ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಜೆಪಿ ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾಗೆ ಮತ್ತೊಂದು ಸಂಕಷ್ಟ: ದೆಹಲಿ ಕ್ರೈಮ್ ಬ್ರಾಂಚ್‌ನಿಂದ ಸಮನ್ಸ್ ಜಾರಿ

ಜಂತರ್ ಮಂತರ್ ನಲ್ಲಿನ ಪ್ರತಿಭಟನೆಗೆ ಸಂಬಂಧಿಸಿ ಕಾಕ್ರೋಚ್ ಜನತಾ ಪಕ್ಷದ ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಅವರಿಗೆ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯ ಕ್ರೈಮ್ ಬ್ರಾಂಚ್‌ನಿಂದ ಸಮನ್ಸ್ ಜಾರಿಯಾಗಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಜೌರಿ ಗಾರ್ಡನ್‌ನಲ್ಲಿರುವ ಕಚೇರಿಯಲ್ಲಿ ಅಪರಾಧ ವಿಭಾಗದ ಮುಂದೆ ಹಾಜರಾಗಲು ಆದೇಶಿಸಲಾಗಿದೆ.

ಸೌರವ್ ದಾಸ್, ಅಶುತೋಷ್ ರಂಕಾಗೆ ಹೊಸ ಸಂಕಷ್ಟ

ಸಂಗ್ರಹ ಚಿತ್ರ -

ನವದೆಹಲಿ: ತಿಹಾರ್ ಜೈಲಿನಿಂದ (tihar jail) ಬಿಡುಗಡೆಯಾದ ಒಂದು ದಿನದ ಅನಂತರ ಕಾಕ್ರೋಚ್ ಜನತಾ ಪಕ್ಷದ ( Cockroach Janata Party ) ವಕ್ತಾರರಾದ ಸೌರವ್ ದಾಸ್ (Sourav Das), ಅಶುತೋಷ್ ರಂಕಾ (ashutosh Ranka) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಸಿದ ಪ್ರತಿಭಟನೆಗೆ (Jantar Mantar protest) ಸಂಬಂಧಿಸಿ ದೆಹಲಿ ಪೊಲೀಸ್ ಅಪರಾಧ ವಿಭಾಗದವರು (Delhi Police Crime Branch) ಅವರಿಗೆ ಸಮನ್ಸ್ (summons) ಜಾರಿ ಮಾಡಿದ್ದಾರೆ. ಪ್ರತಿಭಟನೆಗೆ ನಿರ್ಬಂಧ ವಿಧಿಸಿರುವ ಜಂತರ್ ಮಂತರ್ ಗೆ ಅಕ್ರಮ ಪ್ರವೇಶ ಪ್ರಯತ್ನ ಮತ್ತು ರಾಷ್ಟ್ರಧ್ವಜ ಹಾರಿಸುವಿಕೆಗೆ ಸಂಬಂಧಿಸಿ ಅವರ ವಿಚಾರಣೆ ನಡೆಯಲಿದೆ.

ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಸಿಜೆಪಿಯ ಸಹ ಸಂಚಾಲಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರಿಗೆ ಸಂಕಷ್ಟ ಮುಂದುವರಿದಿದೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ಒಂದು ದಿನದ ಬಳಿಕ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಅವರ ಹೇಳಿಕೆಗಳನ್ನು ದಾಖಲಿಸಲು ದೆಹಲಿ ಪೊಲೀಸ್ ಅಪರಾಧ ವಿಭಾಗ ಇಬ್ಬರು ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಅಜಿಂಕ್ಯ ಶಿಂಧೆ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಪಿಡಿಎ ಕಾರ್ಯತಂತ್ರ ಅಖಿಲೇಶ್‌ ಕ್ಷೇತ್ರದಲ್ಲೇ ವಿಫಲವಾಯ್ತೇ ?

ಸೆಕ್ಷನ್ 188 ರ ಉಲ್ಲಂಘನೆ ಮತ್ತು ಖಾಸಗಿ ಆಸ್ತಿಯ ಮೇಲೆ ಅತಿಕ್ರಮಣ ಆರೋಪಗಳಿಗೆ ಸಂಬಂಧಿಸಿಗುರುವಾರ ಅವರ ವಿಚಾರಣೆ ನಡೆಯಲಿದೆ.ಇದಕ್ಕಾಗಿ ಮಧ್ಯಾಹ್ನ 12 ಗಂಟೆಗೆ ರಾಜೌರಿ ಗಾರ್ಡನ್‌ನಲ್ಲಿರುವ ಕಚೇರಿಯ ಅಪರಾಧ ವಿಭಾಗದ ಮುಂದೆ ಹಾಜರಾಗಲು ಆದೇಶಿಸಲಾಗಿದೆ.

ಕಳೆದ ಅಕ್ಟೋಬರ್ 13ರಂದು ನಡೆದ ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿ ಸಿಜೆಪಿ ನಾಯಕರ ವಿರುದ್ಧ ಎರಡು ಪ್ರಕರಣಗಳನ್ನು ದೆಹಲಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದರು. ಇದರಲ್ಲಿ ಒಂದು ಪ್ರಕರಣ ಕನ್ನಾಟ್ ಪ್ಲೇಸ್ ಮತ್ತು ಇನ್ನೊಂದು ಪ್ರಕರಣ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.

ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅವಿಧೇಯತೆ, ಅತಿಕ್ರಮಣ ಆರೋಪಿಸಿ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.

ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡನೇ ಎಫ್‌ಐಆರ್ ನಲ್ಲಿ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ, ಅವರ ಮೇಲೆ ಹಲ್ಲೆ ನಡೆಸಿದ ಆರೋಪಗಳಿಗೆ ಸಂಬಂಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಏಳು ದಿನಗಳ ನ್ಯಾಯಾಂಗ ಬಂಧನದ ಬಳಿಕ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಬುಧವಾರ ತಿಹಾರ್ ಜೈಲಿನಿಂದ ಹೊರಬಂದರು. ಸಾರ್ವಜನಿಕ ಶಾಂತಿಗೆ ಭಂಗ ಉಂಟಾ ಮಾಡುವ ಆತಂಕ ಮತ್ತು ಶಾಂತಿ ಒಪ್ಪಂದ ಉಲ್ಲಂಘನೆಯ ಆರೋಪದಲ್ಲಿ ಅವರು ಅಕ್ಟೋಬರ್ 14 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.

ಆಯುಧ ಪೂಜೆ ವೇಳೆ ಗುಂಡು ಹಾರಿಸಿದ ಐಪಿಎಸ್ ಅಧಿಕಾರಿ; ವಿಡಿಯೊ ವೈರಲ್‌

ಸಾರ್ವಜನಿಕ ಆದೇಶವಿರುವವರೆಗೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಕರೆ ನೀಡುವುದಿಲ್ಲ. ಭವಿಷ್ಯದಲ್ಲಿ ಯಾವುದೇ ಪ್ರತಿಭಟನೆಗಳು ನಡೆದರೂ ಅವು ಸಾಂವಿಧಾನಿಕ ಚೌಕಟ್ಟಿನೊಳಗೇ ಇರುವಂತೆ ನೋಡಿಕೊಳ್ಳುವುದಾಗಿ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಲಿಖಿತ ಭರವಸೆ ಮತ್ತು ತಲಾ 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಜಾಮೀನುದಾರರನ್ನು ಒದಗಿಸಿದ ಬಳಿಕ ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದರು. ಅಲ್ಲದೇ ತಮ್ಮ ಬಾಂಡ್‌ಗಳು ಮತ್ತು ಲಿಖಿತ ಭರವಸೆಗಳಿಗೆ ಬದ್ಧರಾಗಿರಬೇಕು ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ಅವರಿಗೆ ಸೂಚಿಸಿದೆ.