Parliament Monsoon Session: ಆಪರೇಷನ್ ಸಿಂದೂರ್ ಬಳಿಕ ಮೊದಲ ಸಂಸತ್ ಅಧಿವೇಶನ ಜು. 21ರಿಂದ ಆರಂಭ
ಏಪ್ರಿಲ್ 22ರಂದು ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7, 8ರಂದು ಭಯೋತ್ಪಾದಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂದೂರ್ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರೆಲ್ಲರನ್ನು ಜುಲೈ 21ರಿಂದ ಸಂಸತ್ತಿನಲ್ಲಿ (Parliament Monsoon Session) ಎದುರಿಸಲಿದೆ.


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu and kashmir) ಪಹಲ್ಗಾಮ್ (pahalgam) ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (terror attack) ಪ್ರತಿಯಾಗಿ ಭಾರತೀಯ ಸೇನೆ (indian army) ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಚರಣೆಯ ಬಳಿಕ ಮೊದಲ ಬಾರಿಗೆ ಸಂಸತ್ತಿನ ಅಧಿವೇಶನ (Parliament Monsoon Session) ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿದೆ. ಜುಲೈ 21 ರಂದು ಪ್ರಾರಂಭವಾಗಿ ಆಗಸ್ಟ್ 21 ರವರೆಗೆ ನಡೆಯಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯಲಿದೆ. ಈ ನಡುವೆ ಸ್ವಾತಂತ್ರ್ಯ ದಿನಾಚರಣೆ ಇರುವುದರಿಂದ ಆಗಸ್ಟ್ 13, 14ರಂದು ಯಾವುದೇ ಅಧಿವೇಶನಗಳು ಇರುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Parliamentary Affairs Minister Kiren Rijiju) ಬುಧವಾರ ತಿಳಿಸಿದ್ದಾರೆ.
ಏಪ್ರಿಲ್ 22ರಂದು ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7, 8ರಂದು ಭಯೋತ್ಪಾದಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂದೂರ್ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರೆಲ್ಲರನ್ನು ಸಂಸತ್ತಿನಲ್ಲಿ ಎದುರಿಸಲಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜುಲೈ 21 ರಿಂದ ಆಗಸ್ಟ್ 21ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾವನೆಗೆ ಅನುಮೋದನೆಯನ್ನು ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 13 ಮತ್ತು 14 ರಂದು ಯಾವುದೇ ಅಧಿವೇಶನಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.
The Hon’ble President of India has approved the proposal of the Government to convene the Monsoon Session of Parliament from 21st July to 21st August, 2025. In view of the Independence Day celebrations, there will be no sittings on the 13th and 14th of August. pic.twitter.com/ReWs8T7Czk
— Kiren Rijiju (@KirenRijiju) July 2, 2025
ಈ ಹಿಂದೆ ಮಳೆಗಾಲದ ಸಂಸತ್ ಅಧಿವೇಶನವು ಆಗಸ್ಟ್ 12 ರಂದು ಕೊನೆಗೊಳ್ಳಬೇಕಿತ್ತು. ಆದರೆ ಈ ಬಾರಿ ಅದನ್ನು ಒಂದು ವಾರ ವಿಸ್ತರಿಸಲಾಗಿದೆ. ದಾಳಿಯ ಅನಂತರದ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದು, ಅಧಿವೇಶನದ ಆರಂಭದಿಂದಲೇ ಈ ಬಗ್ಗೆ ಪ್ರಶ್ನೆಗಳನ್ನು ಎತ್ತುವ ಸಾಧ್ಯತೆ ಇದೆ.
ಈ ಹಿಂದೆ ನಡೆದ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ ಮತ್ತು ಹಣಕಾಸು ಮಸೂದೆ ಸೇರಿದಂತೆ ಕೆಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸಿತ್ತು. ಬಜೆಟ್ ಅಧಿವೇಶನವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು, ಒಟ್ಟು 26 ದಿನಗಳ ಕಾಲ ನಡೆಯಿತು.
ಇದನ್ನೂ ಓದಿ: IND vs ENG: ಶತಕ ಸಿಡಿಸಿ ಎಂಎಸ್ ಧೋನಿ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭಮನ್ ಗಿಲ್!
ಆಪರೇಷನ್ ಸಿಂದೂರ್
ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಮೇ 7 ಮತ್ತು 8ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ನಡೆಸಿತ್ತು. ಇದರಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅನಂತರ ಸರ್ಕಾರವು ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದ ಎರಡು ಸರ್ವಪಕ್ಷ ಸಭೆಗಳನ್ನು ನಡೆಸಿತ್ತು.
ಎರಡು ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ ಸರ್ಕಾರವು ಸರ್ವಪಕ್ಷಗಳ ನಿಯೋಗವನ್ನು ರಚಿಸಿ ಈ ನಿಯೋಗಗಳ ಮೂಲಕ ವಿವಿಧ ದೇಶಗಳಿಗೆ ಭೇಟಿ ನೀಡಿ ಭಯೋತ್ಪಾದನೆ ವಿರುದ್ಧ ಭಾರತ ಶೂನ್ಯ ಸಹಿಷ್ಣು ನೀತಿಯನ್ನು ಜಗತ್ತಿಗೆ ಸಾರಿತು.