ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ರಾಹುಲ್‌ ಕಿಡಿ

Rahul Gandhi Slams Centre: ನೀವು ಭಾರತವನ್ನು ಮಾರಿದ್ದೀರಿ. ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ನೀವು ನಮ್ಮ ತಾಯಿ ಭಾರತ ಮಾತೆಯನ್ನು ಮಾರಿದ್ದೀರಿ ಎಂದು ಅವರು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದವನ್ನು ಉಲ್ಲೇಖಿಸುತ್ತಾ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶವನ್ನೇ ಮಾರಿದ್ದೀರಿ ಎಂದು ರಾಹುಲ್ ಗಾಂಧಿ ವಾಗ್ದಾಳಿ

ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ -

Priyanka P
Priyanka P Feb 11, 2026 6:31 PM

ನವದೆಹಲಿ ಫೆ.11: ಹಲವು ದಿನಗಳ ಗದ್ದಲದ ನಂತರ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ (Rahul Gandhi), ಇತ್ತೀಚೆಗೆ ಅಮೆರಿಕದೊಂದಿಗೆ ಮಾಡಿಕೊಂಡ ವ್ಯಾಪಾರ ಒಪ್ಪಂದದ (US-India trade deal) ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು ಎನ್ನುತ್ತಾ ಕಟುವಾದ ದಾಳಿಯನ್ನು ನಡೆಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ನಮ್ಮ ದೇಶವನ್ನು ಮಾರಾಟ ಮಾಡಿದೆ ಎಂದು ಆರೋಪಿಸಿದರು. ಅಮೆರಿಕದ ಸರಕುಗಳನ್ನು ಪ್ರವೇಶಿಸಲು ಅವಕಾಶ ನೀಡುವ ಮೂಲಕ ಸರ್ಕಾರವು ರೈತರ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಹೇಳಿದರು.

ನೀವು ಭಾರತವನ್ನು ಮಾರಿದ್ದೀರಿ. ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ನೀವು ನಮ್ಮ ತಾಯಿ ಭಾರತ ಮಾತೆಯನ್ನು ಮಾರಿದ್ದೀರಿ ಎಂದು ಅವರು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದವನ್ನು ಉಲ್ಲೇಖಿಸುತ್ತಾ ಹೇಳಿದರು.

ಭಾರತದ ಇಂಧನ ಭದ್ರತೆಯನ್ನು ಅಮೆರಿಕಕ್ಕೆ ಹಸ್ತಾಂತರಿಸಿ ರೈತರ ಹಿತಾಸಕ್ತಿಗಳಿಗೆ ಧಕ್ಕೆ ತರುವುದರೊಂದಿಗೆ ಇದು ಸಂಪೂರ್ಣ ಶರಣಾಗತಿಯಂತೆಯೇ ಆಗಿದೆ ಎಂದು ಅವರು ಹೇಳಿದರು. ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದವನ್ನು ಇಂಡಿಯಾ ಬ್ಲಾಕ್ ಸರ್ಕಾರವಿದ್ದು, ಮಾತುಕತೆ ನಡೆಸಿದ್ದರೆ, ಡೊನಾಲ್ಡ್ ಟ್ರಂಪ್ ಅವರಿಗೆ ಭಾರತವನ್ನು ಸಮಾನವಾಗಿ ಪರಿಗಣಿಸಬೇಕು ಎಂದು ತಿಳಿಸುತ್ತಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.

ಯಾವುದೇ ದೇಶದಿಂದ ತೈಲ ಖರೀದಿಸುವ ಸ್ವಾತಂತ್ರ್ಯ ಭಾರತಕ್ಕಿದೆ; ಡೊನಾಲ್ಡ್‌ ಟ್ರಂಪ್‌ಗೆ ತಿರುಗೇಟು ಕೊಟ್ಟ ರಷ್ಯಾ?

ರೈತರ ಹಿತಾಸಕ್ತಿಗಳಿಗೆ ಧಕ್ಕೆ ತರಲಾಗಿದೆ ಮತ್ತು ಅಮೆರಿಕದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗಳಿಗೆ ಪ್ರವಾಹದಂತೆ ಹರಿದುಬರುವುದರಿಂದ ರೈತರು ಬಿರುಗಾಳಿಯನ್ನು ಎದುರಿಸುತ್ತಿದ್ದಾರೆ. ಭಾರತೀಯ ಜವಳಿ ಉದ್ಯಮವು ಅಂತ್ಯಗೊಂಡಿತು ಎಂದು ಅವರು ಆರೋಪಿಸಿದರು.

ನಾವು ಪ್ರಕ್ಷುಬ್ಧ ಸ್ಥಿತಿಗೆ ಕಾಲಿಡುತ್ತಿದ್ದೇವೆ ಮತ್ತು ರಾಷ್ಟ್ರವು ಮಾರಾಟವಾಗಿದೆ. ದೇಶವು ಮಾರಾಟವಾಗಿದೆ, ಅದರ ದತ್ತಾಂಶಗಳು ಮಾರಾಟವಾಗಿವೆ ಮತ್ತು ರೈತರೂ ಮಾರಾಟವಾಗಿದ್ದಾರೆ ಎಂದು ರಾಹುಲ್ ಗಾಂಧಿಯು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವಾಗ ಪುನರುಚ್ಚರಿಸಿದರು.

ರಾಹುಲ್ ಗಾಂಧಿಯ ಭಾಷಣ ಮುಗಿದ ನಂತರ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತವನ್ನು ಯಾರೂ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಭಾರತದ ಅತ್ಯಂತ ಬಲಿಷ್ಠ ಪ್ರಧಾನಿ ಎಂದು ಅವರು ಪ್ರತಿಪಾದಿಸಿದರು. ಭಾರತ ಪ್ರಗತಿ ಹೊಂದುತ್ತಿರುವುದರಿಂದ ಕಾಂಗ್ರೆಸ್ ದುಃಖಿತವಾಗಿದೆ ಎಂದು ಹೇಳಿದರು.

ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದ: ರಫ್ತುಗಳ ಮೇಲೆ ಶೇಕಡಾ 18ರಷ್ಟು ಸುಂಕದೊಂದಿಗೆ ಭಾರತ ಯಾವ ಸ್ಥಾನದಲ್ಲಿದೆ?

ಭಾರತ–ಅಮೆರಿಕ ನಡುವಿನ ದೀರ್ಘಕಾಲದ ಸುಂಕ ವಿವಾದಕ್ಕೆ ಇತ್ತೀಚೆಗೆ ತೆರೆ ಬಿದ್ದಿದ್ದು, ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಎರಡೂ ದೇಶಗಳು ಒಪ್ಪಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ರಫ್ತುಗಳ ಮೇಲಿನ ಸುಂಕವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ. 50ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ್ದರು.

ಪ್ರಧಾನಿ ಮೋದಿ ಅವರೊಂದಿಗಿನ ಚರ್ಚೆಯ ನಂತರ ಪರಸ್ಪರ ಸುಂಕಗಳನ್ನು ಕಡಿಮೆ ಮಾಡಿರುವುದಾಗಿ ಘೋಷಿಸಿದ ಟ್ರಂಪ್, "ಪ್ರಧಾನಿ ಮೋದಿ ಅವರೊಂದಿಗಿನ ಸ್ನೇಹ ಮತ್ತು ಗೌರವದಿಂದ, ತಕ್ಷಣವೇ ಜಾರಿಗೆ ಬರುವಂತೆ, ನಾವು ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿದ್ದೇವೆ" ಎಂದಿದ್ದಾರೆ.