ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಭಿಷೇಕ್ ಬ್ಯಾನರ್ಜಿ ನಂತರ ಮತ್ತೋರ್ವ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ

Kalyan Banerjee Assaulted: ಅಭಿಷೇಕ್ ಬ್ಯಾನರ್ಜಿ ನಂತರ ಇದೀಗ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆಯ ಹೊರಗೆ ಘರ್ಷಣೆ ನಡೆದಿದ್ದು, ಟಿಎಂಸಿ ಹಿರಿಯ ನಾಯಕ ಮತ್ತು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಗೆ ಗಾಯವಾಯಿತು.

ಅಭಿಷೇಕ್ ಬ್ಯಾನರ್ಜಿ ನಂತರ, ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೂ ಹಲ್ಲೆ

ಗಾಯಗೊಂಡ ಕಲ್ಯಾಣ್ ಬ್ಯಾನರ್ಜಿ -

Priyanka P
Priyanka P May 31, 2026 2:53 PM

ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಅಭಿಷೇಕ್ ಬ್ಯಾನರ್ಜಿ (Abhishek Banerjee) ನಂತರ ಇದೀಗ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಮೇಲೂ ಹಲ್ಲೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆಯ ಹೊರಗೆ ಘರ್ಷಣೆ ನಡೆದಿದ್ದು, ಟಿಎಂಸಿ ಹಿರಿಯ ನಾಯಕ ಮತ್ತು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಗೆ ಗಾಯವಾಯಿತು. ಬಂಧಿತರಾದ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲು ಟಿಎಂಸಿ ಬೆಂಬಲಿಗರು ಸೇರಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಟಿಎಂಸಿ (TMC) ಬೆಂಬಲಿಗರ ಮಧ್ಯ ಘರ್ಷಣೆ ಸಂಭವಿದೆ ಎಂದು ಮೂಲಗಳು ತಿಳಿಸಿವೆ.

ಪರಸ್ಪರ ಕೈ ಮಿಲಾಯಿಸುತ್ತಿದ್ದಂತೆ ಪರಿಸ್ಥಿತಿ ಹದಗೆಟ್ಟಿತು. ಬಿಜೆಪಿ ಕಾರ್ಯಕರ್ತರು ಟಿಎಂಸಿ ವಿರೋಧಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಕಳ್ಳರು ಎಂಬ ಘೋಷಣೆ ಮೊಳಗಿತು. ಹೆಚ್ಚುತ್ತಿರುವ ಅವ್ಯವಸ್ಥೆಯನ್ನು ನಿಯಂತ್ರಿಸಲು ಹಾಗೂ ಮತ್ತಷ್ಟು ಹಿಂಸಾಚಾರವನ್ನು ತಡೆಯಲು ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳ ದೊಡ್ಡ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಯಿತು.

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ:



ವಿಡಿಯೊದಲ್ಲಿ ಹಲ್ಲೆಯ ನಂತರ ಕಲ್ಯಾಣ್ ಬ್ಯಾನರ್ಜಿ ತಮ್ಮ ಗಾಯಗೊಂಡ ತಲೆಗೆ ಒದ್ದೆ ಕರವಸ್ತ್ರವನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಮನವಿಯನ್ನು ಸಲ್ಲಿಸಲು ಪೊಲೀಸ್ ಠಾಣೆಗೆ ಹೋಗುತ್ತಿದ್ದಾಗ ಉದ್ದೇಶಪೂರ್ವಕವಾಗಿ ತಮ್ಮನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರತಿಭಟನೆ ನಡೆಸುವ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದರು.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಮೊಟ್ಟೆ, ಕಲ್ಲು ಎಸೆದ ಉದ್ರಿಕ್ತ ಗುಂಪು

ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆಯ ಬಳಿಕದ ದಾಳಿ

ಸೋನಾರ್‌ಪುರದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಶನಿವಾರ (ಮೇ 30) ಅಭಿಷೇಕ್ ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಹೋಗಿದ್ದರು. ಅವರು ತಮ್ಮ ಕಾರಿನಿಂದ ಇಳಿದ ತಕ್ಷಣ, ಘೋಷಣೆಯನ್ನು ಎದುರಿಸಬೇಕಾಯಿತು.

ಗುಂಪು ಶೀಘ್ರದಲ್ಲೇ ಹಿಂಸಾತ್ಮಕ ರೂಪ ಪಡೆದುಕೊಂಡಿತು. ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾದ ಗುಂಪು ಅವರನ್ನು ಕಳ್ಳ-ಕಳ್ಳ ಎಂದು ಕೂಗಿದ್ದಲ್ಲದೆ, ಮೊಟ್ಟೆ ಮತ್ತು ಕಲ್ಲುಗಳನ್ನು ಎಸೆದಿತ್ತು. ತಮ್ಮ ತಲೆಯ ರಕ್ಷಣೆಗಾಗಿ ಅವರು ಹೆಲ್ಮೆಟ್ ಧರಿಸಬೇಕಾಯ್ತು. ಕೆಲವರು ಅಭಿಷೇಕ್ ಅವರಿಗೆ ಕಪಾಳಮೋಕ್ಷ ಮಾಡಿದರು. ನಂತರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಯನ್ನು ಭದ್ರತಾ ಸಿಬ್ಬಂದಿಯ ಸಹಾಯದಿಂದ ಕರೆದೊಯ್ಯಲಾಯಿತು.