Train Tragedy: ದುರಂತದ ಬಳಿಕ ಎಚ್ಚೆತ್ತ ಇಲಾಖೆ; ಮುಂಬೈನ ಸಬರ್ಬನ್ ರೈಲುಗಳಿಗೆ ಶೀಘ್ರದಲ್ಲೇ ಸ್ವಯಂಚಾಲಿತ ಬಾಗಿಲು ವ್ಯವಸ್ಥೆ
ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ (Train Tragedy) ಬಿದ್ದು ಆರು ಪ್ರಯಾಣಿಕರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ರೈಲ್ವೆ ಸಚಿವಾಲಯ, ಮುಂಬೈ ಸಬರ್ಬನ್ಗಾಗಿ ಅಸ್ತಿತ್ವದಲ್ಲಿರುವ ಮತ್ತು ಹೊಸ ಲೋಕಲ್ ರೈಲುಗಳ ಎಲ್ಲಾ ಬೋಗಿಗಳಲ್ಲಿ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚುವ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.


ಮುಂಬೈ: ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನಿಂದ (Train Tragedy) ಬಿದ್ದು ಆರು ಪ್ರಯಾಣಿಕರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ರೈಲ್ವೆ ಸಚಿವಾಲಯ, ಮುಂಬೈ ಸಬರ್ಬನ್ಗಾಗಿ ಅಸ್ತಿತ್ವದಲ್ಲಿರುವ ಮತ್ತು ಹೊಸ ಲೋಕಲ್ ರೈಲುಗಳ ಎಲ್ಲಾ ಬೋಗಿಗಳಲ್ಲಿ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚುವ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ಸಂಭವಿಸಿದ ದುರಂತದ ನಂತರ, ಮುಂಬೈ ಸಬರ್ಬನ್ಗಾಗಿ ತಯಾರಾಗುತ್ತಿರುವ ಎಲ್ಲಾ ಲೋಕಲ್ ರೈಲುಗಳಲ್ಲಿ ಸ್ವಯಂಚಾಲಿತ ಬಾಗಿಲು ಮುಚ್ಚುವ ಸೌಲಭ್ಯ ಕಲ್ಪಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ಹೇಳಿದ್ದಾರೆ.
ಇದಲ್ಲದೆ, ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ರೇಕ್ಗಳನ್ನು ಮರುವಿನ್ಯಾಸಗೊಳಿಸಲಾಗುವುದು ಮತ್ತು ಮುಂಬೈ ಸಬರ್ಬನ್ನ ಈ ರೇಕ್ಗಳಲ್ಲಿ ಬಾಗಿಲು ಮುಚ್ಚುವ ಸೌಲಭ್ಯವನ್ನು ಒದಗಿಸಲಾಗುವುದು ಅವರು ಮಾಹಿತಿ ನೀಡಿದ್ದಾರೆ. ಸುರಕ್ಷತೆಯು ರೈಲ್ವೆಯ ಪ್ರಮುಖ ಆದ್ಯತೆಯಾಗಿದೆ ಮತ್ತು ಅಂತಹ ಅಪಘಾತಗಳು ಮರುಕಳಿಸದಂತೆ ತಡೆಯಲು ಎಲ್ಲಾ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಒತ್ತಿ ಹೇಳಿದರು.
ಮುಂಬೈನಲ್ಲಿ ಮುಂಬ್ರಾ ಮತ್ತು ದಿವಾ ನಿಲ್ದಾಣಗಳ ನಡುವೆ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದು ಆರು ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ರೈಲ್ವೆ ಮಂಡಳಿಯು ಮುಂಬೈನ ಉಪನಗರ ರೈಲು ಜಾಲಕ್ಕೆ ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿತ್ತು. ಟಿಟ್ವಾಲಾದಲ್ಲಿ ರೈಲು ಹತ್ತಿದ ದತ್ತಾಂಶ ನಿರ್ವಾಹಕ ತುಷಾರ್ ಭಗತ್ ಗಾಯಗೊಂಡಿದ್ದಾರೆ. ತಲೆ ಮತ್ತು ಕಾಲಿಗೆ ಪೆಟ್ಟಾಗಿದೆ . ಏನಾಯಿತು ಎಂದು ನನಗೆ ನಿಖರವಾಗಿ ತಿಳಿದಿಲ್ಲ. ಎಕ್ಸ್ಪ್ರೆಸ್ ರೈಲು ನಮ್ಮನ್ನು ದಾಟಿ ಹೋಯಿತು. ನಾವು ಮುಂಬ್ರಾ ಬಳಿಯ ತಿರುವಿಗೆ ಬಂದಾಗ, ಬಾಗಿಲಲ್ಲಿ ನಿಂತಿದ್ದವರು ಜನದಟ್ಟಣೆಯಿಂದ ನಿಲ್ಲೋಕೂ ಆಗದೆ ಒತ್ತಡಕ್ಕೆ ಒಳಗಾದರು. ಅವರು ತಮ್ಮನ್ನು ರಕ್ಷಿಸಿಕೊಳ್ಳಲು ನಮ್ಮನ್ನು ಹಿಡಿದುಕೊಂಡರು. ನಾವೆಲ್ಲ ಕಂಬಿ ಹಿಡಿದಿದ್ದೆವು, ಆದರೂ ಬಿದ್ದೆವು. ಆ ನಂತರ ಏನಾಯಿತು ಎಂದು ನನಗೆ ನೆನಪಿಲ್ಲ" ಎಂದು ರೈಲಿನಲ್ಲಿ ಇದ್ದ ತುಷಾರ್ ಭಗತ್ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Train tragedy: ತುಂಬಿ ತುಳುಕುತ್ತಿದ್ದ ಲೋಕಲ್ ಟ್ರೈನ್ನಿಂದ ಹಳಿಗೆ ಬಿದ್ದ ಹತ್ತಾರು ಮಂದಿ; ಐವರ ದುರ್ಮರಣ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. "ಇದು ಅತ್ಯಂತ ದುರದೃಷ್ಟಕರ ಘಟನೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ" ಎಂದು ಅವರು ಹೇಳಿದ್ದಾರೆ.