ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Supreme Court: ಆಸ್ತಿ ವಿವರವನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದ ಸುಪ್ರೀಂ ಕೋರ್ಟ್ 21 ನ್ಯಾಯಮೂರ್ತಿಗಳು! ಇಲ್ಲಿದೆ ನೋಡಿ ಡೀಟೇಲ್ಸ್‌

ಇತ್ತೀಚೆಗೆ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಬಳಿಕ ಸಾರ್ವಜನಿಕ ವಲಯದಲ್ಲಿ ನ್ಯಾಯಮೂರ್ತಿಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸುಪ್ರೀಂ ಕೋರ್ಟ್‌ನ (Supreme Court) 33 ಹಾಲಿ ನ್ಯಾಯಾಧೀಶರಲ್ಲಿ 21 ಮಂದಿ ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ.

ಆಸ್ತಿ ವಿವರ ಸಾರ್ವಜನಿಕವಾಗಿ ಬಹಿರಂಗಗೊಳಿಸಿದ ಸುಪ್ರೀಂ ನ್ಯಾಯಮೂರ್ತಿಗಳು

Profile Vishakha Bhat May 6, 2025 4:15 PM

ನವದೆಹಲಿ: ಇತ್ತೀಚೆಗೆ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾದ ಬಳಿಕ ಸಾರ್ವಜನಿಕ ವಲಯದಲ್ಲಿ ನ್ಯಾಯಮೂರ್ತಿಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸುಪ್ರೀಂ ಕೋರ್ಟ್‌ನ (Supreme Court) 33 ಹಾಲಿ ನ್ಯಾಯಾಧೀಶರಲ್ಲಿ 21 ಮಂದಿ ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ-ವಿವಾದದ ನಂತರ, ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿಗಳ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ವಲಯದಲ್ಲಿ ಇರಿಸಬೇಕೆಂದು ನಿರ್ಧರಿಸಿತ್ತು.

ಇದೀಗ ನ್ಯಾಯಾಧೀಶರುಗಳ ಆದಾಯ ಹಾಗೂ ಆಸ್ತಿ ಘೋಷಣೆ ನಡೆದಿದೆ. ಸೋಮವಾರ 21 ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಪ್ರಕ್ರಿಯೆ ನಡೆದಿದೆ. ಆದಾಗ್ಯೂ, 12 ನ್ಯಾಯಾಧೀಶರ ಹೇಳಿಕೆಗಳನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಆಸ್ತಿಗಳ ವಿವರ ಬಹಿರಂಗ ಪಡಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪಟ್ಟಿ ಹೀಗಿದೆ

  • ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ
  • ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ
  • ನ್ಯಾಯಮೂರ್ತಿ ಅಭಯ್ ಎಸ್. ಓಕಾ
  • ನ್ಯಾಯಮೂರ್ತಿ ವಿಕ್ರಮ್ ನಾಥ್
  • ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್
  • ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ
  • ನ್ಯಾಯಮೂರ್ತಿ ಪಮಿಡಿಘಂಟಂ ಶ್ರೀ ನರಸಿಂಹ
  • ನ್ಯಾಯಮೂರ್ತಿ ಸುಧಾಂಶು ಧುಲಿಯಾ
  • ನ್ಯಾಯಮೂರ್ತಿ ಜಮ್ಶೆಡ್ ಬುರ್ಜೋರ್ ಪರ್ದಿವಾಲಾ
  • ನ್ಯಾಯಮೂರ್ತಿ ಪಂಕಜ್ ಮಿಥಾಲ್
  • ನ್ಯಾಯಮೂರ್ತಿ ಸಂಜಯ್ ಕರೋಲ್
  • ನ್ಯಾಯಮೂರ್ತಿ ಸಂಜಯ್ ಕುಮಾರ್
  • ನ್ಯಾಯಮೂರ್ತಿ ರಾಜೇಶ್ ಬಿಂದಾಲ್
  • ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್
  • ನ್ಯಾಯಮೂರ್ತಿ ಉಜ್ಜಲ್ ಭೂಯಾನ್
  • ನ್ಯಾಯಮೂರ್ತಿ ಎಸ್. ವೆಂಕಟನಾರಾಯಣ ಭಟ್ಟಿ
  • ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್
  • ನ್ಯಾಯಮೂರ್ತಿ ಸಂದೀಪ್ ಮೆಹ್ತಾ
  • ನ್ಯಾಯಮೂರ್ತಿ ಮನಮೋಹನ್
  • ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್
  • ಸಂಪೂರ್ಣ ವಿವರ Supreme Court Of India ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.

ಈ ಸುದ್ದಿಯನ್ನೂ ಓದಿ: Red Frort: ಕೆಂಪು ಕೋಟೆ ನಮ್ಮ ವಶಕ್ಕೆ ನೀಡಿ ಎಂದ ಮೊಘಲ್‌ ವಂಶಸ್ಥೆ; ಅರ್ಜಿ ತಿರಸ್ಕಾರ ಮಾಡಿದ ಸುಪ್ರೀಂ ಕೋರ್ಟ್‌

ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ (Yashvant Varma) ಅವರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನ್ಯಾಯಾಧೀಶರ ಮನೆಗೆ ಮನೆಗೆ ಬೆಂಕಿ ಬಿದ್ದಿದ್ದರಿಂದ ಅವರ ಮನೆಯಲ್ಲಿದ್ದ ರಾಶಿ ರಾಶಿ ಹಣದ ಕಂತೆಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಬೆನ್ನಲ್ಲೇ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ನ್ಯಾ. ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.