Afghan Minister: ದೆಹಲಿಯಲ್ಲಿ ತಾಲಿಬಾನ್ ಸಚಿವನ ಪತ್ರಿಕಾಗೋಷ್ಠಿ; ಪತ್ರಕರ್ತೆಯರಿಗೆ ನಿಷೇಧ, ಹಲವರ ಆಕ್ರೋಶ
ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಆರು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆದಿದೆ. ಆದರೆ ಮುತ್ತಕಿ ಅವರ ಒಂದು ನಡೆಗೆ ಇದೀಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

-

ನವದೆಹಲಿ: ಅಫ್ಘಾನಿಸ್ತಾನದ (Afghan Minister) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಆರು (Amir Khan Muttaqi) ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆದಿದೆ. ಆದರೆ ಮುತ್ತಕಿ ಅವರ ಒಂದು ನಡೆಗೆ ಇದೀಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಹಿಳೆಯರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡದ ಕಾರಣ, ನವದೆಹಲಿಯಲ್ಲಿ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಡೆಸಿದ ಪತ್ರಿಕಾಗೋಷ್ಠಿಯು ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಮೇಲೆ ಹೇರುವ ನಿರ್ಬಂಧಗಳಿಗೆ ತಾಲಿಬಾನ್ ಕೆಂಗಣ್ಣಿಗೆ ಗುರಿಯಾಗಿದ್ದು, ಭಾರತದ ನೆಲದಲ್ಲಿಯೂ ಅದನ್ನು ಮುಂದುವರಿಸಲಾಗಿದೆ ಎಂದು ಮಹಿಳಾ ಪತ್ರಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಭಾರತಕ್ಕೆ ಆಗಮಿಸಿದ ಮುತ್ತಕಿ ಶುಕ್ರವಾರ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಿದರು. ಸಂಬಂಧಗಳ ದೊಡ್ಡ ಪುನರ್ರಚನೆ ಎಂದು ಪರಿಗಣಿಸಲಾದ ಈ ಸಭೆಯು, ಕಾಬೂಲ್‌ನಲ್ಲಿರುವ ತಾಂತ್ರಿಕ ಕಾರ್ಯಾಚರಣೆಯನ್ನು ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಭಾರತ ಘೋಷಿಸಿತು, ಇದನ್ನು ಅಫ್ಘಾನಿಸ್ತಾನ ವಿದೇಶಾಂಗ ಸಚಿವರು ಸ್ವಾಗತಿಸಿದರು. ಭಾರತವು ಅಫ್ಘಾನಿಸ್ತಾನದ ಸಾರ್ವಭೌಮತೆ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ. ಭಾರತದ ತಾಂತ್ರಿಕ ಮಿಷನ್ ಅನ್ನು ರಾಯಭಾರ ಕಚೇರಿಯ ಸ್ಥಾನಮಾನಕ್ಕೆ ಮೇಲ್ದರ್ಜೆಗೇರಿಸಿರುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.
ಮಧ್ಯಾಹ್ನ ಮುತ್ತಕಿ ಅವರು ಅಫ್ಘಾನಿಸ್ತಾನದ ರಾಯಭಾರ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆಯರನ್ನು ನಿಷೇಧಿಸಲಾಗಿತ್ತು ನಂತರ ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು ಮತ್ತು ಎಲ್ಲಾ ಮಹಿಳಾ ವರದಿಗಾರರು ಡ್ರೆಸ್ ಕೋಡ್ ಅನ್ನು ಗೌರವಿಸಿದ್ದಾರೆ ಎಂದು ಗಮನಸೆಳೆದರು. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಹ ಈ ಕ್ರಮವನ್ನು ಪ್ರಶ್ನಿಸಿದರು.
ಈ ಸುದ್ದಿಯನ್ನೂ ಓದಿ: Amir Khan Muttaqi: ಶಾಂತಿಯ ಮಾರ್ಗ ಅನುಸರಿಸಲು ಭಯೋತ್ಪಾದಕರಿಗೆ ಭಾರತದಿಂದ ಕರೆ ಕೊಟ್ಟ ತಾಲಿಬಾನ್ ಸಚಿವ ಮುತ್ತಕಿ
ಭಾರತದ ವಿರುದ್ಧ ಹಲವಾರು ದಾಳಿಗಳನ್ನು ನಡೆಸಿರುವ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳಿಗೆ ತಮ್ಮ ದೇಶವು ಯಾವುದೇ ಜಾಗವನ್ನು ನೀಡುವುದಿಲ್ಲ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ದೇಶದಲ್ಲಿ ಇತ್ತೀಚೆಗೆ ನಡೆದ ದಾಳಿಗೆ ಪಾಕಿಸ್ತಾನವನ್ನು ದೂಷಿಸಿದ ಮುತ್ತಕಿ, ದೇಶದಲ್ಲಿ ಶಾಂತಿ ನೆಲೆಸಲು ಯಾರಿಗೂ ಸಮಸ್ಯೆಯಾಗಬಾರದು ಎಂದು ಹೇಳಿದ್ದಾರೆ.