Physical Abuse: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕನಿಂದಲೇ ಅತ್ಯಾಚಾರ; ಸಂತ್ರಸ್ತೆ ಈಗ 3 ತಿಂಗಳ ಗರ್ಭಿಣಿ
Crime News: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಘಟನೆ ಆಂಧ್ರ ಪ್ರದೇಶದ ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಜಯರಾಜು ಎಂದು ಗುರುತಿಸಲಾಗಿದೆ.


ಅಮರಾವತಿ: ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಪ್ರಕರಣ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಆಂಧ್ರ ಪ್ರದೇಶದಲ್ಲಿಯೂ ಇಂತಹದ್ದೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ (Physical Abuse). ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೇ 9ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ. ಆಂಧ್ರ ಪ್ರದೇಶದ ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಜಯರಾಜು ಎಂದು ಗುರುತಿಸಲಾಗಿದೆ.
ಜಯರಾಜು 4 ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಮೂಲಗಳು ತಿಳಿಸಿವೆ.
3 ತಿಂಗಳಿನಿಂದ ಬಾಲಕಿ ಋತುಮತಿಯಾಗಿರಲಿಲ್ಲ. ಇದನ್ನು ಗಮನಿಸಿದ ಮನೆಯವರು ಆಕೆಯನ್ನು ವೈದ್ಯರಿಗೆ ಬಳಿ ಕರೆದೊಯ್ದ ವೇಳೆ ಅತ್ಯಾಚಾರದ ವಿಚಾರ ಬೆಳಕಿಗೆ ಬಂದಿದೆ. ವೈದ್ಯಕೀಯ ಪರೀಕ್ಷೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಖಚಿತವಾಗಿದೆ. ಸದ್ಯ ಬಾಲಕಿಯ ಪಾಲಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ರಾಯವಾರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Physical Abuse: ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ; ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!
10 ವರ್ಷದ ಬಾಲಕಿಯ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ
ಹೈದರಾಬಾದ್: ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲದ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳ ಮೇಲೆ ಆಕೆಯ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಇತ್ತೀಚೆಗೆ ನಡೆದಿತ್ತು. ಬಾಲಕಿಯನ್ನು ಮಹಬೂಬ್‌ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿತ್ತು.
5ನೇ ತರಗತಿಯ ವಿದ್ಯಾರ್ಥಿನಿಯಾದ ಬಾಲಕಿಯು ನಾಯಿ ಕಡಿತದಿಂದಾಗಿ ಸರ್ಕಾರಿ ವಸತಿ ನಿಲಯದಿಂದ ಇತ್ತೀಚೆಗೆ ಮನೆಗೆ ತೆರಳಿದ್ದಳು. ಜುಲೈ 25ರ ಮಧ್ಯಾಹ್ನ, ಆಕೆಯ ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದಳು. ಬಾಲಕಿಯು ಮನೆಯಲ್ಲಿ ಒಂಟಿಯಾಗಿ ಓದುತ್ತಿದ್ದಳು. ಆಗ ಕುಡಿದು ಬಂದ ಆಕೆಯ ತಂದೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ತಾಯಿಯ ದೂರಿನ ಆಧಾರದ ಮೇಲೆ, ಮರಿಕಲ್ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದೆ. ಆರೋಪಿ ತಂದೆ ಪರಾರಿಯಾಗಿದ್ದಾನೆ. ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲು ಶ್ರಮಿಸುತ್ತಿರುವುದಾಗಿ ಮರಿಕಲ್ ಠಾಣೆಯ ಎಸ್‌ಎಚ್‌ಒ ರಾಮು ತಿಳಿಸಿದ್ದಾರೆ.