ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: ಸರ್ವಪಕ್ಷಗಳ ಸಭೆ ; ಪಹಲ್ಗಾಮ್ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

ಗುರುವಾರ ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ಕಾರ ಭದ್ರತಾ ವೈಫಲ್ಯವನ್ನು ಒಪ್ಪಿಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. "ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ಎಲ್ಲೋ ಕೆಲವು ಕಡೆ ಲೋಪಗಳಾಗಿವೆ ಎಂದು ಅಮಿತ್ ಶಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾರೆ.

ಪಹಲ್ಗಾಮ್ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

Profile Vishakha Bhat Apr 24, 2025 10:12 PM

ನವದೆಹಲಿ: ಗುರುವಾರ ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ಕಾರ ಭದ್ರತಾ ವೈಫಲ್ಯವನ್ನು ಒಪ್ಪಿಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. "ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ಎಲ್ಲೋ ಕೆಲವು ಕಡೆ ಲೋಪಗಳಾಗಿವೆ ಎಂದು ಅಮಿತ್ ಶಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಘಟನೆಯ ಕುರಿತು ರಾಜಕೀಯ ಮತ್ತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದ ನಂತರ, ವಿರೋಧ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು.

ಸಭೆಯ ಸಮಯದಲ್ಲಿ, ಹಲವಾರು ವಿರೋಧ ಪಕ್ಷಗಳು ಭದ್ರತಾ ಶಿಷ್ಟಾಚಾರಗಳ ಸ್ಪಷ್ಟ ವೈಫಲ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದವು. ಭದ್ರತಾ ಪಡೆಗಳು ಎಲ್ಲಿದ್ದವು? ಕೇಂದ್ರ ಮೀಸಲು ಪೊಲೀಸ್ ಪಡೆ ಎಲ್ಲಿತ್ತು? ಎಂದು ಹಲವಾರು ನಾಯಕರು ಕೇಳಿದ್ದಾರೆ . ಇದಕ್ಕೆ ಪ್ರತಿಕ್ರಿಯೆಯಾಗಿ, ಜೂನ್‌ನಲ್ಲಿ ಅಮರನಾಥ ಯಾತ್ರೆಯವರೆಗೆ ಸಾಂಪ್ರದಾಯಿಕವಾಗಿ ನಿರ್ಬಂಧಿತವಾಗಿರುವ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಬೈಸರನ್ ಪ್ರದೇಶವನ್ನು ತೆರೆಯುವ ಮೊದಲು ಸ್ಥಳೀಯ ಅಧಿಕಾರಿಗಳು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿಲ್ಲ ಎಂದು ಸರ್ಕಾರ ಹೇಳಿದೆ ಎಂದು ವರದಿಯಾಗಿದೆ.

ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಲು ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಭಾಗವಹಿಸಿದ್ದರು.

ಈ ಸುದ್ದಿಯನ್ನೂ ಓದಿ: Assam MLA: ಪುಲ್ವಾಮಾ, ಪಹಲ್ಗಾಮ್ ದಾಳಿ, "ಸರ್ಕಾರದ ಪಿತೂರಿ" ; ವಿವಾದಾತ್ಮಕ ಹೇಳಿಕೆ ನೀಡಿದ ಅಸ್ಸಾಂ ಶಾಸಕನ ಬಂಧನ

ಸಭೆಯ ನಂತರ ಮಾತನಾಡಿದ ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು 26 ಜನರ ಸಾವಿಗೆ ಕಾರಣವಾದ ಹತ್ಯಾಕಾಂಡಕ್ಕೆ ಪ್ರತ್ಯುತ್ತರ ನೀಡಲೇ ಬೇಕು ಅದಕ್ಕಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ವಿರೋಧ ಪಕ್ಷವು ಸಂಪೂರ್ಣ ಬೆಂಬಲವನ್ನು ನೀಡಿದೆ ಎಂದು ಹೇಳಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಲ್ಲಿದ್ದರು. ನಾವೆಲ್ಲರೂ ದಾಳಿಯನ್ನು ಖಂಡಿಸಿದ್ದೇವೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದಕ್ಕೆ ಬೆಂಬಲವಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ನಾವು ಹೇಳಿದ್ದೇವೆ ಎಂದು ಹೇಳಿದ್ದಾರೆ.