ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rajasthan Road Accident: ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದು 15 ಮಂದಿ ಸಾವು; ರಾಜಸ್ಥಾನದಲ್ಲಿ ಘೋರ ಅವಘಡ

Road Accident: ರಾಜಸ್ಥಾನದಲ್ಲಿ ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ರಾಜಸ್ಥಾನದ ಫಲೋಡಿಯಲ್ಲಿ ನವೆಂಬರ್‌ 2ರಂದು ಈ ಅವಘಡ ನಡೆದಿದೆ. ಮೃತರು ಬಿಕಾನೇರ್‌ನ ಕೊಲಾಯತ್‌ಗೆ ಭೇಟಿ ನೀಡಿ ಜೋಧ್‌ಪುರದ ಸುರ್‌ಸಾಗರ್‌ಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.

ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದು 15 ಮಂದಿ ಸಾವು

-

Ramesh B Ramesh B Nov 2, 2025 8:59 PM

ಜೈಪುರ, ನ. 2: ರಾಜಸ್ಥಾನದಲ್ಲಿ ನಿಂತಿದ್ದ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ (Rajasthan Road Accident). ರಾಜಸ್ಥಾನದ ಫಲೋಡಿಯಲ್ಲಿ ನವೆಂಬರ್‌ 2ರಂದು ಈ ಅವಘಡ ನಡೆದಿದೆ. ಮೃತರು ಬಿಕಾನೇರ್‌ನ ಕೊಲಾಯತ್‌ ದೇವಸ್ಥಾನಕ್ಕೆ ಭೇಟಿ ನೀಡಿ ಜೋಧ್‌ಪುರದ ಸುರ್‌ಸಾಗರ್‌ಗೆ ಹಿಂತಿರುಗುತ್ತಿದ್ದ ಭಕ್ತರು ಎನ್ನಲಾಗಿದೆ. ಈ ದುಃಖದ ಸಮಯದಲ್ಲಿ ಸರ್ಕಾರ ಸಂತ್ರಸ್ತರ ಸಹಾಯಕ್ಕೆ ಧಾವಿಸಲಿದೆ ಎಂದು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. ರಾಜಸ್ಥಾನದ ರಾಜಧಾನಿ ಜೈಪುರದಿಂದ 400 ಕಿ.ಮೀ. ದೂರದಲ್ಲಿರುವ ಫಲೋಡಿಯಲ್ಲಿ ಈ ಅವಘಡ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬಸ್‌ನಲ್ಲಿದ್ದ ಎಲ್ಲ ಭಕ್ತರು ಜೋಧಪುರದ ಸುರಸಾಗರ್ ವಲಯದ ನಿವಾಸಿಗಳು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊಲಾಯತ್‌ ರಾಜಸ್ಥಾನದಲ್ಲಿರುವ ಹಿಂದುಗಳ ಪ್ರಮುಖ ಶ್ರದ್ಧಾ ಕೇಂದ್ರವಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿರುವ ಕೊಲಾಯತ್‌ ಸರೋವರದ ದಡದಲ್ಲಿ ಹಲವು ದೇವಸ್ಥಾನಗಳಿದ್ದು, ಭಕ್ತರು ದೂರದ ಊರುಗಳಿಂದ ಆಗಮಿಸುತ್ತಾರೆ. ಫಲೋಡಿಯಲ್ಲಿ ಅಪಘಾತಕ್ಕೀಡಾದ ಬಸ್‌ ಈ ಶ್ರದ್ಧಾ ಕೇಂದ್ರಕ್ಕೆ ತೆರಳಿ ಸುರಸಾಗರ್‌ಗೆ ಮರಳುತ್ತಿತ್ತು. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.



ʼʼರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಫಲೋಡಿ ಜಿಲ್ಲೆಯ ಮಾತೋಡಾ ಗ್ರಾಮದ ಬಳಿ ಭಾರತ್ ಮಾಲಾ ಹೆದ್ದಾರಿಯಲ್ಲಿರುವ ಈ ಅಪಘಾತ ಸಂಭವಿಸಿದೆʼʼ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Rajasthan Fire Tragedy: ರಾಜಸ್ಥಾನದಲ್ಲಿ ಬಸ್‌ ಬೆಂಕಿಗೆ ಆಹುತಿ; 20 ಜನರ ಸಾವಿಗೆ ಕಾರಣವಾದ ಅಂಶ ಯಾವುದು?

ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ

ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಆಘಾತ ವ್ಯಕ್ತಪಡಿಸಿದ್ದಾರೆ. "ಫಲೋಡಿಯ ಮಾತೋಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುದ್ದಿ ಕೇಳಿ ಹೃದಯ ಒಡೆದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಎಲ್ಲ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ನೀಡುವಂತೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ದುಃಖ ವ್ಯಕ್ತಪಡಿಸಿದ್ದಾರೆ. "ಫಲೋಡಿಯ ಮಾತೋಡಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ನನಗೆ ಈಗಷ್ಟೇ ಬಂದಿದೆ. ಇದನ್ನು ಕೇಳಿ ಆಘಾತವಾಗಿದೆ. ಮೃತರ ಕುಟುಂಬಗಳಿಗೆ ಭಗವಂತ ಶಕ್ತಿ ನೀಡಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂಬುದಾಗಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಜೈಸಲ್ಮೇರ್‌ ಬಸ್ ಬೆಂಕಿಗೆ ಆಹುತಿ: 20 ಜನರ ಸಾವು

ಕೆಲವು ದಿನಗಳ ಹಿಂದೆಯಷ್ಟೇ ರಾಜಸ್ಥಾನದ ಜೈಸಲ್ಮೇರ್‌ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನರು ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನ ಮತ್ತೊಂಡು ಅವಘಡ ನಡೆದಿದೆ. ಅಕ್ಟೋಬರ್‌ 14ರಂದು ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೊರಟಿದ್ದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಜೈಸಲ್ಮೇರ್ ನಗರದಿಂದ 10 ಕಿ.ಮೀ. ದೂರದಲ್ಲಿರುವ ಥೈಯತ್ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿತ್ತು.