ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೋನಮ್ ವಾಂಗ್ಚುಕ್ ಕೋರಿಕೆ ಮೇರೆಗೆ ಉಪಾವಾಸ ಅಂತ್ಯಗೊಳಿಸಿದ ಅಭಿಜಿತ್ ದೀಪ್ಕೆ; ವಶಕ್ಕೆ ಪಡೆದ ಪೊಲೀಸರು

Abhijeet Dipke Ends Hunger Strike: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಮನವಿ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಒಂದು ಲೋಟ ಜ್ಯೂಸ್ ಕುಡಿದು ಉಪವಾಸ ಕೊನೆಗೊಳಿಸಿದರು.

ಉಪಾವಾಸ ಅಂತ್ಯಗೊಳಿಸಿದ ಅಭಿಜಿತ್ ದೀಪ್ಕೆ ಪೊಲೀಸ್‌ ವಶಕ್ಕೆ

ಅಭಿಜಿತ್ ದೀಪ್ಕೆ (ಸಂಗ್ರಹ ಚಿತ್ರ) -

Priyanka P
Priyanka P Jul 20, 2026 3:24 PM

ನವದೆಹಲಿ, ಜು. 20: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ (Abhijeet Dipke) ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಉಪಾವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪ್ರತಿಭಟನೆ ಮುಂದುವರಿಸಲು ಉಪವಾಸ ಕೈಬಿಡುವಂತೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಮನವಿ ಮಾಡಿದ ಹಿನ್ನೆಲೆಯಲ್ಲಿ ಉಪವಾಸ ಕೊನೆಗೊಳಿಸಿದ್ದಾಗಿ ದೀಪಕ್‌ ಹೇಳಿದ್ದಾರೆ. ಸದ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶನಿವಾರದಿಂದ (ಜುಲೈ 18) ಉಪವಾಸ ಮಾಡುತ್ತಿದ್ದ ದೀಪ್ಕೆ ಸಿಜೆಪಿ ನೇತೃತ್ವದ ಸಂಸತ್ತಿನ ಕಡೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗುವ ಮೊದಲು ಒಂದು ಲೋಟ ಜ್ಯೂಸ್ ಕುಡಿದು ಉಪಾವಾಸ ಕೊನೆಗೊಳಿಸಿದರು. 20 ದಿನಗಳಿಗೂ ಹೆಚ್ಚು ಕಾಲ ಉಪಾವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್, ಚಳುವಳಿಯನ್ನು ಉಳಿಸಿಕೊಳ್ಳಲು ದೀಪ್ಕೆ ಅವರ ಬಳಿ ಉಪಾವಾಸ ಅಂತ್ಯಗೊಳಿಸುವಂತೆ ಒತ್ತಾಯಿಸಿದ್ದರು ಎಂದು ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಿಳಿಸಿದ್ದಾರೆ.

ದೆಹಲಿ ಹೈಕೋರ್ಟ್ ಹೊರಡಿಸಿದ್ದ ಆದೇಶದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ವಾಂಗ್ಚುಕ್ ಅವರನ್ನು ಜಂತರ್‌ಮಂತರ್‌ನಿಂದ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ ನಂತರ ದೀಪ್ಕೆ ಉಪಾವಾಸ ಸತ್ಯಾಗ್ರಹ ಆರಂಭಿಸಿದ್ದರು.

ಇಲ್ಲಿದೆ ವಿಡಿಯೊ:



ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆಗಳಿಗೆ ಒತ್ತಾಯಿಸಿ ವಾಂಗ್ಚುಕ್ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪಾವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಕೇಂದ್ರ ಸರ್ಕಾರಕ್ಕೆ ಕೊಟ್ಟ ಎಚ್ಚರಿಕೆ ಏನು?

ಈ ಮಧ್ಯೆ, ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ಚರ್ಚೆಗಾಗಿ ಸರ್ಕಾರವು ಪಕ್ಷವನ್ನು ಸಂಪರ್ಕಿಸಿದೆ ಎಂದು ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ತಾವು ಹಾಗೂ ಪಕ್ಷದ ನಾಯಕ ಅಶುತೋಷ್ ರಂಕಾ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ತೆರಳುತ್ತಿರುವುದಾಗಿ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಸರ್ಕಾರ ಮಾತುಕತೆಗಾಗಿ ನಮ್ಮನ್ನು ಸಂಪರ್ಕಿಸಿತು. “ಅಶುತೋಷ್ ರಾಂಕಾ ಮತ್ತು ನಾನು ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ಹೊರಟಿದ್ದೇವೆ. ನಮ್ಮ ಬೇಡಿಕೆಗಳು ಬದಲಾಗಿಲ್ಲ ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ” ಎಂದು ದಾಸ್ ಬರೆದಿದ್ದಾರೆ.

ಸಂಸತ್ತಿನ ಬೀದಿಯ ಬಳಿ ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿ, ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರಿಕೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸಿದರು. ಕೇಂದ್ರ ದೆಹಲಿಯಲ್ಲಿ ಬಿಗಿ ಭದ್ರತೆಯ ನಡುವೆಯೇ ಈ ಬೆಳವಣಿಗೆ ನಡೆಯಿತು.

ದೆಹಲಿಯಲ್ಲಿ ಕೋಲಾಹಲ ಸೃಷ್ಟಿಸಿದ ಕಾಕ್ರೋಚ್ ಜನತಾ ಪಾರ್ಟಿಯ ಸಂಸತ್ ಚಲೋ: ಪೊಲೀಸರಿಂದ ಲಾಠಿಚಾರ್ಜ್

ಸಿಜೆಪಿಯ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಲು ಪ್ರತಿಭಟನಾಕಾರರ ಗುಂಪು ಬ್ಯಾರಿಕೇಡ್‌ಗಳನ್ನು ಮುರಿದು ಜಂತರ್ ಮಂತರ್ ಕಡೆಗೆ ತೆರಳಲು ಪ್ರಯತ್ನಿಸಿದ ನಂತರ, ಭದ್ರತಾ ಸಿಬ್ಬಂದಿ ಶಾಸ್ತ್ರಿ ಭವನದ ಬಳಿ ಲಾಠಿ ಚಾರ್ಜ್ ನಡೆಸಿದರು ಹಾಗೂ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

ದೆಹಲಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯಾಗದಂತೆ ತಡೆಯಲು ಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು, ಪ್ಯಾರಾಮಿಲಿಟರಿ ಪಡೆಗಳನ್ನು ಸೂಕ್ಷ್ಮ ಸ್ಥಳಗಳಲ್ಲಿ ಮತ್ತು ಸರ್ಕಾರಿ ಕಟ್ಟಡಗಳ ಸುತ್ತಲೂ ನಿಯೋಜಿಸಲಾಗಿದೆ.