Kurmaavatar Title: ಶಿವರಾಜ್‌ಕುಮಾರ್ ನಟನೆಯ 'ಕೂರ್ಮಾವತಾರ್' ಟೈಟಲ್ ಟೀಸರ್ ರಿಲೀಸ್
shivanna: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರ ಲುಕ್ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಶಿವಣ್ಣ -
ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ (Shivarajkumar) ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ 'ಕೂರ್ಮಾವತಾರ್' ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್ ಟೀಸರ್ (Title Teaser) ಬಿಡುಗಡೆ ಮಾಡಿದೆ.
ಕೂರ್ಮಾವತಾರದ ಹಿನ್ನೆಲೆ
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರ ಲುಕ್ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಚಿತ್ರವನ್ನು ಹರ್ಷ ವರ್ಧನ್ ಕಡಿಯಾಲ ನಿರ್ದೇಶಿಸುತ್ತಿದ್ದು, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ ಸ್ಟುಡಿಯೋಸ್ ಜಂಟಿ ಬ್ಯಾನರ್‌ಗಳ ಅಡಿಯಲ್ಲಿ ಪೂಜಿತ ಕಡಿಯಾಲ ಮತ್ತು ನರೇಂದ್ರ ಕೊಂಡ ಬೃಹತ್ ಬಜೆಟ್‌ನಲ್ಲಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ನಟ-ನಟಿಯರ ದಂಡೇ ಇರಲಿದ್ದು, ಶಿವರಾಜ್‌ಕುಮಾರ್ ಅವರೊಂದಿಗೆ ತೆಲುಗು ನಟ ರಾಜ್ ತರುಣ್, ಶಿವಾಜಿ, ವರಲಕ್ಷ್ಮಿ ಶರತ್‌ಕುಮಾರ್, ಸಾಯಿ ಕುಮಾರ್, ರಾಜಾ ರವೀಂದ್ರ, ವಿಟಿವಿ ಗಣೇಶ್, ಸಪ್ತಗಿರಿ, ಗೆಟಪ್ ಶ್ರೀನು, ಶತ್ರು, ಮಹೇಶ್ ವಿಟ್ಟ ಮತ್ತು ಅತಿರಾ ರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ತಾಂತ್ರಿಕವಾಗಿಯೂ ಚಿತ್ರ ಅತ್ಯುನ್ನತ ಮಟ್ಟದಲ್ಲಿ ಮೂಡಿಬರಲಿದ್ದು, ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಜಗದೀಶ್ ಚೀಕಾಟಿ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನಕಾರ ಮಾರ್ತಾಂಡ್ ಕೆ. ವೆಂಕಟೇಶ್ ಎಡಿಟಿಂಗ್ ಜವಾಬ್ದಾರಿ ಹೊತ್ತಿದ್ದಾರೆ.
ಇದನ್ನೂ ಓದಿ: Vishnuvardhan: ಡಾ ವಿಷ್ಣುವರ್ಧನ್ ಅಮೃತ ಮಹೋತ್ಸವ ಯಾವಾಗ? ಲೋಗೋ ಅನಾವರಣ
ಲೇಖಕ್ ರಾಮ್ ಹೆಚ್ಚುವರಿ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು, ರಾಘವ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ವಿಎಫ್‌ಎಕ್ಸ್ (VFX) ತಂತ್ರಜ್ಞಾನ ಹಾಗೂ ಅದ್ಧೂರಿ ಮೇಕಿಂಗ್‌ನೊಂದಿಗೆ ತಯಾರಾಗುತ್ತಿರುವ 'ಕೂರ್ಮಾವತಾರ್', ಭಾರತದ ಪ್ರಮುಖ ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ.