕನ್ನಡಕ್ಕೂ ನನಗು ಯಾವುದೇ ಸಂಭಂದವಿಲ್ಲ: ಫೇಸ್ಬುಕ್ನಲ್ಲಿ ಚಕ್ರವರ್ತಿ ಚಂದ್ರಚೂಡ್ ಪೋಸ್ಟ್
ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಪತ್ರಕರ್ತ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದರು. ಇವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಕಣಕ್ಕಿಳಿದು ಶೋನಲ್ಲಿ ಧೂಳೆಬ್ಬಿಸಿದ್ದರು.

chakravarthy chandrachud

ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ (Bigg Boss Kannada 12) ವೇದಿಕೆ ಸಜ್ಜಾಗುತ್ತಿದೆ. ಇನ್ನೇನು ಕೆಲವೇ ವಾರಗಳಲ್ಲಿ ಶೋ ಆರಂಭವಾಗಲಿದೆ. ಇತ್ತೀಚೆಗಷ್ಟೆ ಕಲರ್ಸ್ ಕನ್ನಡ ಹಾಗೂ ಬಿಗ್ ಬಾಸ್ ಟೀಮ್ ಈ ಬಾರಿಯೂ ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಬಿಗ್ ಬಾಸ್ ಅನ್ನು ಮುನ್ನಡೆಸಲಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ತೆರೆಮರೆಯಲ್ಲಿ ಬಿಗ್ ಬಾಸ್ 12 ಕೆಲಸಗಳು ಶುರುವಾಗಿದೆ. ಈಗಾಗಲೇ ಕೆಲ ಕಂಟೆಸ್ಟೆಂಟ್ಗಳ ಹೆಸರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹೀಗಿರುವಾಗ ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಪತ್ರಕರ್ತ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದರು. ಇವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಕಣಕ್ಕಿಳಿದು ಶೋನಲ್ಲಿ ಧೂಳೆಬ್ಬಿಸಿದ್ದರು.
ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭವಾಗುವ ಹೊತ್ತಿಗೆ ಚಕ್ರವರ್ತಿ ಅವರು ತಮ್ಮ ಫೇಸ್ಬುಕ್ನಲ್ಲಿ, "ಬಿಗ್ ಬಾಸ್ ಕನ್ನಡಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಸ್ಪರ್ಧಿಗಳಾಗಿ ಹೋಗಲು ನನ್ನನ್ನು ಸಂಪರ್ಕಿಸಿದರೆ ಪ್ರಯೋಜನವಿಲ್ಲಾ. ಕಲರ್ಸ್ ವಾಹಿನಿಯನ್ನು ಸಂಪರ್ಕಿಸಿಕೊಳ್ಳಿ. ನನ್ನ ಮತ್ತು ನಿಮ್ಮ ಸಮಯ ತುಂಬಾ ಅಮೂಲ್ಯ" ಎಂದು ಬರೆದುಕೊಂಡಿದ್ದಾರೆ.
ಚಕ್ರವರ್ತಿ ಚಂದ್ರಚೂಡ್ ಅವರು ಕಿಚ್ಚ ಸುದೀಪ್ ಅವರಿಗೆ ತುಂಬಾ ಆತ್ಮೀಯರು. ಹೀಗಾಗಿ ಅನೇಕ ಜನರು ಬಿಗ್ ಬಾಸ್ ಹೋಗಲು ಸಹಾಯ ಮಾಡಿ ಎಂದು ಚಕ್ರವರ್ತಿ ಅವರನ್ನು ಕೇಳುತ್ತಿದ್ದಾರೆ. ಅದಕ್ಕಾಗಿ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ವಾರವಷ್ಟೆ ಬಿಗ್ ಬಾಸ್ ಮಾಜಿ ವಿನ್ನರ್ ಪ್ರಥಮ್ ಅವರು ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಇದೇರೀತಿಯ ಪೋಸ್ಟ್ ಹಂಚಿಕೊಂಡಿದ್ದರು. ಅವರಿಗೆ ಅನೇಕ ಜನರು ಕರೆಮಾಡಿ, ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಾಗಿ ಹೋಗೋಕೆ ನಮಗೊಂದು ಚಾನ್ಸ್ ಕೊಡಿಸಿ ಅಂತ ಕೇಳುತ್ತಿದ್ದಾರಂತೆ. ಆ ಕರೆಗಳಿಂದ ಕಿರಿಕಿರಿ ಅನುಭವಿಸಿರುವ ಪ್ರಥಮ್, ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ಪೋಸ್ಟ್ ಮಾಡಿದ್ದರು.
Bhagya Lakshmi Serial: ಭಾಗ್ಯ ಫ್ಯಾಮಿಲಿ ಮುಂದೆ ಮಂಡಿಯೂರಿ ಕ್ಷಮೆ ಕೇಳಿದ ಆದೀಶ್ವರ್ ಕಾಮತ್
"ಬಿಗ್ ಬಾಸ್ ಪ್ರೆಸ್ ಮೀಟ್ ಆದ್ಮೇಲೆ ನೂರಾರು ಜನ ನಮ್ಮ ಆಫಿಸ್‌ಗೆ ಮತ್ತು ನನ್ನ ಆಪ್ತರ ಮೂಲಕ ಕಾಲ್ ಮಾಡ್ತಾನೇ ಇದ್ದಾರೆ. ಎಲ್ಲರಿಗೂ ಒಂದೇ ಮಾತು, ಯಾವ influence ಕೂಡ ನಡೆಯಲ್ಲ. ನಮ್ಮ ಕಲರ್ಸ್ ಕನ್ನಡ ಹೆಡ್ ಪ್ರಶಾಂತ್ ನಾಯಕ್ ಸರ್ & ಪ್ರಕಾಶ್ ಸರ್ ಅವ್ರದ್ದೇ ತಂಡವಿದೆ! ಅವ್ರೇ ಕಾಂಟ್ಯಾಕ್ಟ್ ಮಾಡ್ತಾರೆ. ಯಾವ ಕಾಸ್ಟಿಂಗ್ ಮಾತು ನಡೆಯಲ್ಲ" ಎಂದು ಟ್ವೀಟ್ ಮಾಡಿದ್ದರು.