ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 7 ಕಾರ್ಮಿಕರು ಸಾವು, 10 ಮಂದಿ ಸಿಲುಕಿರುವ ಶಂಕೆ

Rajasthan Chemical Factory Fire: ರಾಜಸ್ಥಾನದ ಭಿವಾಡಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, 10 ಕಾರ್ಮಿಕರು ಇನ್ನೂ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 9.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ, ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 7 ಕಾರ್ಮಿಕರು ಸಾವು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 16, 2026 3:32 PM

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, 10 ಕಾರ್ಮಿಕರು ಇನ್ನೂ (Rajasthan Chemical Factory Fire) ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 9.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ, ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಖಾಸಗಿ ಕೈಗಾರಿಕಾ ಘಟಕದಿಂದ ಜ್ವಾಲೆಗಳು ಹರಡಿ ಕಾರ್ಖಾನೆಯ ದೊಡ್ಡ ಭಾಗವನ್ನು ಆವರಿಸಿಕೊಂಡಿದೆ. ತಕ್ಷಣವೇ ಕೆಲ ಕಾರ್ಮಿಕರು ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಇನ್ನೂ ಕೆಲವರು ಬೆಂಕಿಯ ಜ್ವಾಲೆಗೆ ತುತ್ತಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆ ಕುರಿತು ಮಾತನಾಡಿದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತಾ ಮಿಶ್ರಾ ಮಾತನಾಡಿ, ಈ ಪ್ರದೇಶದಲ್ಲಿ ಪೊಲೀಸರು ದಿನನಿತ್ಯ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಮೊದಲು ಬೆಳಕಿಗೆ ಬಂದಿತು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ವೈದ್ಯಕೀಯ ತಂಡಗಳು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದರು. ಒಂದೂವರೆ ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಹೇಳಿದ್ದಾರೆ.

ತಿಜಾರಾ ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಅವರು ಸ್ಥಳದಲ್ಲಿ ಪ್ರಾಥಮಿಕ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಡಿಎಂ ಸೇರಿದಂತೆ ಹಿರಿಯ ಜಿಲ್ಲಾ ಅಧಿಕಾರಿಗಳು ಪರಿಸ್ಥಿತಿಯ ವಿವರವಾದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿಯ ಕಾರಣವನ್ನು ನಿರ್ಧರಿಸಲು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳಲ್ಲಿನ ಯಾವುದೇ ಲೋಪಗಳನ್ನು ನಿರ್ಣಯಿಸಲು ಜಿಲ್ಲಾಡಳಿತವು ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಘೋಷಿಸಿದೆ.

ಕೆಮಿಕಲ್‌ ಕಾರ್ಖಾನೆಯಲ್ಲಿ ಸ್ಫೋಟ

ಭಾನುವಾರ ಕಾರೆಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ಸ್​​ ಇಂಡಸ್ಟ್ರೀಸ್ ಕಾರ್ಖಾನೆಯೊಂದರಲ್ಲಿ ರಾಸಾಯನಿಕ ಸಂಗ್ರಹಣಾ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಾಯಾಳುಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.