Jammu and Kashmir Encounter: ಪಹಲ್ಗಾಮ್ ದಾಳಿ ನಡೆಸಿದ್ದ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌ನಲ್ಲಿ ಫಿನೀಶ್
Terrorists Killed: ಭಾರತೀಯ ಸೇನೆ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅದು ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ನಂತರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತಕ್ಕೆ ನುಸುಳಿದ್ದ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೃಢಪಡಿಸಿದರು.


ಶ್ರೀನಗರ: ಆಪರೇಷನ್ ಮಹಾದೇವ್(Operation Mahadev) ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಪಹಲ್ಗಾಮ್ ದಾಳಿಯ ಮೂವರು ಉಗ್ರರನ್ನು ಗುಂಡಿಕ್ಕಿ ಕೊಂದಿರುವ ಬೆನ್ನಲ್ಲೇ ಮತ್ತೆರಡು ಉಗ್ರರು ಇದೀಗ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ಈ ಉಗ್ರರು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ, ಸೇನೆಯ ವೈಟ್ ನೈಟ್ ಕಾರ್ಪ್ಸ್ X ನಲ್ಲಿ ಪೋಸ್ಟ್ ಮಾಡಿದ್ದು, ಭಾರತೀಯ ಸೇನೆ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅದು ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ನಂತರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತಕ್ಕೆ ನುಸುಳಿದ್ದ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೃಢಪಡಿಸಿದರು. ಇನ್ನು ಹತರಾದ ಉಗ್ರರ ಹೆಸರನ್ನು ಸೇನೆ ಇನ್ನೂ ಬಹಿರಂಗ ಪಡಿಸಿಲ್ಲ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ (Srinagar) ಬಳಿಯ ಹರ್ವಾನ್‌ನ ದಟ್ಟ ಕಾಡಿನಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ (Encounter) ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಹಾಶಿಮ್ ಮೂಸಾ ಉರ್ಫ್ ಸುಲೇಮಾನ್ ಸೇರಿದಂತೆ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ವಿಶೇಷ ಪಡೆ ತಿಳಿಸಿತ್ತು.
‘ಆಪರೇಶನ್ ಮಹಾದೇವ್’ನಡಿ, ಗುಪ್ತಚರ ಮಾಹಿತಿಯನ್ನಾಧರಿಸಿ ನಡೆದ ಎನ್‌ಕೌಂಟರ್‌ನಲ್ಲಿ ಸುಲೇಮಾನ್ ಸೇರಿದಂತೆ ಈ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಇತರ ಭಯೋತ್ಪಾದಕ ಘಟನೆಗಳಿಗೂ ಸುಲೇಮಾನ್ ಕಾರಣನೆಂದು ಶಂಕಿಸಲಾಗಿದೆ.