ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijayalakshmi Darshan: ಡೆವಿಲ್‌ ಚಿತ್ರದ ಪರ ವಿಜಯಲಕ್ಷ್ಮಿ ಕ್ಯಾಂಪೇನ್‌; ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಪ್ರಮುಖ (Vijayalakshmi Darshan) ಆರೋಪಿಯಾಗಿರುವ ದರ್ಶನ್‌ ಮತ್ತೆ ಜೈಲು ಸೇರಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಡೆವಿಲ್‌ ಚಿತ್ರದ ಪರ ವಿಜಯಲಕ್ಷ್ಮಿ ಕ್ಯಾಂಪೇನ್‌

Vishakha Bhat Vishakha Bhat Aug 17, 2025 11:15 AM

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಪ್ರಮುಖ (Vijayalakshmi Darshan) ಆರೋಪಿಯಾಗಿರುವ ದರ್ಶನ್‌ ಮತ್ತೆ ಜೈಲು ಸೇರಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್‌ ಅಭಿನಯದ ದಿ ಡೆವಿಲ್‌ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇನ್ನು ಕೆಲವೇ ಕೆಲಸಗಳು ಇವೆ ಎಂದು ಹೇಳಲಾಗಿದೆ. ಆಗಸ್ಟ್‌ 15 ರಂದು ಡೆವಿಲ್‌ ಚಿತ್ರದ ಸಾಂಗ್‌ ರಿಲೀಸ್‌ ಆಗಬೇಕಿತ್ತು. ಆದರೆ ದರ್ಶನ್‌ ಮತ್ತೆ ಜೈಲು ಪಾಲಾದ್ದರಿಂದ ಅದನ್ನು ಮಂದೂಡಲಾಗಿದೆ. ಇದೀಗ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅಭಿಮಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ದರ್ಶನ್‌ ಪರ ಅಖಾಡಕ್ಕಿಳಿದಿರುವ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಡೆವಿಲ್‌ ಸಿನಿಮಾ ಪ್ರಚಾರ ಕುರಿತಾದ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ದಚ್ಚು ಅಭಿಮಾನಿಗಳಿಗೆ ಭರವಸೆಯಾಗಿ ನಿಂತಿದ್ದಾರೆ. ನಿಮ್ಮ ಚಾಲೆಂಜಿಂಗ್ ಸ್ಟಾರ್ ನಿಮ್ಮೆಲ್ಲರನ್ನೂ ತಮ್ಮ ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಅವರು ಹಿಂದಿರುವವರೆಗೂ ನಾನು ಅವರ ಪರ ಇದ್ದೇನೆ. ಅವರ ಸೋಷಿಯ್‌ ಮೀಡಾಯವನ್ನು ನಾನು ಹ್ಯಾಂಡಲ್‌ ಮಾಡುತ್ತೇನೆ. ಸಿನಿಮಾದ ಪ್ರತಿ ವಿಷಯಗಳನ್ನು ನಿಮಗೆ ತಲುಪಿಸುತ್ತೇನೆ ಎಂದು ಹೇಳಿದ್ದಾರೆ. ನೀವು ತೋರಿಸುತ್ತಿರುವ ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಅಪಾರ ಶಕ್ತಿಯನ್ನು ನೀಡುತ್ತದೆ. ಆ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ. ನೀವು ಯಾವಾಗಲೂ ತಿಳಿದಿರುವ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಹಿಂತಿರುಗುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Actor Darshan: ಬಳ್ಳಾರಿ ಸೆಂಟ್ರಲ್‌ ಜೈಲಿಗೆ ನಟ ದರ್ಶನ್‌ ಶಿಫ್ಟ್‌?; ಆರೋಪಿಗಳ ಸ್ಥಳಾಂತರಕ್ಕೆ ಮುಂದಾದ ಜೈಲು ಅಧಿಕಾರಿಗಳು

ನಿನ್ನೆ ಕೂಡ ವಿಜಿ ದರ್ಶನ್‌ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದರು. ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುವುದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು ಎಂದು ಬರೆದುಕೊಂಡಿದ್ದರು.