Cloudburst: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ
ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಮಂಗಳವಾರ (Cloudburst) ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜಮ್ಮು ವಿಭಾಗದಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅನೇಕ ನದಿಗಳು ಮತ್ತು ಹೊಳೆಗಳಲ್ಲಿ ನೀರಿನ ಮಟ್ಟವು ಈಗಾಗಲೇ ಅಪಾಯದ ಮಟ್ಟಕ್ಕಿಂತ ಮೀರಿ ಹರಿಯುತ್ತಿದ್ದು, ರಾತ್ರಿಯಿಡೀ ಮತ್ತಷ್ಟು ಮತ್ತು ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಪ್ರದೇಶದಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಜಲಮೂಲಗಳು ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ.
🚨Scary Visuals from Doda show a massive flash flood situation, with water levels rising rapidly in the area.
— Simran (@SimranBabbar_05) August 26, 2025
The video clearly captures the force of the water, flowing and low-lying areas, creating panic among locals.
Locals are advised to stay away from vulnerable zones. pic.twitter.com/gKnpczHSgp
ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕಥುವಾ ಜಿಲ್ಲೆಯಲ್ಲಿ 155.6 ಮಿ.ಮೀ. ಮಳೆಯಾಗಿದ್ದು, ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ನಂತರ ದೋಡಾದ ಭದೇರ್ವಾದಲ್ಲಿ 99.8 ಮಿ.ಮೀ., ಜಮ್ಮುವಿನಲ್ಲಿ 81.5 ಮಿ.ಮೀ. ಮತ್ತು ಕತ್ರಾದಲ್ಲಿ 68.8 ಮಿ.ಮೀ. ಮಳೆಯಾಗಿದೆ. ಕನಿಷ್ಠ ಆಗಸ್ಟ್ 27 ರವರೆಗೆ ಎತ್ತರದ ಪ್ರದೇಶಗಳಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ದುರ್ಬಲ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Cloudburst: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ; ಭಾರೀ ನಾಶ, ಹಲವರು ನಾಪತ್ತೆ ಶಂಕೆ
ವಾರಾಂತ್ಯದಲ್ಲಿ ಜಮ್ಮುವಿನಲ್ಲಿ ದಾಖಲೆಯ ಮಳೆಯಾಗಿದ್ದು, 24 ಗಂಟೆಗಳಲ್ಲಿ 190.4 ಮಿಮೀ ಮಳೆಯಾಗಿದೆ, ಇದು ಆಗಸ್ಟ್ ತಿಂಗಳಲ್ಲಿ ಶತಮಾನದ ಎರಡನೇ ಅತಿ ಹೆಚ್ಚು ಮಳೆಯಾಗಿದೆ. ಈ ತಿಂಗಳಿನಲ್ಲಿ ಆಗಸ್ಟ್ 5, 1926 ರಂದು ದಾಖಲಾಗಿದ್ದ 228.6 ಮಿಮೀ ಮಳೆಯಾಗಿದ್ದರೆ, ಹಿಂದಿನ ಎರಡನೇ ಅತಿ ಹೆಚ್ಚು ಆಗಸ್ಟ್ 11, 2022 ರಂದು 189.6 ಮಿಮೀ ಮಳೆಯಾಗಿದೆ. ಕಾಶ್ಮೀರದಲ್ಲಿ, ದಕ್ಷಿಣ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗಿದ್ದು, ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.