ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಂಬಾಲದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು; ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ

Ambala Building Collapse: ಹರಿಯಾಣದ ಅಂಬಾಲದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಜಿಲ್ಲಾಡಳಿತ ಸಿಬ್ಬಂದಿ ಧಾವಿಸಿದ್ದಾರೆ.

ಅಂಬಾಲದಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು

ಹರಿಯಾಣದ ಅಂಬಾಲದಲ್ಲಿ ಕುಸಿದ ಕಟ್ಟಡ -

Ramesh Ballamoole
Ramesh Ballamoole Sep 27, 2026 8:51 PM

ಚಂಡೀಗಢ, ಸೆ. 27: ಇತ್ತೀಚೆಗೆ ದೆಹಲಿಯಲ್ಲಿ ಪಿಜಿ ಕಟ್ಟಡ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಇನ್ನೂ ಹಸಿಯಾಗಿರುವುವಾಗಲೇ ಅಂತಹದ್ದೇ ಮತ್ತೊಂದು ದುರಂತ ಹರಿಯಾಣದಲ್ಲಿ ನಡೆದಿದೆ (Building Collapses). ಅಂಬಾಲದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ (Ambala Building Collapse). ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಂಬಾಲ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ 3 ಅಂತಸ್ತಿನ ಕಟ್ಟಡ ಕುಸಿದು ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಧುಲ್ಕೋಟ್‌ ಗ್ರಾಮದಲ್ಲಿನ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು ಒಳಗೆ ಸಿಕ್ಕಿ ಬಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಜಿಲ್ಲಾಡಳಿತ ಸಿಬ್ಬಂದಿ ಧಾವಿಸಿದ್ದು, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿ ಶಾಮಕ ದಳದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹರಿಯಾಣದಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು:



ಅವಶೇಷಗಳಡಿ ಎಷ್ಟು ಮಂದಿ ಸಿಲುಕಿದ್ದಾರೆ ಎನ್ನುವ ನಿಖರ ಮಾಹಿತಿ ಲಭ್ಯವಾಗಿಲ್ಲ. ಮೂಲಗಳ ಪ್ರಕಾರ 15ರಿಂದ 20 ಮಂದಿ ಇದ್ದಾರೆ ಎನ್ನಲಾಗಿದೆ. ಅಂಬಾಲ ಸಿಟಿ ಎಸ್‌ಡಿಎಂ ದರ್ಶನ್‌ ಕುಮಾರ್‌ ಮಾತನಾಡಿ, ʼʼಅವಶೇಷಗಳ ಅಡಿಯಿಂದ ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಹಲವು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ವಿವರಿಸಿದ್ದಾರೆ.

ತಮಿಳುನಾಡಿನಲ್ಲಿ ಮತ್ತೊಂದು ದುರಂತ; ಚೆನ್ನೈನ ವಿದ್ಯುತ್ ಸ್ಥಾವರ ಬಳಿ ಕಟ್ಟಡ ಕುಸಿದು 9 ಮಂದಿ ಸಾವು

ಗಾಯಗೊಂಡು ಚಿಕಿತ್ಸೆ ಪಡೆದ ನಾಲ್ವರನ್ನು ಸದ್ಯ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ. ಐವರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ʼʼಮೃತರು ಸೇರಿ ಒಟ್ಟು 12 ಮಂದಿಯ ಗುರುತು ಪತ್ತೆಯಾಗಿದೆʼʼ ಎಂದು ದರ್ಶನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಮಾಲಕ ಮತ್ತು ಗುತ್ತಿಗೆದಾರ ನಾಪತ್ತೆ

ʼʼಕಟ್ಟಡದೊಳಗೆ ಎಷ್ಟು ಮಂದಿ ಸಿಲುಕಿದ್ದಾರೆ ಎನ್ನುವ ನಿಖರ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಈ ಕಟ್ಟಡ ಯಾರಿಗೆ ಸೇರಿದ್ದು ಎನ್ನುವುದು ಗೊತ್ತಾಗಿಲ್ಲ. ಅದಾಗ್ಯೂ ಕಟ್ಟಡ ಮಾಲಕ ಮತ್ತು ಗುತ್ತಿಗೆದಾರ ಸ್ಥಳದಿಂದ ಪರಾರಿಯಾಗಿದ್ದಾರೆ. ಕಟ್ಟಡ ಕುಸಿತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼʼ ಎಂದು ದರ್ಶನ್‌ ಹೇಳಿದ್ದಾರೆ. ಗಾಯಗೊಂಡ ಕಾರ್ಮಿಕರೊಬ್ಬರ ಪ್ರಕಾರ ನೆಲ ಮಹಡಿಯಲ್ಲಿ ಸುಮಾರು 10 ಮಂದಿ ಕಾರ್ಯ ನಿರ್ವಹಿಸುತ್ತಿದ್ದರು. ಒಟ್ಟು 10 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದಿದ್ದಾರೆ. ಸ್ಥಳೀಯರ ಪ್ರಕಾರ ಕಟ್ಟಡದ ಕಾಮಗಾರಿ ಕಳಪೆಯಿಂದ ಕೂಡಿತ್ತು.

ಪುಣೆಯಲ್ಲಿ ಕಸದ ದಿಬ್ಬ ಕುಸಿದು ಕಟ್ಟಡ ನೆಲಸಮ; ಅವಶೇಷಗಳಡಿ 15 ಮಂದಿ ಸಿಲುಕಿರುವ ಶಂಕೆ

ಹಿಂದೆಯೂ ನಡೆದಿತ್ತು

ಜೂನ್‌ 16ರಂದು ಅಂಬಾಲದ ಓಲ್ಡ್‌ ವೆಜಿಟೇಬಲ್‌ ಮಾರ್ಕೆಟ್‌ನ ಕಟ್ಟಡವೊಂದು ಕುಸಿದು ಬಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಗಾಯಗೊಂಡ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ ದಿನಗಳ ಅಂತರದಲ್ಲಿ ದುರಂತ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.