ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

operation sindoor: ಸೇನೆಗೆ ಉಗ್ರರ ನೆಲೆ ತೋರಿಸಿದ್ದೇ ಇಸ್ರೋ

ಅಗರ್ತಲಾದಲ್ಲಿ ನಡೆದ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ (ಸಿಎಯು) 5 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ನಾರಾಯಣನ್, “ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಉಪಗ್ರಹಗಳ ಮೂಲಕ ಸೇವೆ ಸಲ್ಲಿಸಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ನಾವು ಹೆಚ್ಚಿನದನ್ನು ಸಾಧಿಸಲು ಸಾಧ್ಯವಿಲ್ಲ" ಎಂದರು.

ಸೇನೆಗೆ ಉಗ್ರರ ನೆಲೆ ತೋರಿಸಿದ್ದೇ ಇಸ್ರೋ

Profile Abhilash BC May 12, 2025 6:27 AM

ನವದೆಹಲಿ: ಪಾಕಿಸ್ತಾನದ ಮೇಲೆ ನಿಖರ ವೈಮಾನಿಕ ದಾಳಿಯಲ್ಲಿ(operation sindoor) ಭಾರತೀಯ ಸೇನೆ ಯಶಸ್ಸು ಸಾಧಿಸುವಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮಹತ್ವದ ಪಾತ್ರ ವಹಿಸಿದೆ ಎಂಬ ಅಚ್ಚರಿಯ ಸಂಗತಿ ಇದೀಗ ಬೆಳಕಿಗೆ ಬಂದಿದೆ. ಹೌದು ಸೇನೆಯ ಪ್ರಮುಖ ಘಟಕ, ಉಗ್ರರ ಲಾಂಚ್‌ಪ್ಯಾಡ್‌ಗಳ ಬಗ್ಗೆ ದಾಳಿಗೂ ಮುನ್ನ, ದಾಳಿಯ ವೇಳೆ ಮತ್ತು ದಾಳಿಯ ಬಳಿಕ ದಿನದ 24 ಗಂಟೆಗಳ ಕಾಲವೂ ಸತತವಾಗಿ ಪಾಕಿಸ್ತಾನದ ಮೇಲೆ ನಿಗಾ ಇಟ್ಟು, ಭಾರತೀಯ ಸೇನೆಗೆ ಅತ್ಯಮೂಲ್ಯ ಮಾಹಿತಿಯನ್ನು ನೀಡಿ ಎಂದು ಇಸ್ರೋ(ISRO ) ಅಧ್ಯಕ್ಷ ವಿ ನಾರಾಯಣನ್(V. Narayanan) ಹೇಳಿದ್ದಾರೆ. ಅಲ್ಲದೆ ಭಾರತದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು 10 ಉಪಗ್ರಹಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಅಗರ್ತಲಾದಲ್ಲಿ ನಡೆದ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ (ಸಿಎಯು) 5 ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ನಾರಾಯಣನ್, “ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮ ಉಪಗ್ರಹಗಳ ಮೂಲಕ ಸೇವೆ ಸಲ್ಲಿಸಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ನಾವು ಹೆಚ್ಚಿನದನ್ನು ಸಾಧಿಸಲು ಸಾಧ್ಯವಿಲ್ಲ" ಎಂದರು.

ಪಾಕ್‌ ಮೇಲೆ ದಾಳಿಗೆ ನಿರ್ಧರಿಸುತ್ತಲೇ ಭಾರತೀಯ ಸೇನೆ ಇಸ್ರೋದ ನೆರವು ಕೋರಿತ್ತು. ಅದರಂತೆ ಪಾಕಿಸ್ತಾನದ ಸೇನಾ ನೆಲೆಗಳು, ಉಗ್ರರ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳ ಅತ್ಯಂತ ಸ್ಪಷ್ಟ ಫೋಟೋಗಳನ್ನು ಇಸ್ರೋ ಸೆರೆಹಿಡಿದು ಸೇನೆಗೆ ನೀಡಿತ್ತು. ಇದು ಸೇನೆಗೆ ನಿಖರವಾಗಿ ಆ ಸ್ಥಳಗಳ ಮೇಲೆ ದಾಳಿ ನಡೆಸಲು ಅನುವು ಮಾಡಿಕೊಟ್ಟಿತು.

ಇಸ್ರೋದ ಉಪಗ್ರಹಗಳು 0.6 ಮೀ ನಿಂದ 0.35 ಮೀ. ರವರೆಗಿನ ಸ್ಪಷ್ಟತೆಯೊಂದಿಗೆ ಸೇನಾ ನೆಲೆ ಮತ್ತು ಭಯೋತ್ಪಾದಕ ಅಡಗುತಾಣದ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆ ಹಿಡಿದಿತ್ತು. ಅಲ್ಲದೆ ಮಿಲಿಟರಿ ನೆಲೆಗಳು, ಶಸ್ತ್ರಾಸ್ತ್ರ ಡಿಪೋಗಳು, ರಾಡಾರ್ ಕೇಂದ್ರಗಳು ಮತ್ತು ಪಾಕಿಸ್ತಾನಿ ಪಡೆಗಳ ಯುದ್ಧತಂತ್ರದ ಚಲನವಲನಗಳ ಮೇಲೆ ಕಣ್ಗಾವಲಿಟ್ಟಿತ್ತು.

ಇದನ್ನೂ ಓದಿ operation sindoor: ಕ್ಷಿಪಣಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಆಸೀಸ್‌ ಕ್ರಿಕೆಟಿಗರು

ಇಸ್ರೋ ಸಂಗ್ರಹಿಸಿದ ಈ ಮಾಹಿತಿಗಳು ಭಾರತದ ಕಾರ್ಯಾಚರಣೆಯಲ್ಲಿ ಶತ್ರುಗಳನ್ನು ಎದುರಿಸಲು, ರಾಡಾರ್‌ ಹಿಮ್ಮೆಟ್ಟಿಸಲು ಮತ್ತು ಪಾಕಿಸ್ತಾನ ಉಡಾಯಿಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ತಟಸ್ಥಗೊಳಿಸಲು ನೆರವಾದವು.