ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಸ್ಸಾಂ ವಿಧಾನ ಸಭಾ ಚುನಾವಣೆ: ಈ ಬಾರಿ ಅಧಿಕಾರವನ್ನು ಉಳಿಸಿಕೊಳ್ಳುತ್ತಾ ಬಿಜೆಪಿ ?

2026ರ ವಿಧಾನ ಸಭಾ ಚುನಾವಣೆಗೆ ಅಸ್ಸಾಂ ಸಜ್ಜಾಗಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 2016ರಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಇಲ್ಲಿ ಮತ್ತೆ ಮರಳಿ ಅಧಿಕಾರಕ್ಕೇರುವ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ 2016ರಿಂದ ಅಧಿಕಾರದಲ್ಲಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ.

ಅಸ್ಸಾಂನಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೋರಾಟ

ಸಂಗ್ರಹ ಚಿತ್ರ -

ಗುವಾಹಟಿ: ವಿಧಾನಸಭಾ ಚುನಾವಣೆ 2026ಕ್ಕೆ (Assembly election 2026) ಅಸ್ಸಾಂನಲ್ಲಿ (assam) ಕ್ಷಣಗಣನೆ ಆರಂಭವಾಗಿದೆ. ಕಾಂಗ್ರೆಸ್ (Congress) ಇಲ್ಲಿ ಮತ್ತೆ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದರೆ, ಬಿಜೆಪಿ (BJP) ಅಧಿಕಾರ ಉಳಿಸಿಕೊಳ್ಳಲು ಪೈಪೋಟಿ ನಡೆಸಲಿದೆ. ಅಸ್ಸಾಂನಲ್ಲಿ(Assam Assembly Election) ಮೊದಲ ಬಾರಿಗೆ 2016ರ ಚುನಾವಣೆ ಗೆದ್ದು ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಇದರ ಬಳಿಕ 2021ರ ಚುನಾವಣೆಯನ್ನೂ ಗೆದ್ದುಕೊಂಡಿತ್ತು. ಇದೀಗ ಮತ್ತೆ ಇಲ್ಲಿ ಅಧಿಕಾರ ಉಳಿಸಿಕೊಳ್ಳಲು ಈ ಬಾರಿ ಕಣದಲ್ಲಿದೆ. ಏಪ್ರಿಲ್ 9ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಸತತ ಮೂರನೇ ಅವಧಿಗೆ ಗೆಲುವಿನ ನಿರೀಕ್ಷೆಯಲ್ಲಿದೆ.

ಅಸ್ಸಾಂನ 2016ರ ವಿಧಾನಸಭಾ ಚುನಾವಣೆಯು ಒಂದು ಮಹತ್ವದ ತಿರುವಾಗಿದೆ. 15 ವರ್ಷಗಳ ಕಾಂಗ್ರೆಸ್ ಆಡಳಿತ ಕೊನೆಗೊಂಡು ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಈ ಸಂದರ್ಭದಲ್ಲಿ ಅಕ್ರಮ ವಲಸೆ ವಿಚಾರದಲ್ಲಿ ಚುನಾವಣಾ ಪ್ರಚಾರ ನಡೆಸಿ ಸರ್ಬಾನಂದ ಸೋನೋವಾಲ್ ನೇತೃತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ತಮಿಳುನಾಡಿನಲ್ಲಿ ಈ ಬಾರಿ ಎಐಎಡಿಎಂಕೆಯತ್ತ ಮತದಾರರ ಚಿತ್ತ; ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು?

126 ಸ್ಥಾನಗಳಲ್ಲಿ 60 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. 126 ಸದಸ್ಯರ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 64 ಸದಸ್ಯ ಬಲವು ಬಿಜೆಪಿಗೆ ಬೇಕಾಗಿದ್ದರಿಂದ ಅದು ಮಿತ್ರಪಕ್ಷಗಳಾದ ಅಸ್ಸಾಂ ಗಣ ಪರಿಷತ್ (ಎಜಿಪಿ) ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಬೆಂಬಲವನ್ನು ಪಡೆದು ಅಧಿಕಾರದ ಗದ್ದುಗೆ ಏರಿತ್ತು. ಸರ್ಬಾನಂದ ಸೋನೋವಾಲ್ ಅವರು ಮೊದಲ ಬಾರಿಗೆ ಬಿಜೆಪಿ ಮುಖ್ಯಮಂತ್ರಿಯಾದರು. 2011ರಲ್ಲಿ ಕೇವಲ ಐದು ಸ್ಥಾನ ಗಳಿಸಿದ್ದ ಬಿಜೆಪಿ 2016 ರಲ್ಲಿ 60 ಸ್ಥಾನವನ್ನು ಗಳಿಸಿತ್ತು.

2001ರಿಂದ ಅಸ್ಸಾಂನಲ್ಲಿ ಮುಖ್ಯಮಂತ್ರಿ ತರುಣ್ ಗೊಗೊಯ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಅದು ಬಿಪಿಎಫ್‌ನ ಪ್ರತಿಸ್ಪರ್ಧಿ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಜೊತೆ ಮೈತ್ರಿ ಮಾಡಿಕೊಂಡಿತ್ತು. 2016ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಕೇವಲ 26 ಸ್ಥಾನಗಳನ್ನು ಉಳಿಸಿಕೊಳ್ಳಲು ಮಾತ್ರ ಸಾಧ್ಯವಾಯಿತು.

ಅನಂತ್ ಅಂಬಾನಿಯಿಂದ ಕೇರಳದ ಎರಡು ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ 18 ಕೋಟಿ ರುಪಾಯಿ ದೇಣಿಗೆ

2021ರ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ 60 ಸ್ಥಾನಗಳನ್ನು ಗೆದ್ದು ಮಿತ್ರಪಕ್ಷಗಳೊಂದಿಗೆ ಸರ್ಕಾರವನ್ನು ರಚಿಸಿತು. ಈ ಬಾರಿ ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂನ 15 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೀಗ ಮತ್ತೆ ಅಸ್ಸಾಂ ಚುನಾವಣೆಯನ್ನು ಎದುರಿಸುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೇರಲು ಸಾಧ್ಯವಾದ ಎಲ್ಲ ತಂತ್ರಗಳನ್ನು ರೂಪಿಸಿಕೊಂಡಿದೆ. ಈ ಬಾರಿ ಮತದಾರರು ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕು.