Spurious Liquor: ಕಳ್ಳಬಟ್ಟಿ ಸೇವಿಸಿ 14 ಜನರು ಸಾವು; ಹಲವರು ಅಸ್ವಸ್ಥ
ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿದೆ. ಭಂಗಾಲಿ, ಪಾತಾಳಪುರಿ, ಮರಾರಿ ಕಾಲನ್, ಥೆರೆವಾಲ್ ಮತ್ತು ತಲ್ವಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ.


ಚಂಡೀಗಢ: ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ (Spurious Liquor) ಮದ್ಯ ಸೇವಿಸಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿದೆ. ಭಂಗಾಲಿ, ಪಾತಾಳಪುರಿ, ಮರಾರಿ ಕಾಲನ್, ಥೆರೆವಾಲ್ ಮತ್ತು ತಲ್ವಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ. ಕಳ್ಳಭಟ್ಟಿ ಸೇವನೆಯಿಂದ ಅಸ್ವಸ್ಥಗೊಂಡ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ. ಅಮೃತಸರ ಉಪ ಆಯುಕ್ತೆ ಸಾಕ್ಷಿ ಸಾಹ್ನಿ ಮಾತನಾಡಿ 14 ಮಂದಿ ಸಾವನ್ನು ದೃಢಪಡಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Operation Sindoor: ನ್ಯೂಕ್ಲಿಯರ್ ದಾಳಿ ಬೆದರಿಕೆಗೆ ಭಾರತ ಹೆದರಲ್ಲ; ಪಾಕಿಸ್ತಾನವನ್ನು ಉಗ್ರ ಪೋಷಕ ಎಂದ ಮೋದಿ
ನಿನ್ನೆ ರಾತ್ರಿ 9:30 ರ ಸುಮಾರಿಗೆ ವಿಷಪೂರಿತ ಮದ್ಯ ಸೇವಿಸಿ ಜನರು ಸಾಯಲು ಪ್ರಾರಂಭಿಸಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು. ನಾವು ತಕ್ಷಣ ಕ್ರಮ ಕೈಗೊಂಡು ನಾಲ್ವರನ್ನು ಬಂಧಿಸಿದ್ದೇವೆ" ಎಂದು ಅಮೃತಸರದ ಎಸ್‌ಎಸ್‌ಪಿ ಮಣಿಂದರ್ ಸಿಂಗ್ ತಿಳಿಸಿದರು. ಮುಖ್ಯ ಪೂರೈಕೆದಾರ ಪರಬ್ಜೀತ್ ಸಿಂಗ್ ಅವರನ್ನು ಬಂಧಿಸಿದ್ದೇವೆ. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ನಕಲಿ ಮದ್ಯ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಂಜಾಬ್ ಸರ್ಕಾರದಿಂದ ನಮಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದು ಅವರು ಹೇಳಿದರು. ಪ್ರಸ್ತುತ ಸುಮಾರು 10 ರಿಂದ 15 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಅಮೃತಸರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಠಿಣ ಸೆಷನ್‌ಗಳ ಅಡಿಯಲ್ಲಿ 2 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.