Terrorists killed: ʻಆಪರೇಷನ್ ಟಿಕ್ಕಾʼ ಶುರು; ಇಬ್ಬರು ಉಗ್ರರು ಫಿನೀಶ್
ಇಂದು ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ 2–3 ಅಪರಿಚಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು. ಜಾಗೃತ ಪಡೆಗಳು ಒಳನುಸುಳುವವರನ್ನು ಸವಾಲು ಮಾಡಿದವು, ಇದು ಭಾರೀ ಗುಂಡಿನ ಚಕಮಕಿಗೆ ಕಾರಣವಾಯಿತು. ನಂತರ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಇನ್ನು ಕಾರ್ಯಾಚರಣೆ ಮುಂದುವರೆದಿದೆ.


ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ 28 ಜನ ಬಲಿಯಾದ ಬೆನ್ನಲ್ಲೇ ಕಣಿವೆ ರಾಜ್ಯದಲ್ಲಿ ಉಗ್ರ(Terrorists killed)ರನ್ನು ಮಟ್ಟ ಹಾಕಲು ಸೇನೆ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ. ಸೇನೆ ಆಪರೇಷನ್ ಟಿಕ್ಕಾ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಮೊದಲ ಹಂತದಲ್ಲೇ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ದಾಸ್ತಾನುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಂದು ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ 2–3 ಅಪರಿಚಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು. ಜಾಗೃತ ಪಡೆಗಳು ಒಳನುಸುಳುವವರನ್ನು ಸವಾಲು ಮಾಡಿದವು, ಇದು ಭಾರೀ ಗುಂಡಿನ ಚಕಮಕಿಗೆ ಕಾರಣವಾಯಿತು. ನಂತರ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಇನ್ನು ಕಾರ್ಯಾಚರಣೆ ಮುಂದುವರೆದಿದೆ.
ಈ ಸುದ್ದಿಯನ್ನೂ ಓದಿ: PM Modi: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಪ್ರವಾಸ ಮೊಟಕುಗೊಳಿಸಿದ ಮೋದಿ; ಇಂದು ರಾತ್ರಿಯೇ ರಿಟರ್ನ್
ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ಘಟನೆಯಲ್ಲಿ ಇದುವರೆಗೆ 26ಜನ ಬಲಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕ ಮೂಲದ ಮೂವರು ಸೇರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ(Pahalgam Terror Attack) ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ರಾತ್ರಿಯೇ ಭಾರತಕ್ಕೆ ಮರಳಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅವರು ನಿನ್ನೆ ಮಧ್ಯಾಹ್ನ ಸೌದಿ ಪ್ರವಾಸ ಕೈಗೊಂಡಿದ್ದರು. ಇದು ಎರಡು ದಿನಗಳ ಅಧಿಕೃತ ಪ್ರವಾಸವಾಗಿತ್ತು. ಇದೀಗ ಭೀಕರ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ, ಇಂದೇ ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನದಿಂದ ಇಳಿದ ತಕ್ಷಣ, ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲೇ ತುರ್ತು ಪರಿಶೀಲನಾ ಸಭೆ ನಡೆಸಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.