ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೈಸೂರು

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ

ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್‌ಡಿಕೆ

HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Piriyapattana News: ಅನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಜಾನಪದಗಳು ಉಳಿಯ ಬೇಕು. ವಿದ್ಯಾರ್ಥಿಗಳುಜ ಕೂಡ ಜಾನಪದ ಕಲೆಯನ್ನು ಉಳಿಸಿಬೆಳೆಸಬೇಕು. ಸ್ಥಳೀಯವಾಗಿ ನಡೆಯವ ಹಬ್ಬ, ಜಾತ್ರೆಗಳಲ್ಲಿ ಪಾಲ್ಗೊಂಡು ಅಲ್ಲಿನ ಜಾನಪದ ಸೊಗಡನ್ನು ನೋಡ ಬೇಕು. ಮನೆ ಮನೆಗೆ ತೆರಳಿ ಜಾನಪದ ಹಾಡುಗಳನ್ನು ಹಾಡುವ ಕಲಾವಿದರನ್ನು ಗೌರವಿಸಬೇಕು. ಅವರ ಹಾಡುಗಳನ್ನು ನಾವು ಹಾಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

Mysuru Pub Fire: ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ; ಜಿಗಿದು ಪ್ರಾಣ ರಕ್ಷಿಸಿಕೊಳ್ಳಲು ಯತ್ನಿಸಿದ ಗ್ರಾಹಕರು! video

ಮೈಸೂರು ಪಬ್‌ ಅಗ್ನಿ ಅವಘಡದಲ್ಲಿ ಸ್ಯಾಂಡಲ್‌ವುಡ್‌ ನಟನಿಗೆ ತೀವ್ರ ಗಾಯ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್​ ಡೆನ್​​ ಪಬ್​​​​ ಅನ್ನು ಆಫ್ರಿಕನ್ ಸ್ಟೈಲ್​ನಲ್ಲಿ ನಿರ್ಮಾಣ ಮಾಡಲಾಗಿತ್ತು. ಹುಲ್ಲು, ಗೋಣಿ ತಾಟು, ವುಡ್ ಹೆಚ್ಚಾಗಿ ಬಳಸಿ ನಿರ್ಮಾಣವಾಗಿತ್ತು. ದಟ್ಟವಾಗಿ ಬೆಂಕಿ ಹೊತ್ತಿ ಉರಿಯಲು ಇದೇ ಕಾರಣ ಎನ್ನಲಾಗಿದೆ. ದುರಂತದಲ್ಲಿ ಇಬ್ಬರು, ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ.

Mysuru Fire accident: ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು, ಏಳು ಮಂದಿಗೆ ಗಾಯ

ಮೈಸೂರಿನ ಪಬ್‌ನಲ್ಲಿ ಬೆಂಕಿ ಅವಘಡ; ಇಬ್ಬರ ಸಾವು

FoxDen Restobar Fire Accident in mysuru: ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಪಬ್ ಸಂಪೂರ್ಣ ಸುಟ್ಟು ಹೋಗಿದೆ. ಅವಘಡದಲ್ಲಿ ಇಬ್ಬರು ಸಜೀವ ದಹನರಾಗಿದ್ದಾರೆ ಎಂದು ತಿಳಿದುಬಂದಿದೆ.

Mysuru News: ಮೈಸೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ

ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪತಿಯ ಕುಟುಂಬಸ್ಥರ ವಿರುದ್ಧ ಗೃಹಿಣಿಯ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dr Yathindra Siddaramaiah: ʼಡಾ.ಯತೀಂದ್ರʼಗೆ ಒಲಿದು ಬಂದ ʼಮಂತ್ರಿʼಭಾಗ್ಯ

Dr yathindra Siddaramaiah: ʼಡಾ.ಯತೀಂದ್ರʼಗೆ ಒಲಿದು ಬಂದ ʼಮಂತ್ರಿʼಭಾಗ್ಯ

ಸಿಎಂ ಹುದ್ದೆಯಿಂದ ನಿರ್ಗಮಿಸುವ ಮುನ್ನ ಭವಿಷ್ಯದ ರಾಜಕೀಯ ಲೆಕ್ಕಾಚಾರಗಳನ್ನು ಹಾಕಿಕೊಂಡೇ ಉರುಳಿಸಿದ ಪಗಡೆ ಆಟದಲ್ಲಿ ಯಶ ಕಂಡಿರುವ ಸಿದ್ದರಾಮಯ್ಯ, ಮೈಸೂರಿನಲ್ಲಿ ತಮ್ಮ ಮಗನಿಗೆ ರಾಜಕೀಯದ ಭದ್ರ ನೆಲೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲ, ಜಿಲ್ಲಾ ಉಸ್ತುವಾರಿ ಪಟ್ಟದ ಸನಿಹಕ್ಕೆ ತಂದು ಕೂರಿಸಿದ್ದಾರೆ.

ಸಿದ್ದರಾಮಯ್ಯ ಗೌರವಯುತವಾಗಿ ಸಿಎಂ ಕುರ್ಚಿ ಬಿಟ್ಟು ಕೊಟ್ಟಿದ್ದಾರೆ, ಅವರ ಮುಂದಿನ ಜೀವನ ಚೆನ್ನಾಗಿರಲಿ: ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಅವರ ಮುಂದಿನ ಜೀವನ ಚೆನ್ನಾಗಿರಲಿ: ಪ್ರತಾಪ್‌ ಸಿಂಹ

ಈವರೆಗೂ ಸಿದ್ದರಾಮಯ್ಯ ಸಾಹೇಬರ ಸರ್ಕಾರದ ಆಡಳಿತ ವೈಖರಿ ಬಗ್ಗೆ ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದ್ದೇನೆ. ಆದರೆ, ಅವರು ರಾಜೀನಾಮೆ ನೀಡಿ, ಕುರ್ಚಿಯನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟುಕೊಡುತ್ತಿರುವ ಸಂದರ್ಭದಲ್ಲಿ ನಾನು ಅವರ ಬಗ್ಗೆ ಏನೂ ಟೀಕೆ ಮಾಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಲೋಕಾರ್ಪಣೆ

ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಬಿಡುಗಡೆ

ಮೈಸೂರು ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸಪ್ನ ಪುಸ್ತಕ ಮಳಿಗೆಯಲ್ಲಿ ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ‘ಪಾಕ್‌ನಲ್ಲಿ ನಮ್ಮ ಧುರಂಧರರು’ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು. ನಿಜ ಜೀವನದಲ್ಲಿ ಗೂಢಚಾರರಾಗಿ ಕೆಲಸ ಮಾಡುವವರ ನೈಜ ಜೀವನದ ಬಗ್ಗೆ ಈ ಪುಸ್ತಕದಲ್ಲಿ ಬರೆದಿದ್ದೇನೆ ಎಂದು ಡಾ.ಡಿ.ವಿ.ಗುರುಪ್ರಸಾದ್ ತಿಳಿಸಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆ

ಶಾಲೆಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ

ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಅಲ್ಲಿನ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾಲ ವಾಪಸ್ ಕೇಳಿದ್ದಕ್ಕೆ ದರ್ಪ; ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ, ವಿಡಿಯೋ ವೈರಲ್‌

ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ

drags man on car bonnet: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದ ಇತರರು ಘಟನೆಯ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ.

ಸಾಲದ ಹಣ ವಾಪಸ್‌ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ; MLC ವಿಶ್ವನಾಥ್‌ ವಿರುದ್ಧ FIR

ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್‌ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?; ರಾಜ್ಯ ಸರ್ಕಾರದ ವಿರುದ್ಧ ಎಚ್‍.ಡಿ. ಕುಮಾರಸ್ವಾಮಿ ಕಿಡಿ

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ?

ಕಳೆದ ಮೂರು ವರ್ಷಗಳಲ್ಲಿ ಮದ್ಯ, ಬಸ್‌, ವಿದ್ಯುತ್ ಸೇರಿ ಅನೇಕ ಬಾಬತ್ತುಗಳ ಮೇಲೆ ನಿರಂತರವಾಗಿ ತೆರಿಗೆವಿಧಿಸಿ ಬೆಲೆ ಏರಿಕೆ ಮಾಡಲಾಗಿದೆ. ಒಂದೆಡೆ ಗ್ಯಾರಂಟಿಗಳನ್ನು ಕೊಡುತ್ತೇವೆ ಎಂದು ಜನರ ಮೂಗಿಗೆ ತುಪ್ಪ ಸವದುತ್ತಿರುವ ಸರ್ಕಾರವು ಮತ್ತೊಮ್ಮೆ ಅದಕ್ಕೂ ಮೀರಿ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: ಎಸ್ಸೆಸ್ಸೆಲ್ಸಿಯಲ್ಲಿ 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿನಂದನೆ

624 ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಹೆಬ್ಬಾಳ್ಕರ್‌ ಅಭಿನಂದನೆ

Gruhalakshmi Scheme Success Story: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಮಾಧುರಿ ಆರ್. 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿನಂದಿಸಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿಟಿ ರೌಂಡ್ಸ್‌; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ, ಗುಣಮಟ್ಟ ಕಾಪಾಡಲು ಸೂಚನೆ

ಮೈಸೂರಿನಲ್ಲಿ ಸಿಎಂ ಸಿಟಿ ರೌಂಡ್ಸ್‌; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ

CM Siddaramaiah: ಮೈಸೂರಿನ ರಸ್ತೆಗಳು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ನಮ್ಮ ಸರ್ಕಾರವೇ ಕೈಗೊಂಡಿದ್ದು, ಬಿಜೆಪಿಯವರು ಕೇವಲ ಸರ್ಕಾರವನ್ನು ವಿರೋಧಿಸುವ, ಟೀಕಿಸುವ, ಸುಳ್ಳು ಹೇಳುವ ಕೆಲಸದಲ್ಲಿ ನಿರತವಾಗಿದೆ. ಜನರಿಗೆ ಅನುಕೂಲ ಕಲ್ಪಿಸುವ ಯಾವುದೇ ಯೋಜನೆಗಳನ್ನು ಬಿಜೆಪಿಯು ತನ್ನ ಅಧಿಕಾರಾವಧಿಯಲ್ಲಿ ಕೈಗೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

karnataka Hijab row: ಶಾಲೆಗಳಿಗೆ ಕೇಸರಿ ಶಾಲು ಕೂಡ ಹಾಕಿಕೊಂಡು ಬರುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಕೇಸರಿ ಶಾಲು ಕೂಡ ಹಾಕಿಕೊಂಡು ಬರುವಂತಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಹೀಗಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಶಾಲಾ, ಕಾಲೇಜುಗಳಲ್ಲಿ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

2028ಕ್ಕೆ ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರ ಬರುವುದು ಖಚಿತ: ನಿಖಿಲ್ ಕುಮಾರಸ್ವಾಮಿ

2028ಕ್ಕೆ ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರ ಬರುವುದು ಖಚಿತ: ನಿಖಿಲ್

Nikhil Kumaraswamy: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕುರ್ಚಿ ಕದನ ಮತ್ತು ಸುಳ್ಳು ಪ್ರಚಾರದಿಂದ ರಾಜ್ಯದ ವ್ಯವಸ್ಥೆ ಮೂರಾಬಟ್ಟೆಯಾಗಿದೆ. ಕಳೆದ 3 ವರ್ಷಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅಡಿ ದಲಿತ ಅಭಿವೃದ್ಧಿಗೆ ನಿಗದಿಯಾಗಿದ್ದ ₹29,764.10 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಅನುದಾನವನ್ನು ₹190 ಕೋಟಿಯಿಂದ ₹50 ಕೋಟಿಗೆ ಇಳಿಸಿ, ₹140 ಕೋಟಿ ಕಡಿತ ಮಾಡಿರುವುದು ದಲಿತರಿಗೆ ಮಾಡಿದ ದ್ರೋಹ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೂತ್ರ ವಿಸರ್ಜನೆ ತಡೆಗೆ ಬಳಸಿದ ಕನ್ನಡಿ ಅಸ್ತ್ರವೂ ವಿಫಲ; ಮೈಸೂರಲ್ಲಿ ಅಳವಡಿಸಿದ ಕನ್ನಡಿ ಎದುರೇ ಮೂತ್ರ: ಇಂತ ಜನಗಳು ಎಲ್ಲಿ ಸಿಗ್ತಾರೆ ಎಂದು ಕಾಲೆಳೆದ ನೆಟ್ಟಿಗರು

ಮೂತ್ರ ವಿಸರ್ಜನೆ ತಡೆಗೆ 'ಕನ್ನಡಿ' ಅಸ್ತ್ರ ಬಳಸಿದರೂ ಹಾವಳಿ ನಿಂತಿಲ್ಲ

Viral Video: ಸ್ವಚ್ಛ ನಗರ ಮೈಸೂರಿನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುವ ಅಭ್ಯಾಸಕ್ಕೆ ಬ್ರೇಕ್ ಹಾಕಲು ಮೈಸೂರು ಮಹಾನಗರ ಪಾಲಿಕೆ ವಿಶಿಷ್ಟ ಪ್ರಯೋಗ ಜಾರಿ ಮಾಡಿದೆ. ಸಾರ್ವಜನಿಕ ಮೂತ್ರ ವಿಸರ್ಜನೆಯನ್ನು ತಡೆಯಲು 9.5 ಲಕ್ಷ ರುಪಾಯಿ ವೆಚ್ಚದಲ್ಲಿ ಬಸ್‌ ನಿಲ್ದಾಣ ಮುಂಭಾಗದ ರಸ್ತೆಗೆ ಸ್ಟೇನ್‌ಲೆಸ್ ಸ್ಟೀಲ್ ಕನ್ನಡಿ ಫಲಕ ಅಳವಡಿಸಿದೆ. ಆದರೆ ಈ ಕ್ರಮ ಜಾರಿಗೆ ಬಂದ ಕೆಲವು ದಿನಗಳಲ್ಲೇ ಕನ್ನಡಿಯ ಮುಂದೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸುತ್ತಿರುವುದು ಕಂಡು ಬಂದಿದೆ.

Mobile Sanjeevini: ಜಾನುವಾರುಗಳಿಗೆ ಸಂಚಾರಿ ಸಂಜೀವಿನಿ

ಜಾನುವಾರುಗಳಿಗೆ ಸಂಚಾರಿ ಸಂಜೀವಿನಿ

ಜಾನುವಾರುಗಳ ಕಾಲುಬಾಯಿ ರೋಗ, ವಾರ್ಷಿಕ ಲಸಿಕೆ ಕಾರ್ಯಕ್ರಮಗಳು, ಸಾಂಕ್ರಾಮಿಕ ರೋಗಗಳು ಜಾನುವಾರುಗಳನ್ನು ಬಾಽಸುವುದು ಸಾಮಾನ್ಯವಾಗಿದ್ದು, ಅವುಗಳಿಗೆ ಕಾಲಕಾಲಕ್ಕೆ ನಿಗದಿತ ಕೇಂದ್ರ ದಲ್ಲಿ ಚಿಕಿತ್ಸೆ ನೀಡುತ್ತಿರುವುದರ ನಡುವೆಯೇ ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕೆಂಬ ರಾಜ್ಯ ಸರ್ಕಾರದ ಸಂಕಲ್ಪ ಯಶಸ್ವಿ ಕಂಡಿದೆ.

MLC H. Vishwanath: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹಿರಿಯ ರಾಜಕಾರಣಿ ಎಚ್‌.ವಿಶ್ವನಾಥ್‌

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಂಎಲ್‌ಸಿ ಎಚ್‌.ವಿಶ್ವನಾಥ್‌

ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ: ಸಿದ್ದರಾಮಯ್ಯ

CM Siddaramaiah: ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ. ಎಡಗೈಗೆ ಶೇ. 5.25, ಬಲಗೈಗೆ ಶೇ. 5.25 ಹಾಗೂ ಇತರ ಉಪಜಾತಿಗಳಿಗೆ ಶೇ. 4.5ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕ್ರಿಮಿನಲ್ ಸಂಚಿನಿಂದ ಶೃಂಗೇರಿಯಲ್ಲಿ ಬಿಜೆಪಿಗೆ ಗೆಲುವು; ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ

ಸಿಎಂ ಬದಲಾವಣೆ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

CM Siddaramaiah: ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ಅವರು ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಅಭಿಮಾನೋತ್ಸವ; ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಪುರಪ್ರವೇಶ

ಅಭಿಮಾನೋತ್ಸವ; ಮೇ 8ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್‌ವೈ ಪುರಪ್ರವೇಶ

BY Vijayendra: ಬಿಎಸ್‍ವೈ ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ ಯಾವುದೇ ರಾಜಕೀಯ ಬಣ್ಣ ಕಟ್ಟಬೇಡಿ. ಚುನಾವಣೆ ಆರು ತಿಂಗಳು ಇರುವಾಗ ಈ ಕಾರ್ಯಕ್ರಮ ಆಯೋಜಿಸಿದರೆ ಬಿಜೆಪಿಗೆ ಲಾಭವಾಗಲಿದೆ, ವಿಜಯೇಂದ್ರ ಅವರಿಗೆ ಲಾಭವಾಗಲಿದೆ ಎಂದು ಹೇಳಬಹುದಿತ್ತು. ಆದರೆ ಅಂತಹ ಯಾವುದೇ ಲಾಭ ಪಡೆಯುವ ಉದ್ದೇಶ ಇಲ್ಲ. ಇದಕ್ಕೆ ರಾಜಕೀಯ ಬಣ್ಣ ಕಟ್ಟಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ.

Sustainable Data Park: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

Sustainable Data Park: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Loading...