ಬಿಹಾರ ದೋಣಿ ದುರಂತ: 13 ಮಕ್ಕಳು ಸಾವು
Bihar boat tragedy: ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಏಳು ಮಕ್ಕಳನ್ನು ರಕ್ಷಿಸಲಾಗಿದ್ದು, ಪಾಟ್ನದ ಎನ್ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ವರ್ಷಾ ಸಿಂಗ್ ತಿಳಿಸಿದ್ದಾರೆ.
Bihar boat tragedy -
ಹಾಜಿಪುರ(ಬಿಹಾರ), ಅ.14: ಇಲ್ಲಿನ ವೈಶಾಲಿ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ, 15 ವರ್ಷದೊಳಗಿನ 13 ಮಕ್ಕಳು ಸೇರಿದಂತೆ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವರ್ಷಾ ಸಿಂಗ್ ತಿಳಿಸಿದ್ದಾರೆ.
ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಏಳು ಮಕ್ಕಳನ್ನು ರಕ್ಷಿಸಲಾಗಿದ್ದು, ಪಾಟ್ನದ ಎನ್ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ವರ್ಷಾ ಸಿಂಗ್ ತಿಳಿಸಿದ್ದಾರೆ.
Bihar - A boat carrying around 20 youths and children capsized in Rampur village in the Raghopur area of Vaishali district, Bihar, 11 bodies have been recovered so far. Rescue operations are underway to locate the remaining passengers. https://t.co/6fBB9fCwbj
— NextMinute News (@nextminutenews7) October 14, 2026
ರಾಮ್ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ನದಿಯ ಇನ್ನೊಂದು ಬದಿಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರಂಭದಲ್ಲಿ ಐದರಿಂದ ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಸಾವಿನ ಸಂಖ್ಯೆ 15ಕ್ಕೆ ಏರಿರುವುದು ದೃಢಪಟ್ಟಿದೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ.
Roopa Gururaj Column: ವಿಕ್ರಮ ಬೇತಾಳ 12: ವೃದ್ಧ ತಪಸ್ವಿಯ ಯೌವನದ ಮೋಹ
ದುರಂತಕ್ಕೆ ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ.