Kichcha Sudeepa: ಕಿಚ್ಚ ಸುದೀಪ್ ಹುಟ್ಟುಹಬ್ಬದ ಮುನ್ನವೇ ಫ್ಯಾನ್ಸ್‌ಗೆ ಸಿಕ್ತು ಭರ್ಜರಿ ಗಿಫ್ಟ್; ಹೊಸ ಚಿತ್ರದ ಟೈಟಲ್, ಟೀಸರ್ ಔಟ್
ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅಭಿನಯ ಚಕ್ರವರ್ತಿಯ ಹುಟ್ಟುಹಬ್ಬ ಆಚರಿಸಲು ಕಾಯುತ್ತಿರುವ ಅವರ ಅಭಿಮಾನಿಗಳಿಗೆ ಸೆಪ್ಟೆಂಬರ್ 1ರಂದೇ ದೊಡ್ಡ ಉಡುಗೊರೆ ಸಿಕ್ಕಿದೆ. ಹೊಸ ಚಿತ್ರಕ್ಕೆ ʼಮಾರ್ಕ್ʼ ಎಂದು ಟೈಟಲ್ ಇಡಲಾಗಿದೆ. ಟೈಟಲ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.

-

ಬೆಂಗಳೂರು: ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ (Kichcha Sudeepa) 54ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅಭಿನಯ ಚಕ್ರವರ್ತಿಯ ಹುಟ್ಟುಹಬ್ಬ ಆಚರಿಸಲು ಕಾಯುತ್ತಿರುವ ಅವರ ಅಭಿಮಾನಿಗಳಿಗೆ ಸೆಪ್ಟೆಂಬರ್ 1ರಂದೇ ದೊಡ್ಡ ಉಡುಗೊರೆ ಸಿಕ್ಕಿದೆ. ಸುದೀಪ್ ಅವರ ಮುಂದಿನ ಚಿತ್ರದ ಟೈಟಲ್ ಇದೀಗ ರಿವೀಲ್ ಆಗಿದ್ದು, ಫಸ್ಟ್ ಲುಕ್ ಟೀಸರ್ ಕೂಡ ಹೊರಬಿದ್ದಿದೆ. ಕಳೆದ ವರ್ಷ ತೆರೆಕಂಡ ʼಮ್ಯಾಕ್ಸ್ʼ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ನಲ್ಲಿ ಗಮನ ಸೆಳೆದ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿತ್ತಿರುವ ಈ ಚಿತ್ರಕ್ಕೆ 'ಮಾರ್ಕ್' (Mark) ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ʼಕೆ 47ʼ (K 47) ಟೈಟಲ್ ಇಟ್ಟು ಜುಲೈಯಲ್ಲಿ ಶೂಟಿಂಗ್ ಆರಂಭಿಸಲಾಗಿತ್ತು.
ಇದೀಗ ರಿಲೀಸ್ ಆಗಿರುವ ʼಮಾರ್ಕ್ʼ ಸಿನಿಮಾದ ಫಸ್ಟ್ ಲುಕ್ ಟೀಸರ್ ಗಮನ ಸೆಳೆದಿದ್ದು, ಸುದೀಪ್ ಮತ್ತೊಮ್ಮೆ ಪವರ್‌ಫುಲ್ ಪಾತ್ರದಲ್ಲಿ ಮಿಂಚಿದ್ದಾರೆ. ಅವರ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದು, ಹುಚ್ಚೆದ್ದು ಕುಣಿದಿದ್ದಾರೆ. ಅಜಯ್ ಮಾರ್ಕಾಂಡೆ ಆಲಿಯಾಸ್ ಮಾರ್ಕ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದು, ಇದು ಕೂಡ ʼಮ್ಯಾಕ್ಸ್ʼನಂತೆ ಭರ್ಜರಿ ಆ್ಯಕ್ಷನ್ ಚಿತ್ರ ಎನ್ನುವ ಸೂಚನೆ ಟೀಸರ್‌ನಲ್ಲೇ ಸಿಕ್ಕಿದೆ. ಕನ್ನಡದ ಜತೆಗೆ ಇದು ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ತೆರೆ ಕಾಣಲಿದೆ.
The fire is lit. The journey begins. 🔥
— Kichcha Sudeepa (@KicchaSudeep) September 1, 2025
The Title Announcement Title Teaser of K-47 is unveiled.
🔗 - https://t.co/GEAm4z43zT#BaadShahDay #Kichcha47 #Mark #MarkTheFilm @KicchaSudeep @Kichchacreatiin @SathyaJyothi @VKartikeyaa @AJANEESHB @iampriya06 @shekarchandra71… pic.twitter.com/OlJDHemPA1
ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ. ಈ ಚಿತ್ರವನ್ನು ಸತ್ಯಜ್ಯೋತಿ ಫಿಲ್ಮ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜತೆಯಾಗಿ ನಿರ್ಮಿಸುತ್ತಿದ್ದು, ಅರ್ಜುನ್ ತ್ಯಾಗರಾಜನ್ ಮತ್ತು ಸೆಂಥಿಲ್ ತ್ಯಾಗರಾಜನ್ ಬಂಡವಾಳ ಹೂಡಿದ್ದಾರೆ. ಛಾಯಾಗ್ರಾಹಕರಾಗಿ ಶೇಖರ್ ಚಂದ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಚಿತ್ರದ ಬಹುತೇಕ ಭಾಗದ ಶೂಟಿಂಗ್ ಪೂರ್ಣಗೊಂಡಿದ್ದು, ಕ್ರಿಸ್‌ಮಸ್‌ಗೆ ತೆರೆಗೆ ಬರಲಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಸುದೀಪ್, ʼʼನಾವು ಅಂದುಕೊಂಡಂತೆ ವೇಗವಾಗಿ ಶೂಟಿಂಗ್ ಮಾಡುತ್ತಿದ್ದೇವೆ. ಈಗಾಗಲೇ ಸಿನಿಮಾದ ಶೇ. 60ರಷ್ಟು ಶೂಟ್ ಪೂರ್ಣಗೊಂಡಿದೆ. ಅಕ್ಟೋಬರ್ ವೇಳೆಗೆ ಸಿನಿಮಾದ ಚಿತ್ರೀಕರಣ ಪೂರ್ಣಗೊಳ್ಳಲಿದೆ. ನವೆಂಬರ್ನಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯಲಿದ್ದು, ಇದಾದ ಬಳಿಕ ಅನೂಪ್ ಭಂಡಾರಿ ಜತೆಗಿನ ʼಬಿಲ್ಲ ರಂಗ ಬಾಷʼ ಸಿನಿಮಾದಲ್ಲಿ ತೊಡಗಿಕೊಳ್ಳಲಿದ್ದೇನೆ. ಕ್ರಿಸ್‌ಮಸ್‌ಗೆ ʼಕೆ 47ʼ ಬಂದೇ ಬರುತ್ತದೆ’' ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ: BBK 12: ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ಡೇಟ್ ಫಿಕ್ಸ್; ದಿನಾಂಕ ಪ್ರಕಟಿಸಿದ ಕಿಚ್ಚ ಸುದೀಪ್
ಸೆಪ್ಟೆಂಬರ್ 2ರಂದು ʼಬಿಲ್ಲ ರಂಗ ಭಾಷʼದ ಫಸ್ಟ್ ಲುಕ್ ಪೋಸ್ಟರ್ ಔಟ್
ವಿಶೇಷ ಎಂದರೆ ಸೆಪ್ಟೆಂಬರ್ 2ರಂದು ಸುದೀಪ್ ನಟನೆಯ ʼಬಿಲ್ಲ ರಂಗ ಭಾಷʼದ ಫಸ್ಟ್ ಲುಕ್ ಪೋಸ್ಟರ್ ಹೊರ ಬೀಳಲಿದೆ. ಸೆಪ್ಟೆಂಬರ್ 2ರಂದು ಸುದೀಪ್ ನಟನೆಯ ಬಹುನಿರೀಕ್ಷಿತ ಚಿತ್ರ ʼಬಿಲ್ಲ ರಂಗ ಭಾಷʼದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವುದಾಗಿ ನಿರ್ದೇಶಕ ಅನೂಪ್ ಭಂಡಾರಿ ಸೋಶಿಯಲ್ ಮೀಡಿಯಾ ಮೂಲಕ ಕೆಲವು ದಿನಗಳ ಹಿಂದೆಯೇ ಪ್ರಕಟಿಸಿದ್ದರು. ʼವಿಕ್ರಾಂತ್ ರೋಣʼದ ಯಶಸ್ಸಿನ ನಂತರ ಅನೂಪ್ ಭಂಡಾರಿ ಮತ್ತು ಸುದೀಪ್ ಮತ್ತೊಮ್ಮೆ ಒಂದಾಗಿರುವ ಈ ಚಿತ್ರ ಘೋಷಣೆಯಾದಾಗಿನಿಂದಲೂ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ.
ಏಪ್ರಿಲ್‌ನಲ್ಲಿ ಚಿತ್ರತಂಡ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶೂಟಿಂಗ್ ಆರಂಭಿಸಿರುವುದನ್ನು ತಿಳಿಸಿತ್ತು. ಈ ಪೋಸ್ಟರ್ ವಿಭಿನ್ನವಾಗಿ ಮೂಡಿ ಬಂದು ಗಮನ ಸೆಳೆದಿತ್ತು. ಅದರಲ್ಲಿ ಹಿಮ ತುಂಬಿರುವ ಬೆಟ್ಟಗಳ ನಡುವೆ ಗಂಭೀರವಾಗಿ ಏನನ್ನೋ ನೋಡುತ್ತಿರುವ ಸುದೀಪ್ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದರು. ಜತೆಗೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿತ್ತು. ಈ ಸೈನ್ಸ್ ಫಿಕ್ಷನ್‌ನ ಕಥೆ 2209ರ ಕಾಲಘಟ್ಟದಲ್ಲಿ ನಡೆಯಲಿದೆ. ಅಂದರೆ 185 ವರ್ಷಗಳ ಬಳಿಕ ಏನಾಗಲಿದೆ ಎನ್ನುವುದನ್ನು ರೋಚಕವಾಗಿ ಅನೂಪ್ ಕಟ್ಟಿಕೊಡಲಿದ್ದಾರೆ. ಇದಕ್ಕಾಗಿ ಅವರು ಹಲವು ವರ್ಷಗಳ ಕಾಲ ಅಧ್ಯಯನವನ್ನೂ ನಡೆಸಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿದೆ.