Pahalgam Terror Attack: ಪಾಕಿಸ್ತಾನಕ್ಕೆ ಮತ್ತೆ ಶಾಕ್ ಕೊಟ್ಟ ಭಾರತ; ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವು ಕಡಿತ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ರಾಜತಾಂತ್ರಿಕತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಾಕಿಸ್ತಾನದ ಜೊತೆ ಒಪ್ಪಂದ ಮಾಡಿಕೊಂಡಿದ್ದ ಸಿಂಧೂ ನದಿ ಒಪ್ಪಂದವನ್ನು ಭಾರತ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಇದೀಗ , ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಕಡಿತಗೊಳಿಸಿದೆ.


ನವದೆಹಲಿ: ಪಹಲ್ಗಾಮ್‌ನಲ್ಲಿ (Pahalgam Terror Attack) ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ರಾಜತಾಂತ್ರಿಕತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಾಕಿಸ್ತಾನದ ಜೊತೆ ಒಪ್ಪಂದ ಮಾಡಿಕೊಂಡಿದ್ದ ಸಿಂಧೂ ನದಿ ಒಪ್ಪಂದವನ್ನು ಭಾರತ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಇದೀಗ , ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ( Baglihar dam) ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಕಡಿತಗೊಳಿಸಿದೆ ಮತ್ತು ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲಿಯೂ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ತಿಳಿದು ಬಂದಿದೆ. ಜಗತ್ತಿನ ಅತ್ಯಂತ ಬರಗಾಲ ಪೀಡಿತ ದೇಶಗಳಲ್ಲೊಂದಾದ ಪಾಕಿಸ್ತಾನಕ್ಕೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಪಾಕಿಸ್ತಾನದ ಆರ್ಥಿಕತೆ ಮುಖ್ಯವಾಗಿ ಕೃಷಿ ಮೇಲೆ ಅವಲಂಬಿತವಾಗಿದೆ. ಭಾರತ ನೀರನ್ನು ತಡೆ ಹಿಡಿದರೆ ಪಾಕಿಸ್ತಾನದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಜಮ್ಮುವಿನ ರಾಂಬನ್‌ನಲ್ಲಿರುವ ಬಾಗ್ಲಿಹಾರ್ ಮತ್ತು ಉತ್ತರ ಕಾಶ್ಮೀರದ ಕಿಶನ್‌ಗಂಗಾದಲ್ಲಿ ಈ ಜಲವಿದ್ಯುತ್ ಅಣೆಕಟ್ಟುಗಳಿವೆ. ಬಾಗ್ಲಿಹಾರ್ ಅಣೆಕಟ್ಟು ಎರಡು ದೇಶಗಳ ನಡುವೆ ಇರುವ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನವು ಹಿಂದೆ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯನ್ನು ಕೋರಿತ್ತು. ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ಈ ನದಿಗಳು ನೀರಾವರಿ ಮತ್ತು ಕುಡಿಯುವ ನೀರಿನ ಸರಬರಾಜಿಗೆ ಅವುಗಳ ಮೇಲೆ ಅವಲಂಬಿತವಾಗಿರುವುದರಿಂದ ಅವುಗಳನ್ನು ದೇಶದ ಜೀವನಾಡಿಗಳೆಂದು ಪರಿಗಣಿಸಲಾಗುತ್ತದೆ.
ಭಾರತ ಮತ್ತು ಪಾಕಿಸ್ತಾನ ಈ ಎರಡು ರಾಷ್ಟ್ರಗಳು 1960ರಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದಕ್ಕೆ ಸಾಕ್ಷಿಯಾಗಿ ವಿಶ್ವ ಬ್ಯಾಂಕ್ ಕೂಡ ಸಹಿ ಹಾಕಿತ್ತು. ಈ ಒಪ್ಪಂದದ ಪ್ರಕಾರ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರನ್ನು ಎರಡೂ ದೇಶಗಳ ನಡುವೆ ಸಮಾನವಾಗಿ ಹಂಚಲು ತೀರ್ಮಾನಿಸಲಾಯಿತು. ಮೂರು ಪೂರ್ವ ನದಿಗಳಾದ ಬಿಯಾಸ್, ರಾವಿ ಮತ್ತು ಸಟ್ಲೆಜ್‌ನಿಂದ ಭಾರತಕ್ಕೆ ಮತ್ತು ಮೂರು ಪಶ್ಚಿಮ ನದಿಗಳಾದ ಚೆನಾಬ್, ಸಿಂಧೂ ಮತ್ತು ಝೀಲಂನಿಂದ ಪಾಕಿಸ್ತಾನಕ್ಕೆ ಸಿಂಧೂ ನದಿಯ ನೀರನ್ನು ಹಂಚಲಾಯಿತು.
ಈ ಸುದ್ದಿಯನ್ನೂ ಓದಿ: Omar Abdullah: ಪಹಲ್ಗಾಮ್ ದಾಳಿ ಬಳಿಕ ಮೊದಲ ಬಾರಿಗೆ ಮೋದಿ ಭೇಟಿ ಮಾಡಿದ ಒಮರ್ ಅಬ್ದುಲ್ಲಾ
ಈ ಒಪ್ಪಂದದ ಅಡಿಯಲ್ಲಿ ಪಶ್ಚಿಮ ನದಿಗಳಿಂದ ಭಾರತಕ್ಕೆ ನೀರಾವರಿ, ವಿದ್ಯುತ್ ಉತ್ಪಾದನೆ, ಮೀನು ಕೃಷಿ ಮೊದಲಾದವುಗಳಿಗೆ ಅನಿಯಮಿತವಾಗಿ ನೀರನ್ನು ಬಳಸಲು ಅನುಮತಿ ನೀಡಿದೆ. ನೀರಿನ ಬಳಕೆಗಾಗಿ ಎರಡು ದೇಶಗಳ ಹಕ್ಕು ಮತ್ತು ಬಾಧ್ಯತೆಗಳನ್ನು ಸದ್ಭಾವನೆ, ಸ್ನೇಹ ಮತ್ತು ಸಹಕಾರದ ಮನೋಭಾವದಿಂದ ಗುರುತಿಸುವಂತೆ ಒಪ್ಪಂದದಲ್ಲಿ ಹೇಳಲಾಗಿದೆ. ಭಾರತದ ಭಾಗದಲ್ಲಿರುವ ಅಣೆಕಟ್ಟು, ಬ್ಯಾರೇಜ್ ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ನಡೆಸಿ ನಾಶ ಪಡಿಸಿದರೆ ಈ ಒಪ್ಪಂದವನ್ನು ರದ್ದು ಮಾಡಬಹುದಾಗಿದೆ.